WPL 2023: ಆರ್​ಸಿಬಿ ತಂಡಕ್ಕೆ ಮುಖ್ಯ ಕೋಚ್ ನೇಮಕ; ಸಹಾಯಕ ಸಿಬ್ಬಂದಿ ವರ್ಗದಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

WPL 2023: ಈ ಬಾರಿಯ ಮಹಿಳಾ ಐಪಿಎಲ್‌ನಲ್ಲಿ ಆರ್​ಸಿಬಿ ತಂಡ ತಮ್ಮ ಮೊದಲ ಪಂದ್ಯವನ್ನು ದೆಹಲಿ ವಿರುದ್ಧ ಮಾರ್ಚ್ 5 ರಂದು ಆಡಲಿದೆ.

WPL 2023: ಆರ್​ಸಿಬಿ ತಂಡಕ್ಕೆ ಮುಖ್ಯ ಕೋಚ್ ನೇಮಕ; ಸಹಾಯಕ ಸಿಬ್ಬಂದಿ ವರ್ಗದಲ್ಲಿ ಯಾರ್ಯಾರಿದ್ದಾರೆ ಗೊತ್ತಾ?
ಆರ್​ಸಿಬಿ ಮುಖ್ಯ ಕೋಚ್
Follow us
TV9 Web
| Updated By: ಪೃಥ್ವಿಶಂಕರ

Updated on:Feb 16, 2023 | 9:45 AM

ಮಹಿಳಾ ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಸಿಕ್ಸರ್ಸ್ (Sydney Sixers) ತಂಡವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸಿದ ಆಸ್ಟ್ರೇಲಿಯಾದ ಬೆನ್ ಸಾಯರ್ (Ben Sawyer) ಅವರು ಆರ್​ಸಿಬಿ (RCB) ಮಹಿಳಾ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಸದ್ಯ ನ್ಯೂಜಿಲೆಂಡ್ ಮಹಿಳಾ ತಂಡದ ಕೋಚ್ ಜವಾಬ್ದಾರಿ ಹೊತ್ತಿರುವ 45 ವರ್ಷದ ಬೆನ್ ಸಾಯರ್ ಆರ್​ಸಿಬಿ ಮಹಿಳಾ ತಂಡವನ್ನು ಹೇಗೆ ಮುನ್ನಡೆಸಲಿದ್ದಾರೆ ಎಂದು ಕಾದುನೋಡಬೇಕಾಗಿದೆ. ಬೆನ್ ಸಾಯರ್, ಮಹಿಳಾ ಬಿಗ್ ಬ್ಯಾಷ್‌ನಲ್ಲಿ (Women’s Big Bash) ತಂಡವನ್ನು ಯಶಸ್ಸಿನತ್ತ ಮುನ್ನಡೆಸುವುದರ ಜೊತೆಗೆ, ಅವರು ದಿ ಹಂಡ್ರೆಡ್‌ನಲ್ಲಿ ಬರ್ಮಿಂಗ್ಹ್ಯಾಮ್ ಫೀನಿಕ್ಸ್‌ ತಂಡಕ್ಕೂ ತರಬೇತಿ ನೀಡಿದ್ದರು.

ಮೂರು ವಿಶ್ವಕಪ್ ಗೆಲ್ಲಿಸಿಕೊಟ್ಟವರಿಗೆ ಮುಖ್ಯ ಕೋಚ್ ಹುದ್ದೆ

ಆಸ್ಟ್ರೇಲಿಯಾ ಮಹಿಳಾ ತಂಡ ಮೂರು ವಿಶ್ವಕಪ್ ಗೆಲ್ಲುವಲ್ಲಿ ಬೆನ್ ಸಾಯರ್ ಪಾತ್ರ ಅಪಾರವಾಗಿದೆ. ಇದೀಗ ಬೆನ್ ಸಾಯರ್ ಅವರನ್ನು ತನ್ನ ತಂಡಕ್ಕೆ ಆಯ್ಕೆ ಮಾಡಿರುವ ಆರ್‌ಸಿಬಿ, ಈ ವಿಷಯವನ್ನು ವಿಡಿಯೋ ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ, ಬೆನ್ ಕಳೆದ 20 ವರ್ಷಗಳಿಂದ ಮಹಿಳಾ ಕ್ರಿಕೆಟ್‌ನೊಂದಿಗೆ ಸಂಬಂಧ ಹೊಂದಿದ್ದು, ಈ ಆಟದ ಬಗ್ಗೆ ಅವರಿಗೆ ಎಲ್ಲವೂ ತಿಳಿದಿದೆ. ಆಟಗಾರರನ್ನು ಅರ್ಥಮಾಡಿಕೊಳ್ಳಲು ಅವರು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಹರಾಜಿನಲ್ಲಿ ಆಟಗಾರರ ಆಯ್ಕೆಯಲ್ಲೂ ಬೆನ್ ಪ್ರಮುಖ ಪಾತ್ರ ವಹಿಸಿದ್ದರು ಎಂಬುದನ್ನು ತಿಳಿಸಿದೆ.

ಸಹಾಯಕ ಸಿಬ್ಬಂದಿ ವರ್ಗ ಹೀಗಿದೆ

ಇನ್ನು ಈ ಮಹಿಳಾ ಐಪಿಎಲ್‌ನಲ್ಲಿ ಮಲೋರನ್ ರಂಗರಾಜನ್, ವಿಆರ್ ವನಿತಾ ಮತ್ತು ಆರ್‌ಎಕ್ಸ್ ಮುರಳಿ ಬೆನ್​ ಅವರಿಗೆ ಸಹಾಯಕ ಸಿಬ್ಬಂದಿಯಾಗಿ ಆಯ್ಕೆಯಾಗಿದ್ದಾರೆ. ಹಾಗೆಯೇ ಇವಲ್ಲದೆ, ತಂಡದ ವ್ಯವಸ್ಥಾಪಕರಾಗಿ ಡಾ.ಹರಣಿ ಆಯ್ಕೆಯಾಗಿದ್ದು, ತಂಡದ ವೈದ್ಯರಾಗಿ ನವನೀತ ಗೌತಮ್ ಅವರನ್ನು ಆಯ್ಕೆ ಮಾಡಿರುವುದಾಗಿ ಆರ್‌ಸಿಬಿ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವರದಿ ಮಾಡಿದೆ.

ಈ ಬಾರಿಯ ಮಹಿಳಾ ಐಪಿಎಲ್‌ನಲ್ಲಿ ಆರ್‌ಸಿಬಿ ಅತ್ಯಂತ ಬಲಿಷ್ಠ ತಂಡವನ್ನು ರಚಿಸಿದೆ. ಮಹಿಳಾ ಕ್ರಿಕೆಟ್‌ನ ಕೆಲವು ಪ್ರಸಿದ್ಧ ಮುಖಗಳನ್ನು ಭಾರಿ ಮೊತ್ತದ ಹಣಕ್ಕೆ ಆರ್​ಸಿಬಿ ಖರೀದಿಸಿದೆ. ಅವರಲ್ಲಿ ಭಾರತೀಯ ಮಹಿಳಾ ಕ್ರಿಕೆಟ್‌ನ ಜನಪ್ರಿಯ ಮುಖವಾದ ಸ್ಮೃತಿ ಮಂಧಾನ ಅವರನ್ನು 3.4 ಕೋಟಿ ದಾಖಲೆ ಬೆಲೆಗೆ ಖರೀದಿಸಿದೆ. ಇವರಲ್ಲದೇ ಆಸ್ಟ್ರೇಲಿಯಾದ ಎಲಿಸ್ ಪೆರ್ರಿ ಹಾಗೂ ಮೇಗನ್ ಕೂಡ ತಂಡದಲ್ಲಿದ್ದಾರೆ.

ಮೊದಲ ಪಂದ್ಯ ಯಾವಾಗ?

ಈ ಬಾರಿಯ ಮಹಿಳಾ ಐಪಿಎಲ್‌ನಲ್ಲಿ ಆರ್​ಸಿಬಿ ತಂಡ ತಮ್ಮ ಮೊದಲ ಪಂದ್ಯವನ್ನು ದೆಹಲಿ ವಿರುದ್ಧ ಮಾರ್ಚ್ 5 ರಂದು ಆಡಲಿದೆ. ಈಗ ಬೆನ್ ಸಾಯರ್ ಅವರ ಮೇಲ್ವಿಚಾರಣೆಯಲ್ಲಿ ಆರ್‌ಸಿಬಿ ಎಷ್ಟು ಚೆನ್ನಾಗಿ ಆಡುತ್ತದೆ ಎಂಬುದು ಈಗ ಚರ್ಚೆಯ ವಿಷಯವಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:44 am, Thu, 16 February 23

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ