WPL 2024: ಲೀಗ್ನಲ್ಲಿ ಸತತ 2ನೇ ಗೆಲುವು ದಾಖಲಿಸಿದ ಮುಂಬೈ; ಗುಜರಾತ್ಗೆ ಸೋಲಿನ ಆರಂಭ
WPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ನ ಮೂರನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸಿದ ಮುಂಬೈ ಇಂಡಿಯನ್ಸ್ ಲೀಗ್ನಲ್ಲಿ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ನ (Women’s Premier League) ಮೂರನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸಿದ ಮುಂಬೈ ಇಂಡಿಯನ್ಸ್ (Gujarat Giants vs Mumbai Indians) ಲೀಗ್ನಲ್ಲಿ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಮೊದಲ ಪಂದ್ಯದಂತೆಯೇ ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 129 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ 18.1 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.
ತತ್ತರಿಸಿದ ಗುಜರಾತ್ ಇನ್ನಿಂಗ್ಸ್
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ತಂಡಕ್ಕೆ ಒಳ್ಳೇಯ ಆರಂಭ ಸಿಗಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದಿದ್ದ ಕನ್ನಡತಿ ವೇದಾ ಕೃಷ್ಣಮೂರ್ತಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಹರ್ಲೀನ್ ಡಿಯೋಲ್ ಕೂಡ 8 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡರು. ಫೋಬೆ ಲಿಚ್ಫೀಲ್ಡ್ 7 ರನ್ಗಳಿಗೆ ಸುಸ್ತಾದರೆ, ದಯಾಳನ್ ಹೇಮಲತಾ 3 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡರು. ಭರವಸೆಯ ಆಟಗಾರ್ತಿಯ ಆಶ್ಲೇ ಗಾರ್ಡ್ನರ್ 15 ರನ್ ಬಾರಿಸಲಷ್ಟೇ ಶಕ್ತರಾದರು.
WPL 2024: ಮತ್ತೆ ಟಾಸ್ ಗೆದ್ದ ಮುಂಬೈ; ಗುಜರಾತ್ ಮೊದಲು ಬ್ಯಾಟಿಂಗ್
ಆದರೆ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕಿ ಬೆಥ್ ಮೂನಿ 22 ರನ್ಗಳ ತಾಳ್ಮೆಯ ಇನ್ನಿಂಗ್ಸ್ ಆಡಿ ತಂಡಕ್ಕೆ ಕೊಂಚ ನೆರವಾದರು. ಇವರನ್ನು ಹೊರತುಪಡಿಸಿ ಕೊನೆಯಲ್ಲಿ ಕೊಂಚ ಪ್ರತಿರೋಧ ತೋರಿದ ಕ್ಯಾಥರಿನ್ ಎಮ್ಮಾ ಬ್ರೈಸ್ 25 ರನ್ ಹಾಗೂ ತನುಜಾ ಕನ್ವರ್ 28 ರನ್ ಕಲೆಹಾಕಿ ತಂಡವನ್ನು 128 ರನ್ಗಳಿಗೆ ಕೊಂಡೊಯ್ದರು. ಮುಂಬೈ ಪರ ಬೌಲಿಂಗ್ನಲ್ಲಿ ಮಿಂಚಿದ ಅಮೆಲಿಯಾ ಕೆರ್ 4 ವಿಕೆಟ್ ಪಡೆದರೆ, ಶಬ್ನಿಮ್ ಇಸ್ಮಾಯಿಲ್ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಮುಂಬೈಗೂ ಆರಂಭಿಕ ಆಘಾತ
ಗುಜರಾತ್ ನೀಡಿದ ಅಲ್ಪ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ತಂಡಕ್ಕೂ ಆರಂಭಿಕ ಆಘಾತ ಎದುರಾಯಿತು. ಆರಂಭಿಕರಾದ ಯಾಸ್ತಿಕಾ ಭಾಟಿಯಾ ಹಾಗೂ ಹೇಲಿ ಮ್ಯಾಥ್ಯೂಸ್ ತಲಾ 7 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು. ಈ ಇಬ್ಬರ ನಂತರ ಬಂದ ನ್ಯಾಟ್ ಸ್ಕಿವರ್-ಬ್ರಂಟ್ 22 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಆದರೆ ನಾಯಕಿಯ ಜವಬ್ದಾರಿ ನಿರ್ವಹಿಸಿದ ಹರ್ಮನ್‌ಪ್ರೀತ್ ಅಜೇಯ 46 ರನ್ ಸಿಡಿಸಿ ತಂಡವನ್ನು ಜಯದ ದಡ ಸೇರಿಸಿದರೆ, ಅಮೆಲಿಯಾ ಕೆರ್ 31 ರನ್ಗಳ ಗೆಲುವಿನ ಇನ್ನಿಂಗ್ಸ್ ಆಡಿದರು.
ಉಭಯ ತಂಡಗಳು
ಗುಜರಾತ್ ತಂಡ- ಬೆತ್ ಮೂನಿ (ನಾಯಕಿ), ಸ್ನೇಹ ರಾಣಾ, ಲಿಯಾ ತಹುಹು, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್, ಹರ್ಲೀನ್ ಡಿಯೋಲ್, ಆಶ್ಲೀ ಗಾರ್ಡ್ನರ್, ಮೇಘನಾ ಸಿಂಗ್, ಕ್ಯಾಥರಿನ್ ಬ್ರೈಸ್, ವೇದಾ ಕೃಷ್ಣಮೂರ್ತಿ, ದಯಾಲನ್ ಹೇಮಲತಾ.
ಮುಂಬೈ ತಂಡ- ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ಕಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಅಮಂಜೋತ್ ಕೌರ್, ಸಜೀವನ್ ಸಜನಾ, ಶಬ್ನಿಮ್ ಇಸ್ಮಾಯಿಲ್, ಕೀರ್ತನಾ ಬಾಲಕೃಷ್ಣನ್, ಸೈಕಾ ಇಶಾಕ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:43 pm, Sun, 25 February 24