WPL 2024: ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ; ಉಭಯ ತಂಡಗಳು ಹೀಗಿವೆ

WPL 2024: ಮಹಿಳೆಯರ ಪ್ರೀಮಿಯರ್ ಲೀಗ್‌ನ ಎರಡನೇ ಆವೃತ್ತಿ ಇಂದು ಆರಂಭವಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.

WPL 2024: ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ; ಉಭಯ ತಂಡಗಳು ಹೀಗಿವೆ
ಮಹಿಳಾ ಪ್ರೀಮಿಯರ್ ಲೀಗ್
Follow us
ಪೃಥ್ವಿಶಂಕರ
|

Updated on:Feb 23, 2024 | 8:34 PM

ಮಹಿಳೆಯರ ಪ್ರೀಮಿಯರ್ ಲೀಗ್‌ನ (Women’s Premier League) ಎರಡನೇ ಆವೃತ್ತಿ ಇಂದು ಆರಂಭವಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ( Mumbai Indians vs Delhi Capitals) ತಂಡಗಳು ಮುಖಾಮುಖಿಯಾಗಿವೆ. ಚೊಚ್ಚಲ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್​ಪ್ರೀತ್ ಕೌರ್ (Harmanpreet Kaur) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಮೆಗ್ ಲ್ಯಾನಿಂಗ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಈ ಪಂದ್ಯದ ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲಿ ಯಾರಿಗೆಲ್ಲ ಅವಕಾಶ ಸಿಕ್ಕಿದೆ ಎಂಬುದರ ವಿವರ ಇಲ್ಲಿದೆ.

ಉಭಯ ತಂಡಗಳು

ಮುಂಬೈ ಇಂಡಿಯನ್ಸ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ನ್ಯಾಟ್ ಸಿವರ್-ಬ್ರಂಟ್, ಯಾಸ್ತಿಕಾ ಭಾಟಿಯಾ, ಹೇಲಿ ಮ್ಯಾಥ್ಯೂಸ್, ಅಮೆಲಿಯಾ ಕೆರ್, ಅಮನ್ಜೋತ್ ಕೌರ್, ಎಸ್ ಸಜನಾ, ಪೂಜಾ ವಸ್ತ್ರಾಕರ್, ಶಬ್ನಿಮ್ ಇಸ್ಮಾಯಿಲ್, ಕೀರ್ತನಾ ಬಾಲಕೃಷ್ಣನ್, ಸೈಕಾ ಇಶಾಕ್.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸೆ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕೆಂಪ್, ಅನ್ನಾಬೆಲ್ ಸದರ್ಲ್ಯಾಂಡ್, ಅರುಂಧತಿ ರೆಡ್ಡಿ, ಮಿನ್ನು ಮಣಿ, ತಾನಿಯಾ ಭಾಟಿಯಾ, ರಾಧಾ ಯಾದವ್, ಶಿಖಾ ಪಾಂಡೆ.

ಅದ್ಧೂರಿಯಾಗಿ ನಡೆದ ಉದ್ಘಾಟನಾ ಸಮಾರಂಭ

ಇದಕ್ಕೂ ಮುನ್ನ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್​​ನ ಸ್ಟಾರ್ ತಾರೆಯರು ಪ್ರದರ್ಶನ ನೀಡಿದರು. ಸ್ಟಾರ್ ನಟರಾದ ವರುಣ್ ಧವನ್,  ಶಾಹೀದ್ ಕಪೂರ್, ಕಾರ್ತಿಕ್ ಆರ್ಯನ್, ಸಿದ್ಧಾರ್ಥ್ ಮಲ್ಲೋತ್ರ, ಶಾರುಖ್ ಖಾನ್ ವಿವಿದ ಹಾಡುಗಳಿಗೆ ಭರ್ಜರಿ ಸ್ಟೆಪ್ ಹಾಕಿ ಅಭಿಮಾನಿಗಳನ್ನು ರಂಜಿಸಿದರು.

ಯುವ ನಟ ಕಾರ್ತಿಕ್ ಆರ್ಯನ್ ‘ಯಾ ಮೇ ಗಲಾತ್ ಮತ್ತು ದಿಲ್ ಚೋರಿ ಸದ್ದಾ ಹೋ ಗಯಾ’ ಹಾಡಿಗೆ ಅದ್ಭುತ ನೃತ್ಯ ಪ್ರದರ್ಶನ ನೀಡುವ ಮೂಲಕ ಎಲ್ಲರ ಹೃದಯ ಗೆದ್ದರು.

ಶೇರ್​ಷಾ ಖ್ಯಾತಿಯ ಸಿದ್ಧಾರ್ಥ್ ಮಲ್ಹೋತ್ರಾ ತಮ್ಮದೇ ನಟನೆಯ ಚಿತ್ರದ ರಾತನ್ ಲಂಬಿಯಾನ್ ರೀಮಿಕ್ಸ್‌ ಹಾಡಿಗೆ ಸ್ಟೇಪ್ಸ್ ಹಾಕಿದರು.

ನಂತರ ಬಂದ ಶಾಹಿದ್ ಕಪೂರ್ ‘ಜಬ್ ವಿ ಮೆಟ್’ ಸೇರಿದಂತೆ ಅವರ ನಟನೆಯ ಕೆಲವು ಹಿಟ್‌ ಹಾಡುಗಳಿಗೆ ಅದ್ಭುತವಾಗಿ ನೃತ್ಯ ಮಾಡಿದರು.

ವರುಣ್ ಧವನ್ ಕೂಡ ‘ಅಪ್ನಾ ಬನಾ ಲೆ’, ‘ಪಾಲತ್’, ‘ಬೇಷರ್ಮಿ ಕಿ ಹೈಟ್’ ಮತ್ತು ‘ಮುಕಾಬಲಾ’ ಮುಂತಾದ ಅನೇಕ ಹಾಡುಗಳಿಗೆ ಭರ್ಜರಿ ಸ್ಟೆಪ್ಸ್ ಹಾಕಿದರು.

ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ ಟೈಗರ್ ಶ್ರಾಫ್ ಅವರು ‘ವಿಸಲ್ ಬಾಜಾ’, ‘ಘುಂಘರೂ’ ಮತ್ತು ಇತರ ಹಾಡುಗಳಿಗೆ ಕುಣಿದು ಕುಪ್ಪಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 pm, Fri, 23 February 24

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’