WPL 2023 FINAL: ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್ ಫೈಟ್ಗೆ ವೇದಿಕೆ ಸಜ್ಜು: ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಮಾಹಿತಿ
Delhi Capitals vs Mumbai Indians: ಲೀಗ್ ಹಂತದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು.
WPL 2023 FINAL: ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಮಾರ್ಚ್ 26 ರಂದು (ಭಾನುವಾರ) ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಲೀಗ್ ಸುತ್ತಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ನೇರವಾಗಿ ಫೈನಲ್ ಪ್ರವೇಶಿಸಿತ್ತು. ಇನ್ನು ಅಂಕಪಟ್ಟಿಯಲ್ಲಿ 2ನೇ ಸ್ಥಾನ ಹಾಗೂ 3ನೇ ಸ್ಥಾನ ಪಡೆದಿದ್ದ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಎಲಿಮಿನೇಟರ್ ಪಂದ್ಯವನ್ನಾಡಿತ್ತು. ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ 72 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ಫೈನಲ್ಗೆ ಪ್ರವೇಶಿಸಿದೆ.
ಇದೀಗ ಭಾನುವಾರ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಆಸ್ಟ್ರೇಲಿಯಾ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಮುನ್ನಡೆಸುತ್ತಿದ್ದರೆ, ಟೀಮ್ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ಸಾರಥ್ಯವಹಿಸಿದ್ದಾರೆ.
ಲೀಗ್ ಹಂತದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಆದರೆ 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 9 ವಿಕೆಟ್ಗಳಿಂದ ಬಗ್ಗು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಸೇಡು ತೀರಿಸಿಕೊಂಡಿತ್ತು. ಅಂದರೆ ಲೀಗ್ನಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿದ್ದರು. ಇದೀಗ ಬಲಿಷ್ಠ ತಂಡಗಳ ನಡುವೆಯೇ ಫೈನಲ್ ಫೈಟ್ ನಡೆಯುತ್ತಿದೆ. ಹೀಗಾಗಿಯೇ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಇನ್ನು ಈ ಪಂದ್ಯವು ಭಾನುವಾರ ರಾತ್ರಿ 7:30 PM IST ಕ್ಕೆ ಶುರುವಾಗಲಿದ್ದು, Sports18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಇರಲಿದೆ. ಹಾಗೆಯೇ ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ಕೂಡ ವೀಕ್ಷಿಸಬಹುದು.
ಉಭಯ ತಂಡಗಳು ಹೀಗಿವೆ:
ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ಜೆಮಿಮಾ ರೊಡ್ರಿಗಸ್, ಅಲಿಸ್ ಕ್ಯಾಪ್ಸಿ, ಶಫಾಲಿ ವರ್ಮಾ, ರಾಧಾ ಯಾದವ್, ಶಿಖಾ ಪಾಂಡೆ, ಮರಿಝನ್ನೆ ಕಪ್, ಟೈಟಾಸ್ ಸಾಧು, ಲಾರಾ ಹ್ಯಾರಿಸ್, ಮಿನ್ನು ಮಣಿ, ಜಸಿಯಾ ಅಖ್ತರ್, ಟಾರಾ ನೋರಿಸ್, ತನಿಯಾ ಭಾಟಿಯಾ, ಪೂನಮ್ ಯಾದವ್ , ಸ್ನೇಹಾ ದೀಪ್ತಿ, ಅರುಂಧತಿ ರೆಡ್ಡಿ, ಅಲ್ಪನಾ ಮೊಂಡಲ್, ಜೆಸ್ ಜೊನಾಸನ್.
ಇದನ್ನೂ ಓದಿ: RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
ಮುಂಬೈ ಇಂಡಿಯನ್ಸ್:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ನಟಾಲಿ ಸಿವರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಅಮೆಲಿಯಾ ಕೆರ್, ಶಬ್ನಮ್ ಇಸ್ಮಾಯಿಲ್, ಅಮನ್ಜೋತ್ ಕೌರ್, ಹೇಲಿ ಮ್ಯಾಥ್ಯೂಸ್, ಹೀದರ್ ಗ್ರಹಾಂ, ಇಸಾಬೆಲ್ಲೆ ವಾಂಗ್, ಕ್ಲೋಯ್ ಟ್ರಯಾನ್, ಪ್ರಿಯಾಂಕಾ ಬಾಲಾ, ಧಾರಾ ಗುಜ್ಜಾರ್, ಸೈಕಾ ಇಶಾಕ್, , ಸೋನಮ್ ಯಾದವ್, ಹುಮೈರಾ ಖಾಝಿ, ಜಿಂಟಿಮಣಿ ಕಲಿತಾ, ನೀಲಂ ಬಿಷ್ತ್.
Published On - 3:19 pm, Sat, 25 March 23