WPL 2024: ಮೇಘನಾ- ರಿಚಾ ಸಿಡಿಲಬ್ಬರದ ಬ್ಯಾಟಿಂಗ್; ಬಿಗ್ ಟಾರ್ಗೆಟ್ ನೀಡಿದ ಆರ್​ಸಿಬಿ

WPL 2024: ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಮಹಿಳಾ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿತು. ಈ ಮೂಲಕ ಯುಪಿ ವಾರಿಯರ್ಸ್​ ತಂಡಕ್ಕೆ 158 ರನ್ ಟಾರ್ಗೆಟ್ ನೀಡಿದೆ. ಆರ್​ಸಿಬಿ ಪರ ಬ್ಯಾಟಿಂಗ್​ನಲ್ಲಿ ಮಿಂಚಿದ ಮೇಘನಾ ಹಾಗೂ ರಿಚಾ ಘೋಷ್ ಕ್ರಮವಾಗಿ 53, 62 ರನ್ ಕಲೆಹಾಕುವ ಮೂಲಕ ತಂಡವನ್ನು ಬೃಹತ್ ಮೊತ್ತಕ್ಕೆ ಕೊಂಡೊಯ್ದರು.

WPL 2024: ಮೇಘನಾ- ರಿಚಾ ಸಿಡಿಲಬ್ಬರದ ಬ್ಯಾಟಿಂಗ್; ಬಿಗ್ ಟಾರ್ಗೆಟ್ ನೀಡಿದ ಆರ್​ಸಿಬಿ
ಮೇಘನಾ- ರಿಚಾ
Follow us
ಪೃಥ್ವಿಶಂಕರ
|

Updated on:Feb 24, 2024 | 9:20 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) ಎರಡನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್​ ಹಾಗೂ ಯುಪಿ ವಾರಿಯರ್ಸ್​ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ನಾಯಕಿ ಅಲಿಸ್ಸಾ ಹೀಲಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಮಹಿಳಾ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿತು. ಈ ಮೂಲಕ ಯುಪಿ ವಾರಿಯರ್ಸ್​ ತಂಡಕ್ಕೆ 158 ರನ್ ಟಾರ್ಗೆಟ್ ನೀಡಿದೆ. ಆರ್​ಸಿಬಿ ಪರ ಬ್ಯಾಟಿಂಗ್​ನಲ್ಲಿ ಮಿಂಚಿದ ಮೇಘನಾ (Sabbhineni Meghana) ಹಾಗೂ ರಿಚಾ ಘೋಷ್ (Richa Ghosh) ಕ್ರಮವಾಗಿ 53, 62 ರನ್ ಕಲೆಹಾಕುವ ಮೂಲಕ ತಂಡವನ್ನು ಬೃಹತ್ ಮೊತ್ತಕ್ಕೆ ಕೊಂಡೊಯ್ದರು.

ಆರ್​ಸಿಬಿಗೆ ಕಳಪೆ ಆರಂಭ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಪರ  ಆರಂಭಿಕರಾಗಿ ಕಣಕ್ಕಿಳಿದ ನಾಯಕಿ ಸ್ಮೃತಿ ಮಂಧಾನ ಹಾಗೂ ಸೋಫಿ ಡಿವೈನ್​ಗೆ ಉತ್ತಮ ಆರಂಭ ಒದಗಿಸಲು ಸಾಧ್ಯವಾಗಲಿಲ್ಲ.  ಮೂರನೇ ಓವರ್​ನಲ್ಲೇ ಸ್ಫೋಟಕ ಬ್ಯಾಟರ್ ಸೋಫಿ ಕೇವಲ 1 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ನಾಯಕಿ ಸ್ಮೃತಿ ಬ್ಯಾಟ್ 13 ರನ್​ಗಳಿಗೆ ಸುಸ್ತಾಯಿತು. ಬಳಿಕ ಬಂದ ಎಲ್ಲಿಸ್ ಪೆರ್ರಿ ಕೂಡ 8 ರನ್​ಗಳ ಪೆವಿಲಿಯನ್ ಸೇರಿಕೊಂಡರು.

ಮೇಘನಾ- ರಿಚಾ ಅರ್ಧಶತಕ

ಇಲ್ಲಿಂದ ತಂಡದ ಇನ್ನಿಂಗ್ಸ್ ನಿಭಾಯಿಸುವ ಜವಬ್ದಾರಿ ಹೊತ್ತ ಸಬ್ಬಿನೇನಿ ಮೇಘನಾ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಸಿಡಿಲಬ್ಬದ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು 100 ರನ್​ಗಳ ಗಡಿ ದಾಟಿಸಿದರು. ಈ ವೇಳೆ ಇಬ್ಬರೂ ಅರ್ಧಶತಕ ಸಿಡಿಸಿದಲ್ಲದೆ, ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು. ಈ ಇಬ್ಬರ ಆಟದಿಂದಾಗಿ ಆರ್​ಸಿಬಿ ತಂಡ 157 ರನ್​ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ಸಾಧ್ಯವಾಯಿತು.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಶೋಭಾನಾ ಆಶಾ, ರೇಣುಕಾ ಠಾಕೂರ್ ಸಿಂಗ್.

ಯುಪಿ ವಾರಿಯರ್ಜ್: ಅಲಿಸ್ಸಾ ಹೀಲಿ(ನಾಯಕಿ), ಸೋಫಿ ಎಕ್ಲೆಸ್ಟೋನ್, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್, ಕಿರಣ್ ನವಗಿರೆ, ವೃಂದಾ ದಿನೇಶ್, ಪೂನಂ ಖೇಮ್ನಾರ್, ಶ್ವೇತಾ ಸೆಹ್ರಾವತ್, ಗ್ರೇಸ್ ಹ್ಯಾರಿಸ್, ಸೈಮಾ ಠಾಕೋರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Sat, 24 February 24

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು