WPL 2024: ಕಳಪೆ ಪ್ರದರ್ಶನ; ಲೀಗ್​ನಲ್ಲಿ ಆರ್​ಸಿಬಿಗೆ ಸತತ 2ನೇ ಹೀನಾಯ ಸೋಲು

WPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ತಂಡ ಲೀಗ್​ನಲ್ಲಿ ಮೂರನೇ ಜಯ ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

WPL 2024: ಕಳಪೆ ಪ್ರದರ್ಶನ; ಲೀಗ್​ನಲ್ಲಿ ಆರ್​ಸಿಬಿಗೆ ಸತತ 2ನೇ ಹೀನಾಯ ಸೋಲು
ಮುಂಬೈ ತಂಡ
Follow us
ಪೃಥ್ವಿಶಂಕರ
|

Updated on:Mar 02, 2024 | 10:25 PM

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL 2024)​ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ತಂಡ (Royal Challengers Bangalore vs Mumbai Indians) ಲೀಗ್​ನಲ್ಲಿ ಮೂರನೇ ಜಯ ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 131 ರನ್​ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಆರಂಭಿಕರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ 15 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

ಆರ್​ಸಿಬಿ ಟಾಪ್ ಆರ್ಡರ್ ಫ್ಲಾಪ್

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ 14 ರನ್​ಗಳಿರುವಾಗ ನಾಯಕಿ ಸ್ಮೃತಿ ಮಂಧಾನ ಕೇವಲ 9 ರನ್​ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಅವರ ಹಿಂದೆ ಬಂದ ಮೇಘನಾ ಕೂಡ 11 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ಸೋಫಿ ಡಿವೈನ್ ಇನ್ನಿಂಗ್ಸ್ ಕೂಡ 9 ರನ್​ಗಳಿಗೆ ಅಂತ್ಯಗೊಂಡಿತು. ಸ್ಫೋಟಕ ಬ್ಯಾಟರ್ ರಿಚಾ ಘೋಷ್ ಆಟವೂ 7 ರನ್​ಗಳಿಗೆ ಕೊನೆಗೊಂಡಿತು. ಹೀಗಾಗಿ ತಂಡ 42 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

WPL 2024: ಬೆಂಗಳೂರಿನಲ್ಲಿ ಬಲಿಷ್ಠ ತಂಡಗಳ ನಡುವೆ ಫೈಟ್; ಆರ್​ಸಿಬಿ ಮೊದಲು ಬ್ಯಾಟಿಂಗ್

ಎಲ್ಲಿಸಾ ಪೆರ್ರಿ ಏಕಾಂಗಿ ಹೋರಾಟ

ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಎಲ್ಲಿಸಾ ಪೆರ್ರಿ 38 ಎಸೆತಗಳಲ್ಲಿ 5 ಬೌಂಡರಿ ಸಹಿತ 44 ರನ್​ಗಳ ಇನ್ನಿಂಗ್ಸ್ ಆಡಿದರು. ಕೆಳಕ್ರಮಾಂಕದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ ಜಾರ್ಜಿಯಾ ವೇರ್ಹ್ಯಾಮ್ 3 ಬೌಂಡರಿ ಸಹಿತ 27 ರನ್​ಗಳ ಕಾಣಿಕೆ ನೀಡಿದರು. ಈ ಇಬ್ಬರ ಆಟದಿಂದಾಗಿ ತಂಡ 131 ರನ್ ಕಲೆಹಾಕಲು ಸಾಧ್ಯವಾಯಿತು. ಮುಂಬೈ ಪರ ಬೌಲಿಂಗ್​ನಲ್ಲಿ ಮಿಂಚಿದ ನ್ಯಾಟ್ ಸ್ಕಿವರ್-ಬ್ರಂಟ್ ಹಾಗೂ ಪೂಜಾ ವಸ್ತಾಕರ್ ತಲಾ 2 ವಿಕೆಟ್ ಪಡೆದರು.

ಮುಂಬೈಗೆ ಸುಲಭ ಜಯ

ಆರ್​ಸಿಬಿ ತಂಡವನ್ನು ಅಲ್ಪರನ್​ಗಳಿಗೆ ಕಟ್ಟಿಹಾಕಿ ಗುರಿ ಬೆನ್ನಟ್ಟಿದ ಮುಂಬೈ ತಂಡಕ್ಕೆ ಯಾಸ್ತಿಕಾ ಭಾಟಿಯಾ ಹಾಗೂ ಹೇಲಿ ಮ್ಯಾಥ್ಯೂಸ್ ಸ್ಫೋಟಕ ಆರಂಭ ಒದಗಿಸಿದರು. ಈ ಇಬ್ಬರು ಮೊದಲ ವಿಕೆಟ್​ಗೆ 45 ರನ್​ಗಳ ಜೊತೆಯಾಟ ಕೂಡ ಹಂಚಿಕೊಂಡರು. ಈ ಹಂತದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಯಾಸ್ತಿಕಾ ಕೇವಲ 15 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 31 ರನ್ ಸಿಡಿಸಿದರೆ, ಹೇಲಿ ಮ್ಯಾಥ್ಯೂಸ್ 26 ರನ್​ಗಳ ಕೊಡುಗೆ ನೀಡಿದರು. ನಾಯಕಿ ನ್ಯಾಟ್ ಸ್ಕಿವರ್-ಬ್ರಂಟ್ ಇನ್ನಿಂಗ್ಸ್ 27 ರನ್​ಗಳಿಗೆ ಕೊನೆಗೊಂಡಿತು.  ಅಮೆಲಿಯಾ ಕೆರ್ ಅಜೇಯ 40 ರನ್ ಬಾರಿಸಿದರೆ,  ಪೂಜಾ ವಸ್ತ್ರಕರ್ ಅಜೇಯ 8 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಉಭಯ ತಂಡಗಳ ಪ್ಲೇಯಿಂಗ್ 11

ಆರ್​ಸಿಬಿ ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವಾರೆಹಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಆಶಾ ಶೋಭಾನಾ, ರೇಣುಕಾ ಠಾಕೂರ್ ಸಿಂಗ್.

ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ(ವಿಕೆಟ್ ಕೀಪರ್), ನೇಟ್ ಸಿವರ್-ಬ್ರಂಟ್(ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಎಸ್ ಸಜ್ನಾ, ಅಮಾನ್ಜೋತ್ ಕೌರ್, ಹುಮೈರಾ ಕಾಜಿ, ಕೀರ್ತನ್ ಬಾಲಕೃಷ್ಣನ್, ಸೈಕಾ ಇಶಾಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:23 pm, Sat, 2 March 24

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ