AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: 11 ಬೌಂಡರಿ, 81 ರನ್..! ಪೆರ್ರಿ ಆರ್ಭಟಕ್ಕೆ ಪತರುಗುಟ್ಟಿದ ಮುಂಬೈ ಇಂಡಿಯನ್ಸ್

Ellyse Perry: ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 167 ರನ್ ಗಳಿಸಿದೆ. ತಂಡದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಎಲ್ಲಿಸ್ ಪೆರ್ರಿ 81 ರನ್‌ಗಳ ಇನಿಂಗ್ಸ್‌ ಆಡಿದರು. ಸ್ಮೃತಿ ಮಂಧಾನ ಮತ್ತು ಡೇನಿಯಲ್ ವ್ಯಾಟ್-ಹಾಡ್ಜ್ ಅವರು ಆರಂಭಿಕ ಜೊತೆಯಾಟ ನೀಡಿದರು. ರಿಚಾ ಘೋಷ್ ಕೂಡ ಉತ್ತಮ ಬ್ಯಾಟಿಂಗ್ ಮಾಡಿದರು.

WPL 2025: 11 ಬೌಂಡರಿ, 81 ರನ್..! ಪೆರ್ರಿ ಆರ್ಭಟಕ್ಕೆ ಪತರುಗುಟ್ಟಿದ ಮುಂಬೈ ಇಂಡಿಯನ್ಸ್
Ellyse Perry
ಪೃಥ್ವಿಶಂಕರ
|

Updated on:Feb 21, 2025 | 9:25 PM

Share

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿಯ 7ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದೆ. ಆರ್​ಸಿಬಿ ಪರ ಅಬ್ಬರದ ಬ್ಯಾಟಿಂಗ್ ಮಾಡಿದ ಎಲ್ಲಿಸ್ ಪೆರ್ರಿ, ಮುಂಬೈ ಬೌಲರ್​ಗಳನ್ನು ಮನಬಂದಂತೆ ಥಳಿಸಿ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು.

ಆರ್​ಸಿಬಿಗೆ ಆರಂಭಿಕ ಆಘಾತ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ನಾಯಕಿ ಸ್ಮೃತಿ ಮಂಧಾನ ಹಾಗೂ ಡೇನಿಯಲ್ ವ್ಯಾಟ್-ಹಾಡ್ಜ್ ಮೊದಲ ವಿಕೆಟ್​ಗೆ 29 ರನ್​ಗಳ ಜೊತೆಯಾಟವನ್ನಾಡಿದರು. ಅದರಲ್ಲೂ ನಾಯಕಿ ಸ್ಮೃತಿ ಮಂಧಾನ ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾಗಿ 4 ಬೌಂಡರಿ ಹಾಗೂ 1 ಸಿಕ್ಸರ್ ಕೂಡ ಬಾರಿಸಿದರು. ಆದರೆ ಬೇಡದ ಶಾಟ್ ಆಡಿ ಮೂರನೇ ಓವರ್​ನಲ್ಲೇ 26 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಡೇನಿಯಲ್ ವ್ಯಾಟ್ ಕೂಡ 9 ರನ್​ಗಳಿಗೆ ಸುಸ್ತಾದರು.

ರಿಚಾ- ಪೆರ್ರಿ ಅರ್ಧಶತಕದ ಜೊತೆಯಾಟ

ಆದರೆ ಮೂರನೇ ಕ್ರಮಾಂಕದಲ್ಲಿ ಬಂದ ಎಲ್ಲಿಸ್ ಪೆರ್ರಿ ಒಂದು ತುದಿಯಲ್ಲಿ ಭದ್ರವಾಗಿ ಬೇರೂರಿ ಸ್ಕೋರ್ ಬೋರ್ಡ್​ ಏರಿಸಲಾರಂಭಿಸಿದರು. ಆದರೆ ಪೆರ್ರಿಗೆ ನಾಲ್ಕನೇ ಮತ್ತು ಐದನೇ ಕ್ರಮಾಂಕದಲ್ಲಿ ಬಂದ ಬ್ಯಾಟರ್​ಗಳಿಂದ ಸಾಥ್ ಸಿಗಲಿಲ್ಲ. ಈ ವೇಳೆ 6ನೇ ಕ್ರಮಾಂಕದಲ್ಲಿ ಬಂದ ರಿಚಾ ಘೋಷ್, ಪೆರ್ರಿ ಜೊತೆ ಅರ್ಧಶತಕದ ಜೊತೆಯಾಟವನ್ನಾಡಿದರು. ಆದರೆ 28 ರನ್​ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು.

ಪೆರ್ರಿ ಸ್ಫೋಟಕ ಅರ್ಧಶತಕ

ತಂಡದಲ್ಲಿ ಸತತ ವಿಕೆಟ್ ಪತನದ ನಡುವೆಯೂ ಎಂದಿನಂತೆ ತನ್ನ ಹೊಡಿಬಡಿ ಆಟವನ್ನು ಮುಂದುವರೆಸಿದ ಪೆರ್ರಿ ಕೇವಲ 30 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅರ್ಧಶತಕದ ಬಳಿಕ ಇನ್ನಷ್ಟು ಉಗ್ರರೂಪ ತಾಳಿದ ಪೆರ್ರಿ ಮುಂಬೈ ಬೌಲರ್​ಗಳ ಬೆವರಿಳಿಸಿದರು. ಪೆರ್ರಿ ಆರ್ಭಟ ಹೇಗಿತ್ತೆಂದರೆ, ಕೊನೆಯ 5 ಓವರ್​ಗಳಲ್ಲಿ ಆರ್​ಸಿಬಿ ಬರೋಬ್ಬರಿ 54 ರನ್ ಕಲೆಹಾಕಿತು. ಇಷ್ಟು ರನ್​ಗಳಲ್ಲಿ ಪೆರ್ರಿ ಅವರ ಪಾಲೇ ಹೆಚ್ಚಿತ್ತು. ಅಂತಿಮವಾಗಿ 20ನೇ ಓವರ್​ನ 5ನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಯತ್ನದಲ್ಲಿ ಪೆರ್ರಿ ವಿಕೆಟ್ ಒಪ್ಪಿಸಿದರು. ಆದರೆ ಔಟಾಗುವುದಕ್ಕೂ ಮುನ್ನ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ಯುವ ಕೆಲಸ ಮಾಡಿದ್ದ ಪೆರ್ರಿ ಅಂತಿಮವಾಗಿ 43 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 2 ಭರ್ಜರಿ ಸಿಕ್ಸರ್ ಸಹಿತ 81 ರನ್ ಕಲೆಹಾಕಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Fri, 21 February 25

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್ ಸ್ಫೋಟ
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ!
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ