WPL 2023: RCB ತಂಡಕ್ಕೆ ಸತತ ಸೋಲು..!

Mumbai Indians Women vs Royal Challengers Bangalore Women: 43 ರನ್​ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್​ಸಿಬಿ ತಂಡಕ್ಕೆ ಎಲ್ಲಿಸ್ ಪೆರ್ರಿ ಹಾಗೂ ರಿಚಾ ಘೋಷ್ ಆಸರೆಯಾದರು.

WPL 2023: RCB ತಂಡಕ್ಕೆ ಸತತ ಸೋಲು..!
RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on:Mar 06, 2023 | 11:09 PM

WPL 2023: ಮುಂಬೈ ಬ್ರಬೋರ್ನ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ತನ್ನ 2ನೇ ಪಂದ್ಯದಲ್ಲೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬ್ಯಾಟಿಂಗ್ ಆಯ್ಕೆ ಮಾಡಿದರು. ಅದರಂತೆ ಇನಿಂಗ್ಸ್ ಆರಂಭಿಸಿದ ಬೆಂಗಳೂರು ತಂಡವು ಉತ್ತಮ ಆರಂಭ ಪಡೆಯಿತು. ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಸೋಫಿ ಡಿವೈನ್ 3 ಓವರ್​ನಲ್ಲೇ ತಂಡದ ಮೊತ್ತವನ್ನು 30 ರ ಗಡಿದಾಟಿಸಿದ್ದರು.

ಆದರೆ ತಂಡದ ಮೊತ್ತ 39 ಆಗಿದ್ದ ವೇಳೆ ಭರ್ಜರಿ ಹೊಡೆತಕ್ಕೆ ಮುಂದಾಗಿ ಸೋಫಿ ಡಿವೈನ್ (16) ಸೈಕಾ ಇಶಾಕ್​ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ದಿಶಾ ಕಸಟ್ (0) ಕೂಡ ಕ್ಲೀನ್ ಬೌಲ್ಡ್ ಆದರು. ಇನ್ನು 6ನೇ ಓವರ್​ನಲ್ಲಿ ಮುನ್ನುಗ್ಗಿ ಹೊಡೆಯಲು ಯತ್ನಿಸಿದ ಸ್ಮೃತಿ ಮಂಧಾನ (23) ವೋಂಗ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಆ ಬಳಿಕ ಬಂದ ಹೀದರ್ ನೈಟ್ (0) ಹೇಲಿ ಮ್ಯಾಥ್ಯೂಸ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

43 ರನ್​ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್​ಸಿಬಿ ತಂಡಕ್ಕೆ ಎಲ್ಲಿಸ್ ಪೆರ್ರಿ ಹಾಗೂ ರಿಚಾ ಘೋಷ್ ಆಸರೆಯಾದರು. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಈ ಜೋಡಿಯು ತಂಡದ ಮೊತ್ತವನ್ನು 71 ಕ್ಕೇರಿಸಿದರು. ಈ ಹಂತದಲ್ಲಿ ಹೊಂದಾಣಿಕೆ ಕೊರತೆಯಿಂದಾಗಿ ಎಲ್ಲಿಸ್ ಪೆರ್ರಿ (13) ರನೌಟ್ ಆದರು. ಇನ್ನು ರಿಚಾ ಘೋಷ್ (28), ಕನ್ನಿಕಾ ಅಹುಜಾ (22) ರನ್ ಬಾರಿಸಿ ಹೊರನಡೆದರು.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಮತ್ತೊಂದೆಡೆ ಚೊಚ್ಚಲ ಪಮದ್ಯವಾಡಿದ ಕರ್ನಾಟಕದ ಆಟಗಾರ್ತಿ ಶ್ರೇಯಾಂಕ ಪಾಟೀಲ್ 15 ಎಸೆತಗಳಲ್ಲಿ 23 ರನ್​ ಬಾರಿಸಿ ಉಪಯುಕ್ತ ಕಾಣಿಕೆ ನೀಡಿದರು. ಹಾಗೆಯೇ ಮೇಗನ್ ಶಟ್ ಅಂತಿಮ ಓವರ್​ಗಳ ವೇಳೆ 20 ರನ್​ ಬಾರಿಸಿದರು. ಆದರೆ ವಿಕೆಟ್ ಕೈಚೆಲ್ಲುತ್ತಾ ಸಾಗಿದ ಆರ್​ಸಿಬಿ 18.4 ಓವರ್​ಗಳಲ್ಲಿ 155 ರನ್​ಗಳಿಸಿ ಆಲೌಟ್ ಆಯಿತು.

156 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಮುಂಬೈ ಇಂಡಿಯನ್ಸ್ ತಂಡವು ಅದ್ಭುತ ಆರಂಭ ಪಡೆಯಿತು. ಆರಂಭಿಕ ಅಟಗಾರ್ತಿಯರಾದ ಯಾಸ್ತಿಕಾ ಭಾಟಿಯಾ ಹಾಗೂ ಹೇಲಿ ಮ್ಯಾಥ್ಯೂಸ್ ಆರಂಭದಲ್ಲೇ ಆರ್​ಸಿಬಿ ಬೌಲರ್​ಗಳ ಬೆಂಡೆತ್ತಿದರು. ಕೇವಲ 5 ಓವರ್​ಗಳಲ್ಲಿ 45 ರನ್​ ಪೇರಿಸಿದ್ದ ವೇಳೆ ಯಾಸ್ತಿಕಾ ಭಾಟಿಯಾ (23) ಎಲ್​ಬಿಡಬ್ಲ್ಯೂ ಆಗಿ ಔಟಾದರು. ಈ ಹಂತದಲ್ಲಿ ಜೊತೆಯಾದ ಹೇಲಿ ಮ್ಯಾಥ್ಯೂಸ್ ಹಾಗೂ ನ್ಯಾಟ್ ಸಿವರ್ ಬ್ರಂಟ್ ಆರ್​ಸಿಬಿ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 26 ಎಸೆತಗಳಲ್ಲಿ ಮ್ಯಾಥ್ಯೂಸ್ ಅರ್ಧಶತಕ ಪೂರೈಸಿದರು. ಮತ್ತೊಂದೆಡೆ 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಬ್ರಂಟ್ (55) ಕೂಡ ಬ್ಯಾಟ್ ಮೇಲೆತ್ತಿದರು.

ಅರ್ಧಶತಕದ ಬಳಿಕ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ ಹೇಲಿ ಮ್ಯಾಥ್ಯೂಸ್ ಕೇವಲ 38 ಎಸೆತಗಳಲ್ಲಿ 13 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ ಅಜೇಯ 77 ರನ್​ ಬಾರಿಸಿದರು. ಪರಿಣಾಮ ಕೇವಲ 14.2 ಓವರ್​ಗಳಲ್ಲಿ 159 ರನ್​ಗಳ ಗುರಿ ಮುಟ್ಟುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್ (ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಮೇಗನ್ ಶಟ್, ಶ್ರೇಯಾಂಕಾ ಪಾಟೀಲ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್

ಇದನ್ನೂ ಓದಿ: WTC Final: ಹೀಗಾದ್ರೆ ಮಾತ್ರ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ​ ಫೈನಲ್​ಗೇರಬಹುದು..!

ಆರ್​ಸಿಬಿಗೆ ಸತತ ಸೋಲು:

ಆರ್​ಸಿಬಿ ಆಡಿದ ಮೊದಲ ಪಂದ್ಯದಲ್ಲೂ ಹೀನಾಯವಾಗಿ ಸೋಲನುಭವಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದಿದ್ದ ಆ ಪಂದ್ಯದಲ್ಲಿ ಆರ್​ಸಿಬಿ 143 ರನ್​ಗಳಿಂದ ಸೋಲೊಪ್ಪಿಕೊಂಡಿತ್ತು. ಇದೀಗ 2ನೇ ಪಂದ್ಯದಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧ 9 ವಿಕೆಟ್​​ಗಳ ಹೀನಾಯ ಸೋಲನುಭವಿಸಿದೆ.

Published On - 10:39 pm, Mon, 6 March 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ