WPL 2024: ಇಂದು RCB vs GG ಮುಖಾಮುಖಿ

WPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ತನ್ನ 2ನೇ ಪಂದ್ಯವನ್ನಾಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು ಗುಜರಾತ್ ಜೈಂಟ್ಸ್​ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯುಪಿ ವಾರಿಯರ್ಸ್ ವಿರುದ್ಧ ಗೆಲುವು ಸಾಧಿಸಿತ್ತು.

WPL 2024: ಇಂದು RCB vs GG ಮುಖಾಮುಖಿ
RCB vs GG
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 27, 2024 | 8:05 AM

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಜೈಂಟ್ಸ್ (GG) ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಈಗಾಗಲೇ ಮೊದಲ ಪಂದ್ಯವನ್ನಾಡಿದೆ. ಆರ್​ಸಿಬಿ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದರೆ, ಅತ್ತ ಗುಜರಾತ್ ಜೈಂಟ್ಸ್​ ಸೋಲನುಭವಿಸಿದೆ. ಹೀಗಾಗಿ ಇಂದಿನ ಮೊದಲ ಗೆಲುವಿಗಾಗಿ ಬೆತ್ ಮೂನಿ ಪಡೆ ಕಣಕ್ಕಿಳಿಯಲಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ 2 ರನ್​ಗಳ ರೋಚಕ ಜಯ ಸಾಧಿಸಿರುವ ಆರ್​ಸಿಬಿ ಈ ಮ್ಯಾಚ್​ನಲ್ಲೂ ಗೆಲ್ಲುವ ಮೂಲಕ ಗೆಲುವಿನ ಲಯ ಮುಂದುವರೆಸುವ ಇರಾದೆಯಲ್ಲಿದೆ. ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತಿರುವ ಗುಜರಾತ್ ಜೈಂಟ್ಸ್​ ಈ ಪಂದ್ಯದ ಮೂಲಕ ಗೆಲುವಿನ ಖಾತೆ ತೆರೆಯುವ ವಿಶ್ವಾಸದಲ್ಲಿದೆ.

ಇತ್ತ ಈ ಪಂದ್ಯವು ಬೆಂಗಳೂರಿನಲ್ಲೇ ನಡೆಯುತ್ತಿರುವುದರಿಂದ ಆರ್​ಸಿಬಿ ತಂಡಕ್ಕೆ ಅಭಿಮಾನಿಗಳ ಬೆಂಬಲ ಸಿಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಗೆಲ್ಲುವ ಫೇವರೇಟ್ ಆಗಿ ಆರ್​ಸಿಬಿ ಗುರುತಿಸಿಕೊಂಡಿದೆ. ಆದರೆ ಅತ್ತ ಅತ್ಯುತ್ತಮ ಆಲ್​ರೌಂಡರ್​ಗಳನ್ನು ಒಳಗೊಂಡ ಗುಜರಾತ್ ಜೈಂಟ್ಸ್​ ಕಡೆಯಿಂದ ಕಠಿಣ ಪೈಪೋಟಿ ಎದುರಾಗುವ ನಿರೀಕ್ಷೆಯಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಪಂದ್ಯ ಎಷ್ಟು ಗಂಟೆಗೆ ಶುರು?

ಈ ಪಂದ್ಯವು ರಾತ್ರಿ 7.30 ರಿಂದ ಶುರುವಾಗಲಿದ್ದು, ಟಾಸ್ ಪ್ರಕ್ರಿಯೆ 7 ಗಂಟೆಗೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ನಡುವಣ ಪಂದ್ಯವನ್ನು ಸ್ಪೋರ್ಟ್ಸ್​ 18 ಚಾನೆಲ್​ನಲ್ಲಿ ಲೈವ್ ವೀಕ್ಷಿಸಬಹುದು. ಹಾಗೆಯೇ ಜಿಯೋ ಸಿನಿಮಾ ಆ್ಯಪ್​ನಲ್ಲೂ ಉಚಿತ ಲೈವ್ ಸ್ಟ್ರೀಮಿಂಗ್ ಇರಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

ಇದನ್ನೂ ಓದಿ: WPL ನಲ್ಲಿ ಹೊಸ ಇತಿಹಾಸ ಬರೆದ RCB ಸ್ಪಿನ್ನರ್

ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ (ನಾಯಕಿ), ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಪ್ರಿಯಾ ಮಿಶ್ರಾ, ಲಾರೆನ್ ಚೀಟಲ್*, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ