ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ರ (Women’s Premier League) ಏಳನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ (Royal Challengers Bangalore Women vs Delhi Capitals) 25 ರನ್ಗಳಿಂದ ಮಣಿಸಿದೆ. ಈ ಮೂಲಕ ಆರ್ಸಿಬಿ ಲೀಗ್ನಲ್ಲಿ ತನ್ನ ಮೊದಲ ಸೋಲನ್ನು ಅನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಮೂಲಕ ಆರ್ಸಿಬಿಗೆ 195 ರನ್ಗಳ ಬೃಹತ್ ಟಾರ್ಗೆಟ್ ನೀಡಿತು. ಇತ್ತ ಬಿಗ್ ಟಾರ್ಗೆಟ್ ಬೆನ್ನಟ್ಟಿದ ಆರ್ಸಿಬಿ ತಂಡ ಕೊನೆಯವರೆಗೂ ಗೆಲುವಿಗಾಗಿ ಹೋರಾಡಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಡೆಲ್ಲಿಗೆ ಮೊದಲ ವಿಕೆಟ್ಗೆ 28 ರನ್ಗಳ ಜೊತೆಯಾಟ ಬಂತು. ನಾಯಕಿ ಮೆಗ್ ಲ್ಯಾನಿಂಗ್ 11 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಆರಂಭದಲ್ಲಿ ಸಿಕ್ಕ ಜೀವದಾನವನ್ನು ಸದುಪಯೋಗಪಡಿಸಿಕೊಂಡ ಶಫಾಲಿ ವರ್ಮಾ 31 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳ ಸಹಿತ ಅರ್ಧಶತಕ ಸಿಡಿಸಿದರು. ಆಲಿಸ್ ಕ್ಯಾಪ್ಸಿ ಕೂಡ 46 ರನ್ಗಳ ಇನ್ನಿಂಗ್ಸ್ ಆಡಿದರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಮರಿಜಾನ್ನೆ ಕೆಪ್ ಹಾಗೂ ಜೆಸ್ ಜೊನಾಸೆನ್ ತಲಾ 16 ಎಸೆತಗಳಲ್ಲಿ ಕ್ರಮವಾಗಿ 32 ಹಾಗೂ 36 ರನ್ ಕಲೆಹಾಕಿ ತಂಡವನ್ನು ಬೃಹತ್ ಟಾರ್ಗೆಟ್ನತ್ತ ಕೊಂಡೊಯ್ದರು.
WPL 2024: ಬೆಂಗಳೂರಿನಲ್ಲಿ ಮತ್ತೆ ಟಾಸ್ ಗೆದ್ದ ಆರ್ಸಿಬಿ; ಪ್ಲೇಯಿಂಗ್ 11 ಹೀಗಿದೆ
ಈ ಬೃಹತ್ ಗುರಿ ಬೆನ್ನಟ್ಟಿದ ಆರ್ಸಿಬಿಗೆ ಸ್ಮೃತಿ ಮಂಧಾನ ಹಾಗೂ ಸೋಫಿ ಡಿವೈನ್ 71 ರನ್ಗಳ ಜೊತೆಯಾಟ ನೀಡಿದರು. ಈ ಇಬ್ಬರ ಸ್ಫೋಟಕ ಬ್ಯಾಟಿಂಗ್ ನೋಡಿದವರು ಆರ್ಸಿಬಿಗೆ ಗೆಲುವು ಖಚಿತ ಎಂದು ಬಾವಿಸಿದ್ದರು. ಆದರೆ ಸೋಫಿ ಔಟಾದ ಬಳಿಕ ತಂಡದ ರನ್ ರೇಟ್ ಕುಸಿಯಲ್ಲಾರಂಬಿಸಿತು. ತಂಡದ ಪರ ಏಕಾಂಗಿ ಹೋರಾಟ ನಡೆಸಿದ ನಾಯಕಿ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಕಲೆಹಾಕಿದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಒಂದೆಡೆ ನಾಯಕಿ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದರೆ, ಮೇಘನಾ ಆಮೆಗತಿಯ ಬ್ಯಾಟಿಂಗ್ ಮಾಡಿದರು. ಹೀಗಾಗಿ ತಂಡ ಒತ್ತಡಕ್ಕೆ ಸಿಲುಕಿತು. ಅಂತಿಮವಾಗಿ ತಂಡ ಲೀಗ್ನಲ್ಲಿ ತನ್ನ ಮೊದಲ ಸೋಲನ್ನು ಎದುರಿಸಬೇಕಾಯಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನೆಕ್ಸ್, ರಿಚಾ ಘೋಷ್ (ವಿಕೆಟ್ ಕೀಪರ್), ನಡಿನ್ ಡಿ ಕ್ಲರ್ಕ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಆಶಾ ಸಿಂಗ್ ಶೋಬನಾ, ರೇಣುಕಾ ಸಿಂಗ್ ಠಾಕೂರ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕೆಪ್, ಜೆಸ್ ಜೊನಾಸೆನ್, ಅರುಂಧತಿ ರೆಡ್ಡಿ, ಮಿನ್ನು ಮಣಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಧಾ ಯಾದವ್, ಶಿಖಾ ಪಾಂಡೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:51 pm, Thu, 29 February 24