WPL 2024: ಸ್ಮೃತಿ ಏಕಾಂಗಿ ಹೋರಾಟ ವ್ಯರ್ಥ; ಲೀಗ್​ನಲ್ಲಿ ಮೊದಲ ಸೋಲನುಭವಿಸಿದ ಆರ್​ಸಿಬಿ

WPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ರ ಏಳನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ 25 ರನ್​ಗಳಿಂದ ಮಣಿಸಿದೆ.

WPL 2024: ಸ್ಮೃತಿ ಏಕಾಂಗಿ ಹೋರಾಟ ವ್ಯರ್ಥ; ಲೀಗ್​ನಲ್ಲಿ ಮೊದಲ ಸೋಲನುಭವಿಸಿದ ಆರ್​ಸಿಬಿ
ಆರ್​ಸಿಬಿ- ಡೆಲ್ಲಿ
Follow us
|

Updated on:Feb 29, 2024 | 10:51 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ರ (Women’s Premier League) ಏಳನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ (Royal Challengers Bangalore Women vs Delhi Capitals) 25 ರನ್​ಗಳಿಂದ ಮಣಿಸಿದೆ. ಈ ಮೂಲಕ ಆರ್​ಸಿಬಿ ಲೀಗ್​ನಲ್ಲಿ ತನ್ನ ಮೊದಲ ಸೋಲನ್ನು ಅನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಮೂಲಕ ಆರ್​ಸಿಬಿಗೆ 195 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಇತ್ತ ಬಿಗ್ ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ತಂಡ ಕೊನೆಯವರೆಗೂ ಗೆಲುವಿಗಾಗಿ ಹೋರಾಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಶಫಾಲಿ ಸ್ಫೋಟಕ ಬ್ಯಾಟಿಂಗ್

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಡೆಲ್ಲಿಗೆ ಮೊದಲ ವಿಕೆಟ್​ಗೆ 28 ರನ್​ಗಳ ಜೊತೆಯಾಟ ಬಂತು. ನಾಯಕಿ ಮೆಗ್ ಲ್ಯಾನಿಂಗ್ 11 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಆರಂಭದಲ್ಲಿ ಸಿಕ್ಕ ಜೀವದಾನವನ್ನು ಸದುಪಯೋಗಪಡಿಸಿಕೊಂಡ ಶಫಾಲಿ ವರ್ಮಾ 31 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳ ಸಹಿತ ಅರ್ಧಶತಕ ಸಿಡಿಸಿದರು. ಆಲಿಸ್ ಕ್ಯಾಪ್ಸಿ ಕೂಡ 46 ರನ್​ಗಳ ಇನ್ನಿಂಗ್ಸ್ ಆಡಿದರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಮರಿಜಾನ್ನೆ ಕೆಪ್ ಹಾಗೂ ಜೆಸ್ ಜೊನಾಸೆನ್ ತಲಾ 16 ಎಸೆತಗಳಲ್ಲಿ ಕ್ರಮವಾಗಿ 32 ಹಾಗೂ 36 ರನ್ ಕಲೆಹಾಕಿ ತಂಡವನ್ನು ಬೃಹತ್ ಟಾರ್ಗೆಟ್​ನತ್ತ ಕೊಂಡೊಯ್ದರು.

WPL 2024: ಬೆಂಗಳೂರಿನಲ್ಲಿ ಮತ್ತೆ ಟಾಸ್ ಗೆದ್ದ ಆರ್​ಸಿಬಿ; ಪ್ಲೇಯಿಂಗ್ 11 ಹೀಗಿದೆ

ಆರ್​ಸಿಬಿಗೆ ಕೈಕೊಟ್ಟ ಮಧ್ಯಮ ಕ್ರಮಾಂಕ

ಈ ಬೃಹತ್ ಗುರಿ ಬೆನ್ನಟ್ಟಿದ ಆರ್​ಸಿಬಿಗೆ ಸ್ಮೃತಿ ಮಂಧಾನ ಹಾಗೂ ಸೋಫಿ ಡಿವೈನ್ 71 ರನ್​ಗಳ ಜೊತೆಯಾಟ ನೀಡಿದರು. ಈ ಇಬ್ಬರ ಸ್ಫೋಟಕ ಬ್ಯಾಟಿಂಗ್ ನೋಡಿದವರು ಆರ್​ಸಿಬಿಗೆ ಗೆಲುವು ಖಚಿತ ಎಂದು ಬಾವಿಸಿದ್ದರು. ಆದರೆ ಸೋಫಿ ಔಟಾದ ಬಳಿಕ ತಂಡದ ರನ್ ರೇಟ್ ಕುಸಿಯಲ್ಲಾರಂಬಿಸಿತು. ತಂಡದ ಪರ ಏಕಾಂಗಿ ಹೋರಾಟ ನಡೆಸಿದ ನಾಯಕಿ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಕಲೆಹಾಕಿದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಒಂದೆಡೆ ನಾಯಕಿ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದರೆ, ಮೇಘನಾ ಆಮೆಗತಿಯ ಬ್ಯಾಟಿಂಗ್ ಮಾಡಿದರು. ಹೀಗಾಗಿ ತಂಡ ಒತ್ತಡಕ್ಕೆ ಸಿಲುಕಿತು. ಅಂತಿಮವಾಗಿ ತಂಡ ಲೀಗ್​ನಲ್ಲಿ ತನ್ನ ಮೊದಲ ಸೋಲನ್ನು ಎದುರಿಸಬೇಕಾಯಿತು.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನೆಕ್ಸ್, ರಿಚಾ ಘೋಷ್ (ವಿಕೆಟ್ ಕೀಪರ್), ನಡಿನ್ ಡಿ ಕ್ಲರ್ಕ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಆಶಾ ಸಿಂಗ್ ಶೋಬನಾ, ರೇಣುಕಾ ಸಿಂಗ್ ಠಾಕೂರ್.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕೆಪ್, ಜೆಸ್ ಜೊನಾಸೆನ್, ಅರುಂಧತಿ ರೆಡ್ಡಿ, ಮಿನ್ನು ಮಣಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಧಾ ಯಾದವ್, ಶಿಖಾ ಪಾಂಡೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:51 pm, Thu, 29 February 24

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು