WPL 2024: ಸೋಲಿನಿಂದ ಕಂಗೆಟ್ಟಿರುವ GG ಗೆ RCB ಸವಾಲು

Gujarat Giants vs Royal Challengers Bangalore: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ದೆಹಲಿಯಲ್ಲಿ ಕಣಕ್ಕಿಳಿಯಲಿದೆ. ಅಂದರೆ ಆರ್​ಸಿಬಿ ಇದುವರೆಗೆ ಆಡಿದ 5 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿತ್ತು. ಇದೀಗ ದ್ವಿತೀಯಾರ್ಧದ 2ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಕಣಕ್ಕಿಳಿಯಲು ಆರ್​ಸಿಬಿ ಸಜ್ಜಾಗಿದೆ.

WPL 2024: ಸೋಲಿನಿಂದ ಕಂಗೆಟ್ಟಿರುವ GG ಗೆ RCB ಸವಾಲು
GG vs RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 06, 2024 | 8:45 AM

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಇಂದು ನಡೆಯಲಿರುವ ವುಮೆನ್ಸ್ ಪ್ರೀಮಿಯರ್ ಲೀಗ್​ನ 13ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ಮತ್ತು ಗುಜರಾತ್ ಜೈಂಟ್ಸ್ (GG) ತಂಡಗಳು ಮುಖಾಮುಖಿಯಾಗಲಿದೆ. ಈಗಾಗಲೇ ನಾಲ್ಕು ಪಂದ್ಯಗಳನ್ನಾಡಿರುವ ಗುಜರಾತ್ ಜೈಂಟ್ಸ್​ ತಂಡವು ಇದುವರೆಗೆ ಒಂದೇ ಒಂದು ಪಂದ್ಯ ಗೆದ್ದಿಲ್ಲ.

ಇದೀಗ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೇ ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ ಬೆತ್ ಮೂನಿ ಪಡೆ. ಅತ್ತ ಆರ್​ಸಿಬಿ ತಂಡವು ಆಡಿರುವ 5 ಪಂದ್ಯಗಳಲ್ಲಿ 3 ಜಯ ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದೆ.

ಒಂದು ವೇಳೆ ಗುಜರಾತ್ ಜೈಂಟ್ಸ್ ವಿರುದ್ಧ ಇಂದು ಆರ್​ಸಿಬಿ ತಂಡ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಸದ್ಯ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲ ಸ್ಥಾನದಲ್ಲಿದೆ.

ಉಭಯ ತಂಡಗಳ ಮುಖಾಮುಖಿ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಇದುವರೆಗೆ 3 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಗುಜರಾತ್ ಜೈಂಟ್ಸ್ ಒಂದು ಮ್ಯಾಚ್​ನಲ್ಲಿ ಗೆಲುವು ದಾಖಲಿಸಿದೆ. ಇನ್ನು ಈ ಬಾರಿಯ ಮೊದಲಾರ್ಧದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆರ್​ಸಿಬಿ 8 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಗೆಲ್ಲುವ ಫೇವರೇಟ್ ತಂಡವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುರುತಿಸಿಕೊಂಡಿದೆ.

ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ (ನಾಯಕಿ), ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಪ್ರಿಯಾ ಮಿಶ್ರಾ, ಲಾರೆನ್ ಚೀಟಲ್*, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್