AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಗೆಲ್ಲಲೇಬೇಕಾದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ

WPL 2024 Eliminator: ಮಹಿಳೆಯರ ಪ್ರೀಮಿಯರ್ ಲೀಗ್ 2024 ರ ಎಲಿಮಿನೇಟರ್ ಪಂದ್ಯವು ಇಂದು ಅಂದರೆ ಮಾರ್ಚ್ 15 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಎಲಿಮಿನೇಟರ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಸ್ಮೃತಿ ಮಂಧಾನಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿವೆ.

WPL 2024: ಗೆಲ್ಲಲೇಬೇಕಾದ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ
ಆರ್​ಸಿಬಿ- ಮುಂಬೈ
ಪೃಥ್ವಿಶಂಕರ
|

Updated on:Mar 15, 2024 | 7:14 PM

Share

ಮಹಿಳೆಯರ ಪ್ರೀಮಿಯರ್ ಲೀಗ್ (Women’s Premier League) 2024 ರ ಎಲಿಮಿನೇಟರ್ ಪಂದ್ಯವು ಇಂದು ಅಂದರೆ ಮಾರ್ಚ್ 15 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಎಲಿಮಿನೇಟರ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಸ್ಮೃತಿ ಮಂಧಾನಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (Mumbai Indians vs Royal Challengers Bangalore) ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡವು ಫೈನಲ್‌ಗೆ ಅರ್ಹತೆ ಪಡೆಯಲ್ಲಿದ್ದು ಅಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ (Smriti Mandhana) ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

ಮೇಲೆ ಹೇಳಿದಂತೆ ಈ ಪಂದ್ಯ ಉಭಯ ತಂಡಗಳಿಗೂ ವಿಶೇಷ ಎನಿಸಿದೆ. ಒಂದೆಡೆ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಪ್ರೀತ್ ಕೌರ್ ಬೆಂಗಳೂರನ್ನು ಸೋಲಿಸಿ ಫೈನಲ್ ಪ್ರವೇಶಿಸುವ ಇರಾದೆಯಲ್ಲಿದ್ದಾರೆ ಅದೇ ಸಮಯದಲ್ಲಿ, ಸ್ಮೃತಿ ಮಂಧಾನ ಕೂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ಫೈನಲ್ ಆಡುವ ನಿರೀಕ್ಷೆಯಲ್ಲಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಯಾವ ತಂಡವು ಫೈನಲ್‌ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗುತ್ತದೆ ಮತ್ತು ಯಾವ ತಂಡದ ಡಬ್ಲ್ಯುಪಿಎಲ್ ಪ್ರಯಾಣ ಇಲ್ಲಿಗೆ ಕೊನೆಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

WPL 2024: ಗೆದ್ದವರಿಗೆ ಫೈನಲ್ ಟಿಕೆಟ್; ಮುಂಬೈ ತಂಡವನ್ನು ಮಣಿಸುತ್ತಾ ಆರ್​ಸಿಬಿ?

ಮುಖಾಮುಖಿ ವರದಿ

ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೆ ನಾಲ್ಕು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ ಮೇಲುಗೈ ಸಾಧಿಸಿರುವುದನ್ನು ಕಾಣಬಹುದಾಗಿದೆ. ಈ ನಾಲ್ಕು ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ಮೂರು ಬಾರಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಮ್ಮೆ ಮಾತ್ರ ಗೆಲುವು ಸಾಧಿಸಿದೆ. ಮೊದಲ ಸೀಸನ್‌ನಲ್ಲಿ ಮುಂಬೈ ಇಂಡಿಯನ್ಸ್ ಎರಡೂ ಪಂದ್ಯಗಳನ್ನು ಗೆದ್ದಿದ್ದರೆ,  ಈ ಸೀಸನ್​ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್​ಗಳಿಂದ ಗೆಲುವು ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ತಂಡವನ್ನು 7 ವಿಕೆಟ್ ಮತ್ತು 30 ಎಸೆತಗಳಿಂದ ಸೋಲಿಸಿತ್ತು.

ಎರಡೂ ತಂಡಗಳ ಪ್ಲೇಯಿಂಗ್ XI

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಸೋಫಿ ಮೊಲಿನೆಕ್ಸ್, ಎಲಿಸ್ ಪೆರ್ರಿ, ಸೋಫಿ ಡಿವೈನ್, ರಿಚಾ ಘೋಷ್ (ವಿಕೆಟ್ ಕೀಪರ್), ಜಾರ್ಜಿಯಾ ವೇರ್ಹ್ಯಾಮ್, ದಿಶಾ ಕಾಸ್ಟ್, ಶ್ರೇಯಾಂಕಾ ಪಾಟೀಲ್, ಆಶಾ ಶೋಭನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಸಿಂಗ್.

ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸೈವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಪೂಜಾ ವಸ್ತ್ರಕರ್, ಎಸ್ ಸಜ್ನಾ, ಹುಮೈರಾ ಕಾಜಿ, ಶಬ್ನೀಮ್ ಇಸ್ಮಾಯಿಲ್, ಸೈಕಾ ಇಶಾಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:06 pm, Fri, 15 March 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!