RCB Vs MI W Live Streaming: ಮುಂಬೈ- ಆರ್ಸಿಬಿ ಮುಖಾಮುಖಿ; ಪಂದ್ಯ ಯಾವ ಚಾನೆಲ್‌ನಲ್ಲಿ ಎಷ್ಟು ಗಂಟೆಗೆ ಆರಂಭ?
RCB Vs MI W Live Streaming: ಸೋಮವಾರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಕೇವಲ ಒಂದು ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.
ಸೋಮವಾರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (Women’s Premier League) ಕೇವಲ ಒಂದು ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Mumbai Indians and Royal Challengers Bangalore) ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಇಬ್ಬರು ಆತ್ಮೀಯ ಗೆಳೆತಿಯರು ಪರಸ್ಪರ ವಿರುದ್ಧ ಆಡುವುದನ್ನು ಕಾಣಬಹುದುದಾಗಿದೆ. ಮುಂಬೈ ತಂಡದ ನಾಯಕತ್ವ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಕೈಯಲ್ಲಿದ್ದರೆ, ಬೆಂಗಳೂರಿನ ಕಮಾಂಡ್ ಅವರ ಸ್ನೇಹಿತೆ ಸ್ಮೃತಿ ಮಂಧಾನ (Smriti Mandhana) ಅವರ ಕೈಯಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾದ ನಾಯಕಿ ಮತ್ತು ಉಪನಾಯಕಿ ಪರಸ್ಪರ ಮುಖಾಮುಖಿಯಾಗುವ ಕುತೂಹಲಕಾರಿ ಕದನವನ್ನು ವೀಕ್ಷಿಸಲು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.
ಮೊದಲ ಪಂದ್ಯದಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಮುಂಬೈ ತಂಡ, ಗುಜರಾತ್ ಜೈಂಟ್ಸ್ ತಂಡವನ್ನು 143 ರನ್ಗಳ ಬೃಹತ್ ಅಂತರದಿಂದ ಸೋಲಿಸಿತು. ಈ ಪಂದ್ಯದಲ್ಲಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಬಿರುಸಿನ ಅರ್ಧಶತಕ ದಾಖಲಿಸಿದ್ದರು. ಅದೇ ಸಮಯದಲ್ಲಿ, ಬೌಲರ್‌ಗಳು ಸಹ ಅದ್ಭುತ ಪ್ರದರ್ಶನ ನೀಡಿ ಎದುರಾಳಿ ತಂಡವನ್ನು ಅಲ್ಪ ರನ್ಗಳಿಗೆ ಕಟ್ಟಿಹಾಕಿದರು. ಹೀಗಾಗಿ ಗೆಲುವಿನ ವಿಶ್ವಾಸದಲ್ಲಿರುವ ಮುಂಬೈ ತಂಡವನ್ನು ಎದುರಿಸುವುದು ಆರ್‌ಸಿಬಿಗೆ ಸುಲಭದ ಮಾತಲ್ಲ.
WPL 2023: 10 ಬೌಂಡರಿ, 4 ಸಿಕ್ಸರ್, 84 ರನ್! ಆರ್ಸಿಬಿ ವಿರುದ್ಧ ಅಬ್ಬರಿಸಿದ ಶಫಾಲಿ ವರ್ಮಾ
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯ ಯಾವಾಗ ನಡೆಯಲಿದೆ?
ಮಾರ್ಚ್ 4 ರ ಶನಿವಾರದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ರಾತ್ರಿ 7.30 ಕ್ಕೆ ನಡೆಯಲಿದ್ದು, ಟಾಸ್ 7.00 ಗಂಟೆಗೆ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?
ಮುಂಬೈ ಬ್ರಬೋರ್ನ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್‌ನಲ್ಲಿ ಇರಲಿದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ನೇರ ಪ್ರಸಾರವು ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ಇರಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದೆ.
ಮುಂಬೈ ಇಂಡಿಯನ್ಸ್ – ಹರ್ಮನ್‌ಪ್ರೀತ್ ಕೌರ್, ಯಾಸ್ತಿಕಾ ಭಾಟಿಯಾ, ಅಮನ್‌ಜೋತ್ ಕೌರ್, ಹೇಲಿ ಮ್ಯಾಥ್ಯೂಸ್ (ವೆಸ್ಟ್ ಇಂಡೀಸ್), ಕ್ಲೋಯ್ ಟ್ರಯಾನ್ (ದಕ್ಷಿಣ ಆಫ್ರಿಕಾ), ನೇಟ್ ಸಿವರ್ (ಇಂಗ್ಲೆಂಡ್), ಧಾರಾ ಗುಜ್ಜರ್, ಸೈಕಾ ಇಶಾಕ್, ಹುಮೈರಾ ಖಾಜಿ, ಪ್ರಿಯಾಂಕಾ ಬಾಲಾ, ಸೋನಮ್ ಯಾದವ್, ನೀಲಂ ಬಿಶ್ತ್, ಸಿ ವಾಂಗ್ (ಇಂಗ್ಲೆಂಡ್), ಹೀದರ್ ಗ್ರಹಾಂ (ಆಸ್ಟ್ರೇಲಿಯಾ), ಪೂಜಾ ವಸ್ತ್ರಾಕರ್, ಅಮೆಲಿಯಾ ಕರ್ (ನ್ಯೂಜಿಲೆಂಡ್)
ರಾಯಲ್ ಚಾಲೆಂಜರ್ಸ್ ಬೆಂಗಳೂರು – ಸ್ಮೃತಿ ಮಂಧಾನ, ರಿಚಾ ಘೋಷ್, ಎಲ್ಲಿಸ್ ಪೆರ್ರಿ (ಆಸ್ಟ್ರೇಲಿಯಾ), ಡಾನ್ ವ್ಯಾನ್ ನೀಕರ್ಕ್ (ದಕ್ಷಿಣ ಆಫ್ರಿಕಾ), ಕೋಮಲ್ ಜಂಜಾದ್, ಆಶಾ ಶೋಭನಾ, ಎರಿನ್ ಬರ್ನ್ಸ್ (ಆಸ್ಟ್ರೇಲಿಯಾ), ಪ್ರೀತಿ ಬೋಸ್, ರೇಣುಕಾ ಸಿಂಗ್, ಸೋಫಿ ಡಿವೈನ್ (ನ್ಯೂಜಿಲೆಂಡ್), ಹೀದರ್ ನೈಟ್ (ಇಂಗ್ಲೆಂಡ್), ಮೇಗನ್ ಶುಟ್ (ಆಸ್ಟ್ರೇಲಿಯಾ), ಕನಿಕಾ ಅಹುಜಾ, ದೀಕ್ಷಾ ಕಾಸತ್, ಇಂದ್ರಾಣಿ ರಾಯ್, ಪೂನಂ ಖೇಮ್ನಾರ್, ಸಹನಾ ಪವಾರ್, ಶ್ರೇಯಾಂಕಾ ಪಾಟೀಲ್.
Published On - 6:23 pm, Sun, 5 March 23