WPL 2024 Final: ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ; ಆರ್ಸಿಬಿ ಮೊದಲು ಬೌಲಿಂಗ್
WPL 2024 Final: ಮಹಿಳಾ ಪ್ರೀಮಿಯರ್ ಲೀಗ್ ಎರಡನೇ ಆವೃತ್ತಿಯ ಅಂತಿಮ ಪಂದ್ಯ ಇಂದು ಅಂದರೆ ಮಾರ್ಚ್ 17 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಭಾರತದ ಅಭಿಮಾನಿಗಳು ಮಾತ್ರವಲ್ಲದೆ ಕೋಟ್ಯಂತರ ವಿದೇಶಿ ಅಭಿಮಾನಿಗಳು ಕೂಡ ಈ ಪಂದ್ಯದ ಬಗ್ಗೆ ಉತ್ಸುಕರಾಗಿದ್ದಾರೆ. ಈ ಫೈನಲ್ ಪಂದ್ಯದ ವಿಶೇಷವೆಂದರೆ ಹೊಸ ಫ್ರಾಂಚೈಸ್ ಈ ಸೀಸನ್ ವಿಜೇತರಾಗಲಿದೆ.

ಮಹಿಳಾ ಪ್ರೀಮಿಯರ್ ಲೀಗ್ (Women’s Premier League) ಎರಡನೇ ಆವೃತ್ತಿಯ ಅಂತಿಮ ಪಂದ್ಯ ಇಂದು ಅಂದರೆ ಮಾರ್ಚ್ 17 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಭಾರತದ ಅಭಿಮಾನಿಗಳು ಮಾತ್ರವಲ್ಲದೆ ಕೋಟ್ಯಂತರ ವಿದೇಶಿ ಅಭಿಮಾನಿಗಳು ಕೂಡ ಈ ಪಂದ್ಯದ ಬಗ್ಗೆ ಉತ್ಸುಕರಾಗಿದ್ದಾರೆ. ಈ ಫೈನಲ್ ಪಂದ್ಯದ ವಿಶೇಷವೆಂದರೆ ಹೊಸ ಫ್ರಾಂಚೈಸ್ ಈ ಸೀಸನ್ ವಿಜೇತರಾಗಲಿದೆ. ಮಹಿಳಾ ಪ್ರೀಮಿಯರ್ ಲೀಗ್ 2024 ರ ಅಂತಿಮ ಪಂದ್ಯ ದೆಹಲಿ ಮತ್ತು ಬೆಂಗಳೂರು (Delhi Capitals vs Royal Challengers Bangalore) ನಡುವೆ ನಡೆಯುತ್ತಿದ್ದು, ಇಲ್ಲಿಯವರೆಗೆ ಈ ಎರಡೂ ತಂಡಗಳು ಐಪಿಎಲ್ ಟ್ರೋಫಿ ಅಥವಾ ಡಬ್ಲ್ಯುಪಿಎಲ್ ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಈ ಸೀಸನ್ನಲ್ಲಿ ಚಾಂಪಿಯನ್ ಆಗುವ ತಂಡಕ್ಕೆ ಇದು ಚೊಚ್ಚಲ ಟ್ರೋಫಿ ಆಗಲಿದೆ.ಇನ್ನು ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು ಟಾಸ್ ಗೆದ್ದ ಡೆಲ್ಲಿ ನಾಯಕಿ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ದೆಹಲಿ- ಬೆಂಗಳೂರು ಮುಖಾಮುಖಿ
ಪಾಯಿಂಟ್ಸ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಫೈನಲ್ ಪ್ರವೇಶಿಸಿತ್ತು. ಇತ್ತ ಎಲಿಮಿನೇಟರ್ ಪಂಡ್ಯ ಆಡಿದ್ದ ಬೆಂಗಳೂರು ತಂಡ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತು. ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ಬಾರಿ ಮುಖಾಮುಖಿಯಾಗಿದ್ದು, ಈ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಅಂದರೆ ಆರ್ಸಿಬಿ ತಂಡ ಡೆಲ್ಲಿ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾದ್ಯವಾಗಿಲ್ಲ.
WPL 2024: ಆರ್ಸಿಬಿ- ಡೆಲ್ಲಿ ಫೈನಲ್ ಫೈಟ್; ಪಂದ್ಯವನ್ನು ಉಚಿತವಾಗಿ ವೀಕ್ಷಿಸುವುದು ಹೇಗೆ?
ಇನ್ನು ಈ ಸೀಸನ್ನಲ್ಲಿ ಉಭಯ ತಂಡಗಳು ನಡುವೆ ಎರಡು ಪಂದ್ಯಗಳು ನಡೆದಿವೆ. ಮೊದಲ ಪಂದ್ಯದಲ್ಲಿ ದೆಹಲಿ ತಂಡ ಬೆಂಗಳೂರು ತಂಡವನ್ನು 25 ರನ್‌ಗಳಿಂದ ಸೋಲಿಸಿತ್ತು. ಎರಡನೇ ಪಂದ್ಯದಲ್ಲಿ ಆರ್ಸಿಬಿ ಕೇವಲ ಒಂದು ರನ್‌ಗಳಿಂದ ವಿರೋಚಿತ ಸೋಲು ಕಂಡಿತ್ತು. ಹೀಗಾಗಿ ಆರ್ಸಿಬಿ ಈಗ ಚಾಂಪಿಯನ್ ಪಟ್ಟಕ್ಕೇರಬೇಕಾದರೆ ಅಜೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಲೇಬೇಕಾಗಿದೆ.
ಉಭಯ ತಂಡಗಳು
ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ ಕೇಪ್, ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಶಿಖಾ ಪಾಂಡೆ, ಮಿನ್ನು ಮಣಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಭಿನೇನಿ ಮೇಘನಾ, ಎಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್‌ಹ್ಯಾಮ್, ಶ್ರೇಯಾಂಕಾ ಪಾಟೀಲ್, ಆಶಾ ಶೋಭನಾ, ಶ್ರದ್ಧಾ ಪೋಕಕರ್, ಸಿಂಗ್ ರೆಡ್ ಥಾಕರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:01 pm, Sun, 17 March 24
