WPL 2024: ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿದ ಡೆಲ್ಲಿ ಕ್ಯಾಪಿಟಲ್ಸ್

| Updated By: ಝಾಹಿರ್ ಯೂಸುಫ್

Updated on: Mar 06, 2024 | 7:19 AM

Delhi Capitals vs Mumbai Indians: ವುಮೆನ್ಸ್ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿತ್ತು. ಇದೀಗ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿರುವುದು ವಿಶೇಷ.

WPL 2024: ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿದ ಡೆಲ್ಲಿ ಕ್ಯಾಪಿಟಲ್ಸ್
Delhi Capitals
Follow us on

ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನಾಯಕಿ ಮೆಗ್ ಲ್ಯಾನಿಂಗ್ ಉತ್ತಮ ಆರಂಭ ಒದಗಿಸಿದ್ದರು.

ಶಫಾಲಿ ವರ್ಮಾ (28) ಜೊತೆ ಇನಿಂಗ್ಸ್ ಆರಂಭಿಸಿದ ಲ್ಯಾನಿಂಗ್​ 38 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 53 ರನ್ ಬಾರಿಸಿದರು. ಇದಾದ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಜೆಮಿಮಾ ರೊಡ್ರಿಗಾಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

33 ಎಸೆತಗಳನ್ನು ಎದುರಿಸಿದ ಜೆಮಿಮಾ 3 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 69 ರನ್ ಬಾರಿಸಿದರು. ಈ ಭರ್ಜರಿ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 192 ರನ್ ಕಲೆಹಾಕಿತು.

193 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಆರಂಭಿಕ ಆಟಗಾರ್ತಿ ಮ್ಯಾಥ್ಯೂ ಹೇಲಿ 29 ರನ್ ಬಾರಿಸಿದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ನಾಯಕಿ ಹರ್ಮನ್​ಪ್ರೀತ್ ಕೌರ್ ಕೇವಲ 6 ರನ್​ಗಳಿಸಿದರೆ, ಸ್ಕೀವರ್ ಬ್ರಂಟ್ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಕೆಲ ಕ್ರಮಾಂಕದಲ್ಲಿ ಅಮ್ಜೋತ್ ಕೌರ್ 42 ರನ್ ಬಾರಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 8 ವಿಕೆಟ್ ಕಳೆದುಕೊಂಡು 163 ರನ್​ಗಳಿಸಿ ಮುಂಬೈ ಇಂಡಿಯನ್ಸ್​ 29 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್​ ವಿರುದ್ಧದ ಮೊದಲ ಪಂದ್ಯದ ಸೋಲಿನ ಸೇಡನ್ನು ತೀರಿಸಿಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11: ಮೆಗ್ ಲ್ಯಾನಿಂಗ್ (ನಾಯಕಿ) , ಶಫಾಲಿ ವರ್ಮಾ , ಆಲಿಸ್ ಕ್ಯಾಪ್ಸೆ , ಜೆಮಿಮಾ ರೊಡ್ರಿಗಾಸ್ , ಮರಿಜಾನ್ನೆ ಕಪ್ , ಜೆಸ್ ಜೊನಾಸೆನ್ , ತಾನಿಯಾ ಭಾಟಿಯಾ (ವಿಕೆಟ್ ಕೀಪರ್) , ಅರುಂಧತಿ ರೆಡ್ಡಿ , ಟಿಟಾಸ್ ಸಾಧು , ಶಿಖಾ ಪಾಂಡೆ , ರಾಧಾ ಯಾದವ್.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11: ಹೇಲಿ ಮ್ಯಾಥ್ಯೂಸ್ , ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್) , ನ್ಯಾಟ್ ಸಿವರ್-ಬ್ರಂಟ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ಅಮೆಲಿಯಾ ಕೆರ್ , ಅಮನ್ಜೋತ್ ಕೌರ್ , ಪೂಜಾ ವಸ್ತ್ರಾಕರ್ , ಎಸ್ ಸಜನಾ , ಶಬ್ನಿಮ್ ಇಸ್ಮಾಯಿಲ್ , ಹುಮೈರಾ ಕಾಜಿ , ಸೈಕಾ ಇಶಾಕ್.