AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ಬಹುನಿರೀಕ್ಷಿತ ಮಹಿಳಾ ಐಪಿಎಲ್ ವೇಳಾಪಟ್ಟಿ ಪ್ರಕಟ: ಎಷ್ಟು ತಂಡಗಳು?, ಹರಾಜು ಪ್ರಕ್ರಿಯೆ ಯಾವಾಗ?

Womens Premier League 2023: ಮಹಿಳಾ ಪ್ರೀಮಿಯರ್ ಲೀಗ್ ಕುರಿತು ಮಾಹಿತಿ ನೀಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಅಧ್ಯಕ್ಷ ಅರುಣ್ ಧುಮಾಲ್, ಈ ಟೂರ್ನಿ ಮಾರ್ಚ್​ 4 ರಂದು ಆರಂಭಗೊಂಡು ಮಾರ್ಚ್​ 24ರಂದು ಅಂತ್ಯಗೊಳ್ಳಲಿದೆ ಎಂದು ಹೇಳಿದ್ದಾರೆ.

WPL 2023: ಬಹುನಿರೀಕ್ಷಿತ ಮಹಿಳಾ ಐಪಿಎಲ್ ವೇಳಾಪಟ್ಟಿ ಪ್ರಕಟ: ಎಷ್ಟು ತಂಡಗಳು?, ಹರಾಜು ಪ್ರಕ್ರಿಯೆ ಯಾವಾಗ?
WPL 2023
TV9 Web
| Updated By: Vinay Bhat|

Updated on: Feb 07, 2023 | 7:45 AM

Share

ಬಹುನಿರೀಕ್ಷಿತ ಮಹಿಳೆಯ ಐಪಿಎಲ್ ಮಹಿಳಾ ಪ್ರೀಮಿಯರ್ ಲೀಗ್​ಗೆ (WPL 2023) ಮುಹೂರ್ತ ನಿಗದಿಯಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಚೊಚ್ಚಲ ಆವೃತ್ತಿಯ ಡಬ್ಲ್ಯೂಪಿಎಲ್ ಇದೇ ಮಾರ್ಚ್​ 4ರಿಂದ ಆರಂಭಗೊಳ್ಳಲಿದೆ ಎಂದು ತಿಳಿಸಿದ. ಮಹಿಳಾ ಐಸಿಸಿ ಟಿ20 ವಿಶ್ವಕಪ್ (WT20WC) ಮುಗಿದ ಬಳಿಕ ಈ ವನಿತೆಯರ ಐಪಿಎಲ್ ಆರಂಭವಾಗಲಿದೆ. ಮಹಿಳಾ ಐಪಿಎಲ್​ಗಾಗಿ ಈಗಾಗಲೇ ಐದು ತಂಡಗಳು ಫ್ರಾಂಚೈಸಿ ಹಕ್ಕು ಪಡೆದುಕೊಂಡಿದ್ದು, ನೂರಾರು ಮಹಿಳಾ ಕ್ರಿಕೆಟಿಗರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಹರಾಜು (WIPL Auction) ದಿನಾಂಕ ಕೂಡ ಪ್ರಕಟವಾಗಿದ್ದು, ಬಲಿಷ್ಠ ತಂಡಗಳನ್ನು ಕಟ್ಟಲು ವಿವಿಧ ಫ್ರಾಂಚೈಸಿಗಳು ರಣತಂತ್ರ ಹೆಣೆದಿದ್ದಾರೆ. ಮಹಿಳಾ ಪ್ರೀಮಿಯರ್ ಲೀಗ್ ಕುರಿತ ಎಲ್ಲ ಮಾಹಿತಿ ಇಲ್ಲಿದೆ.

ಮಹಿಳಾ ಪ್ರೀಮಿಯರ್ ಲೀಗ್ ಕುರಿತು ಮಾಹಿತಿ ನೀಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಅಧ್ಯಕ್ಷ ಅರುಣ್ ಧುಮಾಲ್, ಈ ಟೂರ್ನಿ ಮಾರ್ಚ್​ 4 ರಂದು ಆರಂಭಗೊಂಡು ಮಾರ್ಚ್​ 24ರಂದು ಅಂತ್ಯಗೊಳ್ಳಲಿದೆ ಎಂದು ಹೇಳಿದ್ದಾರೆ. ಚೊಚ್ಚಲ ಆವೃತ್ತಿ ಸಂಪೂರ್ಣ ಮುಂಬೈನ ಎರಡು ಕ್ರೀಡಾಂಗಣ ಬ್ರಬೊರ್ನ್​ ಹಾಗೂ ಡಿವೈ ಪಾಟೀಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯಲಿದೆ ಎಣದಯ ಹೇಳಿದ್ದಾರೆ.

ಈಗಾಗಲೇ ಸುಮಾರು 1500 ಆಟಗಾರ್ತಿಯರು ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ ಗರಿಷ್ಠ 90 ಆಟಗಾರರು ಮಾತ್ರ ಆಡುವ ಅವಕಾಶ ಪಡೆಯಲಿದ್ದಾರೆ. ಪ್ರತಿ ತಂಡಕ್ಕೂ 12 ಕೋಟಿ ರೂ. ಪರ್ಸ್​ ನಿಗದಿ ಮಾಡಲಾಗಿದೆ. ಈ ಮೊತ್ತದಲ್ಲಿ ಫ್ರಾಂಚೈಸಿಗಳು ಕನಿಷ್ಠ 15 ಪ್ಲೇಯರ್​ಗಳನ್ನು ಗರಿಷ್ಠ 18 ಆಟಗಾರ್ತಿಯರನ್ನು ಖರೀಸಲು ಅವಕಾಶವಿದೆ. ಪ್ರತಿ ತಂಡಗಳು ಐದು ವಿದೇಶಿ ಆಟಗಾರರನ್ನು ಹೊಂದಬಹುದು.

ಇದನ್ನೂ ಓದಿ
Image
ವೆಸ್ಟ್ ಇಂಡೀಸ್ ಆರಂಭಿಕರಿಂದ ಟೆಸ್ಟ್​ ಕ್ರಿಕೆಟಿಗನಲ್ಲಿ ಹೊಸ ಇತಿಹಾಸ ಸೃಷ್ಟಿ
Image
Heinrich Klaasen: ಕ್ಲಾಸೆನ್ ಕ್ಲಾಸ್…43 ಎಸೆತಗಳಲ್ಲಿ ಸ್ಪೋಟಕ ಶತಕ
Image
Tagenarine Chanderpaul: ತಂದೆಯ ಹಾದಿಯಲ್ಲಿ ಮಗ..ದ್ವಿಶತಕ ಸಿಡಿಸಿ ಮಿಂಚಿದ ಮಾಜಿ ಕ್ರಿಕೆಟಿಗನ ಪುತ್ರ
Image
PM Modi: ಪ್ರಧಾನಿ ಮೋದಿಗೆ ಲಿಯೋನೆಲ್ ಮೆಸ್ಸಿ ಜೆರ್ಸಿ ಗಿಫ್ಟ್ ನೀಡಿದ ವೈಪಿಎಫ್​

Shikhar Dhawan: ಕಿಚ್ಚ ಸುದೀಪ್​-ಶಿಖರ್​ ಧವನ್​ ನಡುವಿನ ಆತ್ಮೀಯತೆಗೆ ಈ ಫೋಟೋಗಳೇ ಸಾಕ್ಷಿ; ಇಲ್ಲಿದೆ ಗ್ಯಾಲರಿ

ಮಹಿಳಾ ಪ್ರೀಮಿಯರ್ ಲೀಗ್ 2023ರ ಹರಾಜಿನಲ್ಲಿ ಅನ್‌ಕ್ಯಾಪ್ಡ್ ಆಟಗಾರ್ತಿಯರ ಮೂಲ ಬೆಲೆ 10 ಲಕ್ಷ ರೂ. ನಿಂದ 20 ಲಕ್ಷ ರೂ. ನಡುವೆ ಇರಲಿದೆ. ಅಂತೆಯೆ ಕ್ಯಾಪ್ಡ್ ಆಟಗಾರ್ತಿಯರ ಮೂಲ ಬೆಲೆ 30 ಲಕ್ಷ ರೂ. ನಿಂದ 50 ಲಕ್ಷ ರೂ. ನಿಗದಿ ಮಾಡಲಾಗಿದೆ. ಪ್ರತಿ ತಂಡ ತಲಾ 12 ಕೋಟಿ ರೂ. ಗಳನ್ನು ಹೊಂದಿರುತ್ತದೆ. ಈ ಟೂರ್ನಿಯಲ್ಲಿ ಒಟ್ಟು 22 ಪಂದ್ಯಗಳು ನಡೆಯಲಿದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್ ಪ್ರವೇಶಿಸಿದರೆ ಎರಡು ಮತ್ತು ಮೂರನೇ ಸ್ಥಾನ ಪಡೆದ ತಂಡ ಫೈನಲ್​ ಪ್ರವೇಶಿಸಲು ಹೋರಾಡಲಿದೆ.

ಬೆಂಗಳೂರು, ದೆಹಲಿ, ಗುಜರಾತ್ ಜೈಂಟ್ಸ್, ಲಕ್ನೋ ಮತ್ತು ಮುಂಬೈ ಹೀಗೆ ಒಟ್ಟು ಐದು ತಂಡಗಳು ಮಹಿಳಾ ಪ್ರೀಮಿಯರ್ ಲೀಗ್ 2023ರ ಉದ್ಘಾಟನಾ ಋತುವಿನಲ್ಲಿ ಭಾಗವಹಿಸಲಿವೆ. ಹರಾಜು ಪ್ರಕ್ರಿಯೆ ಫೆಬ್ರವರಿ 13ರಂದು ಮುಂಬೈನಲ್ಲಿ ಏರ್ಪಡಿಸಲಾಗಿದೆ. ಈ ಕೂಟದ ಮಾಧ್ಯಮ ಹಕ್ಕನ್ನು 951 ಕೋಟಿ ರೂ. ಗಳಿಗೆ ಬಿಸಿಸಿಐ ಮಾರಾಟ ಮಾಡಿದ್ದು ಮಹಿಳಾ ಪ್ರೀಮಿಯರ್‌ ಲೀಗ್‌ ಇದೀಗ ವಿಶ್ವದ ಅತ್ಯಂತ ಶ್ರೀಮಂತ ಲೀಗ್‌ಗಳಲ್ಲಿ ಎರಡನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಪುರುಷರ ಐಪಿಎಲ್‌ ಇದೆ.

ಮಹಿಳಾ ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಹರಾಜು ಪ್ರಕ್ರಿಯೆಯನ್ನು Sports 18 ಟಿವಿ ಚಾನೆಲ್‌ಗಳಲ್ಲಿ ನೇರಪ್ರಸಾರ ಕಾಣಲಿದೆ. Jio Cinema ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ನೋಡಬಹುದು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು