WPL 2024: ಚರ್ಮದ ಕ್ಯಾನ್ಸರ್: ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದ ಲಾರೆನ್

WPL 2024: ಫೆಬ್ರವರಿ 23 ರಿಂದ ವುಮೆನ್ಸ್ ಪ್ರೀಮಿಯರ್ ಲೀಗ್ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 17 ರಂದು ನಡೆಯಲಿದೆ. ಈ ಟೂರ್ನಿಯಿಂದ ಗುಜರಾತ್ ಜೈಂಟ್ಸ್ ತಂಡದ ಸ್ಟಾರ್ ಆಟಗಾರ್ತಿ ಲಾರೆನ್ ಹೊರಗುಳಿದಿದ್ದಾರೆ. ಹೀಗಾಗಿ ಗುಜರಾತ್ ಫ್ರಾಂಚೈಸಿ ಬದಲಿ ವಿದೇಶಿ ಆಟಗಾರ್ತಿಯನ್ನು ಆಯ್ಕೆ ಮಾಡಬೇಕಿದೆ.

WPL 2024: ಚರ್ಮದ ಕ್ಯಾನ್ಸರ್: ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದ ಲಾರೆನ್
Lauren Cheatle
Follow us
TV9 Web
| Updated By: ಝಾಹಿರ್ ಯೂಸುಫ್

Updated on:Feb 01, 2024 | 12:30 PM

ಆಸ್ಟ್ರೇಲಿಯಾ ತಂಡದ ಆಟಗಾರ್ತಿ ಲಾರೆನ್ ಚೀಟಲ್ (Lauren Cheatle) ವುಮೆನ್ಸ್​ ಪ್ರೀಮಿಯರ್ ಲೀಗ್​ನಿಂದ ಹೊರಗುಳಿದಿದ್ದಾರೆ. ಈ ಬಾರಿಯ WPL ಹರಾಜಿನಲ್ಲಿ ಲಾರೆನ್ ಅವರನ್ನು ಗುಜರಾತ್ ಜೈಂಟ್ಸ್​ ಫ್ರಾಂಚೈಸಿ 30 ಲಕ್ಷ ರೂ. ನೀಡಿ ಖರೀದಿಸಿತ್ತು. ಅಲ್ಲದೆ ಈ ಬಾರಿಯ ಟೂರ್ನಿಗಾಗಿ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿತ್ತು.

ಆದರೀಗ ಚರ್ಮದ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿರುವ ಲಾರೆನ್ ಚೀಟಲ್ ವುಮೆನ್ಸ್​ ಪ್ರೀಮಿಯರ್ ಲೀಗ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಗುಜರಾತ್ ಜೈಂಟ್ಸ್​ ಫ್ರಾಂಚೈಸಿ ಇದೀಗ ಬದಲಿ ಆಟಗಾರ್ತಿಯನ್ನು ಆಯ್ಕೆ ಮಾಡಬೇಕಿದೆ.

25 ವರ್ಷದ ಲಾರೆನ್ ಚೀಟಲ್ ಈಗಾಗಲೇ ಆಸ್ಟ್ರೇಲಿಯಾ ಪರ 1 ಟೆಸ್ಟ್ ಹಾಗೂ 4 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು 7 ಟಿ20 ಪಂದ್ಯಗಳಿಂದ 5 ವಿಕೆಟ್ ಪಡೆದಿದ್ದಾರೆ.

ಆಸೀಸ್ ಬಳಗದ ಭರವಸೆಯ ವೇಗಿಗಳಲ್ಲಿ ಗುರುತಿಸಿಕೊಂಡಿದ್ದ ಲಾರೆನ್ ಇದೀಗ ಚಿಕಿತ್ಸೆಯ ಕಾರಣ ಮೈದಾನದಿಂದ ಹೊರಗುಳಿಯಬೇಕಾಗಿ ಬಂದಿದೆ. ಇದಾಗ್ಯೂ ಮುಂದಿನ ಆಫ್-ಸೀಸನ್ ವಿರಾಮದ ಬಳಿಕ ನ್ಯೂ ಸೌತ್ ವೇಲ್ಸ್​ ತರಬೇತಿ ಕೇಂದ್ರಕ್ಕೆ ಮರಳುವ ಗುರಿಯನ್ನು ಚೀಟಲ್ ಹೊಂದಿದ್ದಾರೆ.

ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ*, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಕಾಶ್ವೀ ಗೌತಮ್, ಪ್ರಿಯಾ ಮಿಶ್ರಾ, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.

ವುಮೆನ್ಸ್ ಪ್ರೀಮಿಯರ್ ಲೀಗ್ ಯಾವಾಗ ಶುರು?

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿ ಫೆಬ್ರವರಿ 23 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 17 ರಂದು ನಡೆಯಲಿದೆ. ಈ ಬಾರಿಯ ಟೂರ್ನಿಯು ಬೆಂಗಳೂರು ಮತ್ತು ದೆಹಲಿಯಲ್ಲಿ ನಡೆಯಲಿದೆ.

ಇದನ್ನೂ ಓದಿ: Babar Azam: ಮೂರು ಶ್ರೇಯಾಂಕ ಪಟ್ಟಿಯಲ್ಲೂ ಬಾಬರ್ ಆಝಂ ಮಿಂಚಿಂಗ್

WPL 2024 ಸಂಪೂರ್ಣ ವೇಳಾಪಟ್ಟಿ:

  • ಫೆಬ್ರವರಿ 23- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
  • ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ (ಬೆಂಗಳೂರು)
  • ಫೆಬ್ರವರಿ 25- ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ (ಬೆಂಗಳೂರು)
  • ಫೆಬ್ರವರಿ 26 – ಯುಪಿ ವಾರಿಯರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ((ಬೆಂಗಳೂರು)
  • ಫೆಬ್ರವರಿ 27 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್ (ಬೆಂಗಳೂರು)
  • ಫೆಬ್ರವರಿ 28 – ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ ((ಬೆಂಗಳೂರು)
  • ಫೆಬ್ರವರಿ 29 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
  • ಮಾರ್ಚ್ 1 – ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ (ಬೆಂಗಳೂರು)
  • ಮಾರ್ಚ್ 2 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ (ಬೆಂಗಳೂರು)
  • ಮಾರ್ಚ್ 3 – ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
  • ಮಾರ್ಚ್ 4 – ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ (ಬೆಂಗಳೂರು)
  • ಮಾರ್ಚ್ 5 – ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
  • ಮಾರ್ಚ್ 6 – ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
  • ಮಾರ್ಚ್ 7 – ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
  • ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ (ದೆಹಲಿ)
  • ಮಾರ್ಚ್ 9 – ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್​ (ದೆಹಲಿ)
  • ಮಾರ್ಚ್ 10 –  ಡೆಲ್ಲಿ ಕ್ಯಾಪಿಟಲ್ಸ್ vs  ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
  • ಮಾರ್ಚ್ 11 – ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ (ದೆಹಲಿ)
  • ಮಾರ್ಚ್ 12 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
  • ಮಾರ್ಚ್ 13 – ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ (ದೆಹಲಿ)
  • ಮಾರ್ಚ್ 15 – ಎಲಿಮಿನೇಟರ್ (ದೆಹಲಿ)
  • ಮಾರ್ಚ್ 17 – ಫೈನಲ್ (ದೆಹಲಿ)

Published On - 12:29 pm, Thu, 1 February 24

ಉಡುಪಿ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನಿಗೆ ಥಳಿತ
ಉಡುಪಿ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನಿಗೆ ಥಳಿತ
ಒಂದು ದೇಶ ಒಂದು ಚುನಾವಣೆ ಬಗ್ಗೆ ಬಹಳಷ್ಟು ಚರ್ಚೆ ಆಗಬೇಕಿದೆ: ಪರಮೇಶ್ವರ್
ಒಂದು ದೇಶ ಒಂದು ಚುನಾವಣೆ ಬಗ್ಗೆ ಬಹಳಷ್ಟು ಚರ್ಚೆ ಆಗಬೇಕಿದೆ: ಪರಮೇಶ್ವರ್
ಮೀಸಲಾತಿ ವಿಷಯದಲ್ಲಿ ಯತ್ನಾಳ್ ತಮ್ಮ ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಾರೆ
ಮೀಸಲಾತಿ ವಿಷಯದಲ್ಲಿ ಯತ್ನಾಳ್ ತಮ್ಮ ಸರ್ಕಾರವನ್ನು ಸಮರ್ಥಿಸಿಕೊಳ್ಳುತ್ತಾರೆ
ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಕಾಂಗ್ರೆಸ್ ಒಂದು ದೇಶ ಒಂದು ಚುನಾವಣೆ ಮಸೂದೆ ವಿರೋಧಿಸುತ್ತದೆ: ಶಿವಕುಮಾರ್
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
ಶ್ರೀಲಂಕಾದ ರೈಲಿನಲ್ಲಿ ರೀಲ್ಸ್​ ಮಾಡಲು ಹೋಗಿ ಚೀನಾ ಯುವತಿಗೆ ಏನಾಯ್ತು ನೋಡಿ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
Live: ಬೆಳಗಾವಿ ಅಧಿವೇಶನದ ಐದನೇ ದಿನದ ಕಲಾಪ ನೇರ ಪ್ರಸಾರ
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಅಂಜನಾದ್ರಿ ಬೆಟ್ಟದಲ್ಲಿ ನೆರೆದಿದ್ದಾರೆ ಮಾಲೆ ಧರಿಸಿರುವ ಸಾವಿರಾರು ಭಕ್ತರು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಮೈಸೂರು ಜಯಲಕ್ಷ್ಮಿ ವಿಲಾಸ ಅರಮನೆ ಕಾಯಕಲ್ಪಕ್ಕೆ ಅಮೆರಿಕ ನೆರವು
ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?