AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಗುಜರಾತ್​ಗೆ ಸತತ 4ನೇ ಸೋಲು; ಡೆಲ್ಲಿಗೆ ಸುಲಭ ಜಯ

WPL 2024: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ಪ್ರೀಮಿಯರ್ ಲೀಗ್ 2024 ರ 10 ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಇದರೊಂದಿಗೆ ಗುಜರಾತ್ ಜೈಂಟ್ಸ್​ ಲೀಗ್​ನಲ್ಲಿ ಸತತ 4ನೇ ಸೋಲನುಭವಿಸಿದೆ.

WPL 2024: ಗುಜರಾತ್​ಗೆ ಸತತ 4ನೇ ಸೋಲು; ಡೆಲ್ಲಿಗೆ ಸುಲಭ ಜಯ
ಡೆಲ್ಲಿ ಕ್ಯಾಪಿಟಲ್ಸ್
ಪೃಥ್ವಿಶಂಕರ
|

Updated on:Mar 03, 2024 | 10:46 PM

Share

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ಪ್ರೀಮಿಯರ್ ಲೀಗ್ 2024 ರ (Women’s Premier League) 10 ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ (Delhi Capitals vs Gujarat Giants) ಯಶಸ್ವಿಯಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 163 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಗುಜರಾತ್ ನಿಗದಿತ 20 ಓವರ್​ಗಳಲ್ಲಿ 138 ರನ್ ಕಲೆಹಾಕಲಷ್ಟೇ ಶಕ್ತವಾಗಿ ಲೀಗ್​ನಲ್ಲಿ ಸತತ 4ನೇ ಸೋಲನುಭವಿಸಿತು.

ಮೆಗ್ ಲ್ಯಾನಿಂಗ್ ಅರ್ಧಶತಕ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಕಳೆದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ಶಫಾಲಿ, ಈ ಪಂದ್ಯದಲ್ಲಿ 13 ರನ್​ಗಳಿಗೆ ಸುಸ್ತಾದರು. ಆದರೆ ನಾಯಕಿ ಮೆಗ್ ಲ್ಯಾನಿಂಗ್ ಈ ಪಂದ್ಯದಲ್ಲಿ 55 ರನ್​ಗಳ ಸ್ಫೋಟಕ ಬ್ಯಾಟಿಂಗ್​ ನಡೆಸಿದರು. ಆಲಿಸ್ ಕ್ಯಾಪ್ಸಿ 27 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಅನ್ನಾಬೆಲ್ ಸದರ್ಲ್ಯಾಂಡ್ 20 ರನ್​ಗಳ ಕಾಣಿಕೆ ನೀಡಿದರು. ಇವರ ಆಟದಿಂದಾಗಿ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು.

ಗಾರ್ಡ್ನರ್ ಏಕಾಂಗಿ ಹೋರಾಟ ವ್ಯರ್ಥ

163 ರನ್​ಗಳ ಗುರಿ ಬೆನ್ನಟ್ಟಿದ ಗುಜರಾತ್ ತಂಡಕ್ಕೆ ಮತ್ತೆ ಆರಂಭಿಕರು ಕೈಕೊಟ್ಟರು. ಲಾರಾ ವೊಲ್ವಾರ್ಡ್ಟ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ನಾಯಕಿ ಬೆಥ್ ಮೂನಿ ಕಳಪೆ ಪ್ರದರ್ಶನ ಈ ಪಂದ್ಯದಲ್ಲೂ ಮುಂದುವರೆಯಿತು. ಅವರು 12 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಆಶ್ಲೀಗ್ ಗಾರ್ಡ್ನರ್ 40 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಅವರಿಗೆ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

ಉಭಯ ತಂಡಗಳು

ಡೆಲ್ಲಿ ಕ್ಯಾಪಿಟಲ್ಸ್‌: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಎಲಿಸ್ ಕ್ಯಾಪ್ಸೆ, ಜೆಮಿಮಾ ರಾಡ್ರಿಗಸ್, ಅನ್ನಾಬೆಲ್ ಸದರ್ಲ್ಯಾಂಡ್, ಜೆಸ್ ಜೊನಾಸೆನ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಟಿಟಾಸ್ ಸಾಧು, ರಾಧಾ ಯಾದವ್, ಶಿಖಾ ಪಾಂಡೆ.

ಗುಜರಾತ್ ಜೈಂಟ್ಸ್: ಲಾರಾ ವೊಲ್ವಾರ್ಡ್ಟ್, ಬೆತ್ ಮೂನಿ (ನಾಯಕಿ), ಫೋಬೆ ಲಿಚ್‌ಫೀಲ್ಡ್, ಆಶ್ಲೇ ಗಾರ್ಡ್ನರ್, ವೇದಾ ಕೃಷ್ಣಮೂರ್ತಿ, ದಯಾಲನ್ ಹೇಮಲತಾ, ಕ್ಯಾಥರೀನ್ ಬ್ರೈಸ್, ತನುಜಾ ಕನ್ವರ್, ಮೇಘನಾ ಸಿಂಗ್, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 pm, Sun, 3 March 24

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ