WPL 2024: ಮತ್ತೆ ಟಾಸ್ ಗೆದ್ದ ಮುಂಬೈ; ಗುಜರಾತ್ ಮೊದಲು ಬ್ಯಾಟಿಂಗ್
WPL 2024: ಮಹಿಳೆಯರ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ನ ಮೂರನೇ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮುಂಬೈ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಮಹಿಳೆಯರ ಪ್ರೀಮಿಯರ್ ಲೀಗ್‌ನ (Women’s Premier League) ಎರಡನೇ ಸೀಸನ್‌ನ ಮೂರನೇ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ (Gujarat Giants vs Mumbai Indians) ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮುಂಬೈ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಅದರಂತೆ ಟಾಸ್ ಸೋತ ಗುಜರಾತ್ ಜೈಂಟ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ನಡೆಯುತ್ತಿರುವ ಟೂರ್ನಿಯ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿದ್ದ ಮುಂಬೈ ಇಂಡಿಯನ್ಸ್ ತಂಡ ಕೊನೆಯ ಎಸೆತದಲ್ಲಿ ಗೆಲುವು ಸಾಧಿಸಿ ಲೀಗ್ನಲ್ಲಿ ಗೆಲುವಿನ ಶುಭಾರಂಭ ಮಾಡಿತ್ತು. ಇತ್ತ ಸೀಸನ್‌ನ ಮೊದಲ ಪಂದ್ಯವನ್ನಾಡುತ್ತಿರುವ ಗುಜರಾತ್ ಜೈಂಟ್ಸ್ ತಂಡಕ್ಕೆ ಮುಂಬೈ ಮಣಿಸುವ ಬಿಗ್ ಚಾಲೆಂಜ್ ಎದುರಾಗಿದೆ. ಇನ್ನು ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಸಹ ಹೊರಬಿದ್ದಿದೆ.
ಎರಡೂ ತಂಡಗಳು
ಗುಜರಾತ್ ತಂಡ- ಬೆತ್ ಮೂನಿ (ನಾಯಕಿ), ಸ್ನೇಹ ರಾಣಾ, ಲಿಯಾ ತಹುಹು, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್, ಹರ್ಲೀನ್ ಡಿಯೋಲ್, ಆಶ್ಲೀ ಗಾರ್ಡ್ನರ್, ಮೇಘನಾ ಸಿಂಗ್, ಕ್ಯಾಥರಿನ್ ಬ್ರೈಸ್, ವೇದಾ ಕೃಷ್ಣಮೂರ್ತಿ, ದಯಾಲನ್ ಹೇಮಲತಾ.
ಮುಂಬೈ ತಂಡ- ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಸ್ಕಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಅಮಂಜೋತ್ ಕೌರ್, ಸಜೀವನ್ ಸಜನಾ, ಶಬ್ನಿಮ್ ಇಸ್ಮಾಯಿಲ್, ಕೀರ್ತನಾ ಬಾಲಕೃಷ್ಣನ್, ಸೈಕಾ ಇಶಾಕ್.
WPL 2024: ಮೇಘನಾ, ರಿಚಾ, ಆಶಾ ಸೂಪರ್ ಶೋ; ಲೀಗ್ನಲ್ಲಿ ಗೆಲುವಿನ ಶುಭಾರಂಭ ಮಾಡಿದ ಆರ್ಸಿಬಿ..!
ಉಭಯ ತಂಡಗಳ ಪ್ರದರ್ಶನ
ಮೊದಲ ಆವೃತ್ತಿಯಲ್ಲಿ ಗುಜರಾತ್ ಜೈಂಟ್ಸ್ ತಂಡದ ಪ್ರದರ್ಶನ ತುಂಬಾ ಕೆಟ್ಟದಾಗಿತ್ತು. ತಂಡವು ಆಡಿದ 8 ಪಂದ್ಯಗಳಲ್ಲಿ ಕೇವಲ ಎರಡನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಹೀಗಾಗಿ ತಂಡವು ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನ ಗಳಿಸಿತು. ಆದರೆ ಇದಕ್ಕೆ ತದ್ವಿರುದ್ಧವಾಗಿ ಮುಂಬೈ ತಂಡ ಕಳೆದ ಆವೃತ್ತಿಯ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಅಲ್ಲದೆ ಕಳೆದ ಆವೃತ್ತಿಯಲ್ಲಿ ಉಭಯ ತಂಡಗಳು 2 ಬಾರಿ ಮುಖಾಮುಖಿಯಾಗಿದ್ದವು. ಆದರೆ ಆಡಿದ ಎರಡೂ ಪಂದ್ಯಗಳನ್ನು ಗೆದ್ದುಕೊಳ್ಳುವಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಶಸ್ವಿಯಾಗಿತ್ತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:10 pm, Sun, 25 February 24