WPL 2024: ದೆಹಲಿಯಲ್ಲಿಂದು ಮುಂಬೈ ಇಂಡಿಯನ್ಸ್​-ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ

| Updated By: ಝಾಹಿರ್ ಯೂಸುಫ್

Updated on: Mar 05, 2024 | 7:17 AM

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲಾರ್ಧ ಮುಕ್ತಾಯವಾಗಿದ್ದು, ಇದೀಗ ದ್ವಿತೀಯಾರ್ಧಕ್ಕೆ ವೇದಿಕೆ ಸಿದ್ಧವಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ.

WPL 2024: ದೆಹಲಿಯಲ್ಲಿಂದು ಮುಂಬೈ ಇಂಡಿಯನ್ಸ್​-ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ
DC vs MI
Follow us on

ವುಮೆನ್ಸ್​ ಪ್ರೀಮಿಯರ್ ಲೀಗ್​ನ (WPL 2024) 12ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ. ಅಂದರೆ ಮೊದಲಾರ್ಧದ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದು, ಇದೀಗ ದ್ವಿತೀಯಾರ್ಧದ ಪಂದ್ಯಗಳಿಗೆ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಇನ್ನು ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿತ್ತು. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಸಿಕ್ಸ್ ಬಾರಿಸಿ ಮುಂಬೈ ಇಂಡಿಯನ್ಸ್ ಜಯ ಸಾಧಿಸಿತ್ತು. ಇದೀಗ 2ನೇ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ ಡೆಲ್ಲಿ ಕ್ಯಾಪಿಟಲ್ಸ್​.

ಗೆದ್ದವರಿಗೆ ಅಗ್ರಸ್ಥಾನ:

ಉಭಯ ತಂಡಗಳು ಈಗಾಗಲೇ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವು ದಾಖಲಿಸಿದರೆ ಪಾಯಿಂಟ್ಸ್​ ಟೇಬಲ್​ನಲ್ಲಿ 2ನೇ ಸ್ಥಾನದಿಂದ ಮೊದಲ ಸ್ಥಾನಕ್ಕೇರಲಿದೆ. ಹೀಗಾಗಿ ದ್ವಿತೀಯಾರ್ಧದ ಮೊದಲ ಮುಖಾಮುಖಿ ಉಭಯ ತಂಡಗಳಿಗೂ ಮಹತ್ವದ ಪಂದ್ಯವಾಗಿ ಮಾರ್ಪಟ್ಟಿದೆ.

ಹರ್ಮನ್​ಪ್ರೀತ್ ಕೌರ್ ಆಡ್ತಾರಾ?

ಕಳೆದ ಎರಡು ಪಂದ್ಯಗಳಿಂದ ಗಾಯದ ಕಾರಣ ಹೊರಗುಳಿದಿದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಮುಂಬೈ ಇಂಡಿಯನ್ಸ್ (MI) ತಂಡ: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್*, ಕ್ಲೋಯ್ ಟ್ರಯಾನ್*, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಹೇಲಿ ಮ್ಯಾಥ್ಯೂಸ್*, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್*, ಜಿಂಟಿಮಣಿ ಕಲಿತಾ, ನಟಾಲಿ ಸ್ಕೈವರ್*, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್*, ಎಸ್ ಸಜನಾ, ಅಮನ್‌ದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ: ಆಲಿಸ್ ಕ್ಯಾಪ್ಸೆ*, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್*, ಲಾರಾ ಹ್ಯಾರಿಸ್*, ಮರಿಜಾನ್ನೆ ಕಪ್*, ಮೆಗ್ ಲ್ಯಾನಿಂಗ್ (ನಾಯಕಿ), ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತಾನಿಯಾ, ಟಿಟಾಸ್ ಸಾಧು, ಅನ್ನಾಬೆಲ್ ಸದರ್ಲ್ಯಾಂಡ್*, ಅಪರ್ಣಾ ಮೊಂಡಲ್, , ಅಶ್ವನಿ ಕುಮಾರಿ.