WPL 2024: ರಾಯಲ್ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ RCB

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದ ಪಂದ್ಯಗಳು ಮುಗಿದಿದೆ. ದ್ವಿತೀಯಾರ್ಧದ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಮುಂದಿನ ಪಂದ್ಯವನ್ನು ಗುರುವಾರ ಆಡಲಿದ್ದು, ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.

WPL 2024: ರಾಯಲ್ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ RCB
RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 05, 2024 | 8:00 AM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ತವರಿನಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ RCB ತಂಡವು ದ್ವಿತೀಯಾರ್ಧವನ್ನು ಆರಂಭಿಸಿದೆ. ಅಂದರೆ ವುಮೆನ್ಸ್​ ಪ್ರೀಮಿಯರ್ ಲೀಗ್​ನ ದ್ವಿತೀಯಾರ್ಧದ ಪಂದ್ಯಗಳು ಇನ್ನು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಈ ಬಾರಿಯ ಐಪಿಎಲ್​ ಅನ್ನು ಎರಡು ನಗರಗಳಲ್ಲಿ ಆಯೋಜಿಸಲಾಗುತ್ತಿದ್ದು, ಅದರಂತೆ ಮೊದಲಾರ್ಧದ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಿತ್ತು. ಅಲ್ಲದೆ ಆರ್​ಸಿಬಿ ತಂಡವು ದ್ವಿತೀಯಾರ್ಧದ ಮೊದಲ ಪಂದ್ಯವನ್ನು ತವರು ಮೈದಾನದಲ್ಲಿ ಆಡಿದೆ. ಇದೀಗ ಮುಂದಿನ ಪಂದ್ಯಗಳಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ದೆಹಲಿಗೆ ಪ್ರಯಾಣ ಬೆಳೆಸಿದೆ.

ಇತ್ತ ರಾಯಲ್ ಅಭಿಮಾನಿಗಳ ಮುಂದೆ ಕೊನೆಯ ಬಾರಿ ಕಣಕ್ಕಿಳಿದ ಆರ್​ಸಿಬಿ ತಂಡವು ಗೆಲುವಿನ ಉಡುಗೊರೆ ನೀಡಿದ್ದಾರೆ. ಅಲ್ಲದೆ ಪಂದ್ಯ ಮುಗಿದ ಬಳಿಕ ಆರಂಭದಿಂದಲೂ ಬೆಂಬಲಿಸುತ್ತಾ ಬಂದಿದ್ದ ಅಭಿಮಾನಿಗಳಿಗೆ ಆರ್​ಸಿಬಿ ತಂಡವು ಧನ್ಯವಾದ ತಿಳಿಸಿದೆ.

ಇದೀಗ ಆರ್​ಸಿಬಿ ತಂಡದ ಆಟಗಾರ್ತಿಯರು ಮೈದಾನದ ಸುತ್ತ ಸಾಗುತ್ತಾ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

23 ರನ್​ಗಳ ಭರ್ಜರಿ ಜಯ:

ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು. ಈ ಅವಕಾಶವನ್ನು ಬಳಸಿಕೊಂಡ ಆರ್​ಸಿಬಿ ಪರ ನಾಯಕ ಸ್ಮೃತಿ ಮಂಧಾನ 50 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 10 ಫೋರ್​ಗಳೊಂದಿಗೆ 80 ರನ್ ಬಾರಿಸಿದರು. ಇನ್ನು ಎಲ್ಲಿಸ್ ಪೆರ್ರಿ 37 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 58 ರನ್​ ಚಚ್ಚಿದರು. ಈ ಅರ್ಧಶತಕಗಳ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಕಲೆಹಾಕಿತು.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

199 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಯುಪಿ ವಾರಿಯರ್ಸ್ ಪರ ನಾಯಕಿ ಅಲಿಸ್ಸಾ ಹೀಲಿ 38 ಎಸೆತಗಳಲ್ಲಿ 55 ರನ್ ಬಾರಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ. ಪರಿಣಾಮ ಯುಪಿ ವಾರಿಯರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 175 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆರ್​ಸಿಬಿ ತಂಡ 23 ರನ್​ಗಳ ಭರ್ಜರಿ ಜಯ ಸಾಧಿಸಿತು.