AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಇಂದು RCB ಮತ್ತು MI ನಡುವೆ ಬಿಗ್ ಫೈಟ್

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಇಂದು ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಹರ್ಮನ್​ಪ್ರೀತ್ ಕೌರ್ ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಣಡವನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

WPL 2024: ಇಂದು RCB ಮತ್ತು MI ನಡುವೆ ಬಿಗ್ ಫೈಟ್
RCB vs MI
TV9 Web
| Edited By: |

Updated on: Mar 02, 2024 | 8:00 AM

Share

ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳಿಗೂ ಈ ಪಂದ್ಯವು ತುಂಬಾ ಮಹತ್ವದ್ದು. ಏಕೆಂದರೆ ಕಳೆದ ಪಂದ್ಯಗಳಲ್ಲಿ ಎರಡೂ ತಂಡಗಳು ಸೋತಿದ್ದು, ಇದೀಗ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳಲು ಉಭಯ ತಂಡಗಳು ಸಜ್ಜಾಗಿ ನಿಂತಿದೆ.

ಸತತ ಎರಡು ಗೆಲುವಿನೊಂದಿಗೆ ಭರ್ಜರಿ ಪ್ರದರ್ಶನ ನೀಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲುಣಿಸಿತ್ತು. ಹಾಗೆಯೇ ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿರುವ ಮುಂಬೈ ಇಂಡಿಯನ್ಸ್ ವಿರುದ್ಧ ಕಳೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡ ಗೆದ್ದು ಬೀಗಿದೆ. ಹೀಗಾಗಿ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ.

ಅದರಲ್ಲೂ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ. ಸದ್ಯ ಆರ್​ಸಿಬಿ ತಂಡವು ದ್ವಿತೀಯ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ. ಹೀಗಾಗಿ ಈ ಪಂದ್ಯದ ಬಳಿಕ ಪಾಯಿಂಟ್ಸ್​ ಟೇಬಲ್​ನಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ.

ಭಾರತೀಯ ನಾಯಕಿಯರು:

ವಿಶೇಷ ಎಂದರೆ ಉಭಯ ತಂಡಗಳನ್ನು ಮುನ್ನಡೆಸುತ್ತಿರುವುದು ಭಾರತೀಯ ಆಟಗಾರ್ತಿಯರು. ಅಂದರೆ ಟೀಮ್ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾರಥ್ಯವನ್ನು ಭಾರತದ ಉಪನಾಯಕಿ ಸ್ಮೃತಿ ಮಂಧಾನ ವಹಿಸಿಕೊಂಡಿದ್ದಾರೆ. ಹೀಗಾಗಿ ಇವರಿಬ್ಬರಲ್ಲಿ ಯಾರು ಬೆಸ್ಟ್ ಕ್ಯಾಪ್ಟನ್ ಎಂಬುದು ಕೂಡ ಈಗ ಕುತೂಹಲ.

ಉಭಯ ತಂಡಗಳ ಮುಖಾಮುಖಿ:

WPL 2023 ರಲ್ಲಿ ಉಭಯ ತಂಡಗಳು 2 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಎರಡೂ ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ತಂಡ ಗೆದ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡಕ್ಕೆ ಸೋಲುಣಿಸಿ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ ಆರ್​ಸಿಬಿ.​

ಉಭಯ ತಂಡಗಳು ಹೀಗಿವೆ:

ಮುಂಬೈ ಇಂಡಿಯನ್ಸ್ (MI) ತಂಡ: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್*, ಕ್ಲೋಯ್ ಟ್ರಯಾನ್*, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಹೇಲಿ ಮ್ಯಾಥ್ಯೂಸ್*, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್*, ಜಿಂಟಿಮಣಿ ಕಲಿತಾ, ನಟಾಲಿ ಸ್ಕೈವರ್*, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್*, ಎಸ್ ಸಜನಾ, ಅಮನ್‌ದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.

ಇದನ್ನೂ ಓದಿ: 6 ಭರ್ಜರಿ ಸಿಕ್ಸ್, 14 ಫೋರ್​: ಸ್ಪೋಟಕ ಸೆಂಚುರಿ ಸಿಡಿಸಿದ RCB ಆಟಗಾರ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್