WPL 2024: ಸೋತ ತಂಡಗಳ ನಡುವೆ ಕದನ; ಟಾಸ್ ಗೆದ್ದ ಮುಂಬೈ
WPL 2024: ಮಹಿಳೆಯರ ಪ್ರೀಮಿಯರ್ ಲೀಗ್‌ನ ಎರಡನೇ ಆವೃತ್ತಿಯ 14ನೇ ಪಂದ್ಯ ಪಾಯಿಂಟ್ ಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳ ನಡುವೆ ನಡೆಯುತ್ತಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಈ ಪಂದ್ಯ ಉಭಯ ತಂಡಗಳಿಗೂ ಬಹಳ ಮುಖ್ಯವಾಗಿದೆ.

ಮಹಿಳೆಯರ ಪ್ರೀಮಿಯರ್ ಲೀಗ್‌ನ (Women’s Premier League) ಎರಡನೇ ಆವೃತ್ತಿಯ 14ನೇ ಪಂದ್ಯ ಪಾಯಿಂಟ್ ಪಟ್ಟಿಯಲ್ಲಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ (UP Warriorz vs Mumbai Indians) ತಂಡಗಳ ನಡುವೆ ನಡೆಯುತ್ತಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಈ ಪಂದ್ಯ ಉಭಯ ತಂಡಗಳಿಗೂ ಬಹಳ ಮುಖ್ಯವಾಗಿದೆ. ಏಕೆಂದರೆ ಎರಡೂ ತಂಡಗಳು ತಮ್ಮ ಹಿಂದಿನ ಪಂದ್ಯಗಳಲ್ಲಿ ಸೋತಿದ್ದವು. ಇದೀಗ ಈ ಪಂದ್ಯದಲ್ಲಿ ಉಭಯ ತಂಡಗಳು ಹೊಸ ತಂತ್ರದೊಂದಿಗೆ ಕಣಕ್ಕಿಳಿಯಲಿದ್ದು, ಗೆಲುವಿಗೆ ಇನ್ನಿಲ್ಲದ ಕಸರತ್ತು ನಡೆಸಲಿವೆ. ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿದ್ದರೆ, ಇತ್ತ ಯುಪಿ ವಾರಿಯರ್ಸ್ ತನ್ನ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತಿತ್ತು. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ಮುಂಬೈ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಹಾಗೆಯೇ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಬಹಿರಂಗವಾಗಿದೆ.
ಎರಡೂ ತಂಡಗಳು ಹೀಗಿವೆ
ಮುಂಬೈ ಇಂಡಿಯನ್ಸ್ : ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸೈವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಅಮನ್ಜೋತ್ ಕೌರ್, ಎಸ್ ಸಜ್ನಾ, ಹುಮೈರಾ ಕಾಜಿ, ಶಬ್ನೀಮ್ ಇಸ್ಮಾಯಿಲ್, ಸೈಕಾ ಇಶಾಕ್.
ಯುಪಿ ವಾರಿಯರ್ಸ್: ಅಲಿಸ್ಸಾ ಹೀಲಿ (ವಿಕೆಟ್‌ಕೀಪರ್/ನಾಯಕಿ), ಕಿರಣ್ ನವಗಿರೆ, ಚಾಮರಿ ಅಥಾಪತು, ಗ್ರೇಸ್ ಹ್ಯಾರಿಸ್, ಶ್ವೇತಾ ಸೆಹ್ರಾವತ್, ದೀಪ್ತಿ ಶರ್ಮಾ, ಪೂನಂ ಖೇಮ್ನಾರ್, ಸೋಫಿ ಎಕ್ಲೆಸ್ಟೋನ್, ಉಮಾ ಚೆಟ್ರಿ, ರಾಜೇಶ್ವರಿ ಗಾಯಕ್‌ವಾಡ್, ಸೈಮಾ.
WPL 2024: ಸ್ಮೃತಿ- ಪೆರ್ರಿ ಆಟಕ್ಕೆ ತಲೆಬಾಗಿದ ಯುಪಿ; ತವರಿನಲ್ಲಿ ಕೊನೆಯ ಪಂದ್ಯ ಗೆದ್ದ ಆರ್ಸಿಬಿ
ಮುಂಬೈನ ಅಗ್ರ ಕ್ರಮಾಂಕ ವಿಫಲ
ಮುಂಬೈ ಇಂಡಿಯನ್ಸ್‌ನ ಅಗ್ರ ಕ್ರಮಾಂಕದ ವೈಫಲ್ಯ ತಂಡಕ್ಕೆ ತಲೆನೋವಾಗಿದೆ. ಕಳೆದ ಪಂದ್ಯದಲ್ಲಿ ಯಾಸ್ತಿಕಾ ಭಾಟಿಯಾ, ನ್ಯಾಟ್ ಸಿವರ್-ಬ್ರಂಟ್ ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ ಎರಡಂಕಿ ದಾಟಲು ಸಾಧ್ಯವಾಗಲಿಲ್ಲ. ಆರಂಭಿಕ ಬ್ಯಾಟರ್ ಹೇಯ್ಲಿ ಮ್ಯಾಥ್ಯೂಸ್ 17 ಎಸೆತಗಳಲ್ಲಿ 29 ರನ್ಗಳ ಇನ್ನಿಂಗ್ಸ್ ಆಡಿದರೂ ಈ ಇನ್ನಿಂಗ್ಸ್ ಅನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಅವರಿಗೆ ಸಾಧ್ಯವಾಗಲಿಲ್ಲ. ಹೀಗಾಗಿ ಯುಪಿ ಬೌಲರ್‌ಗಳ ವಿರುದ್ಧ ಅಗ್ರ ಕ್ರಮಾಂಕ ಅದ್ಭುತ ಪ್ರದರ್ಶನ ನೀಡಬೇಕಾಗುತ್ತದೆ.
ಯುಪಿ ಸ್ಥಿತಿಯೂ ಹದಗೆಟ್ಟಿದೆ
ಸದ್ಯ ಯುಪಿ ವಾರಿಯರ್ಸ್ ಸ್ಥಿತಿಯೂ ಮುಂಬೈ ಇಂಡಿಯನ್ಸ್ನಂತೆ ಆಗಿದೆ. ತಂಡದ ಬ್ಯಾಟರ್ಗಳು ರನ್ ಗಳಿಸಿದರೆ, ಬೌಲಿಂಗ್ ವಿಫಲವಾಗುತ್ತದೆ. ಬೌಲಿಂಗ್ ಉತ್ತಮವಾಗಿದ್ದರೆ, ಬ್ಯಾಟಿಂಗ್ ವಿಫಲವಾಗುತ್ತದೆ. ಆದರೆ, ಅಲಿಸ್ಸಾ ಹೀಲಿ ನಾಯಕತ್ವದ ಯುಪಿ ವಾರಿಯರ್ಸ್ ಇಂದಿನ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಬೇಕಿದೆ. ಇದರಿಂದಾಗಿ ಅವರು ಈ ಪಂದ್ಯವನ್ನು ಗೆದ್ದು ಅಗ್ರ ಮೂರರಲ್ಲಿ ಸ್ಥಾನ ಪಡೆಯುವ ಭರವಸೆಯನ್ನು ಉಳಿಸಿಕೊಳ್ಳಬಹುದಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:03 pm, Thu, 7 March 24
