WPL 2024: ಟಾಸ್ ಸೋತ ಆರ್ಸಿಬಿ ಮೊದಲು ಬ್ಯಾಟಿಂಗ್; ಉಭಯ ತಂಡಗಳು ಹೀಗಿವೆ
WPL 2024: ಲೀಗ್ನ ಎರಡನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಇಂದು ಸ್ಮೃತಿ ಮಂದಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಅಲಿಸ್ಸಾ ಹೀಲಿ ನೇತೃತ್ವದ ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಟಾಸ್ ಈಗಾಗಲೇ ಮುಗಿದಿದ್ದು, ಟಾಸ್ ಗೆದ್ದ ಯುಪಿ ವಾರಿಯರ್ಸ್ ನಾಯಕಿ ಅಲಿಸ್ಸಾ ಹೀಲಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹಿಳೆಯರ ಪ್ರೀಮಿಯರ್ ಲೀಗ್ನ (Women’s Premier League) ಎರಡನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಇಂದು ಸ್ಮೃತಿ ಮಂದಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಅಲಿಸ್ಸಾ ಹೀಲಿ ನೇತೃತ್ವದ ಯುಪಿ ವಾರಿಯರ್ಸ್ (RCB Women vs UP Warriorz) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಟಾಸ್ ಈಗಾಗಲೇ ಮುಗಿದಿದ್ದು, ಟಾಸ್ ಗೆದ್ದ ಯುಪಿ ವಾರಿಯರ್ಸ್ ನಾಯಕಿ ಅಲಿಸ್ಸಾ ಹೀಲಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಆರ್ಸಿಬಿ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಉಭಯ ತಂಡಗಳು ಲೀಗ್ನಲ್ಲಿ ಇದುವರೆಗೆ ಎರಡು ಬಾರಿ ಮುಖಾಮುಖಿಯಾಗಿದ್ದು, ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆಲ್ಲುವ ಮೂಲಕ ಸಮಬಲದ ಹೋರಾಟ ನೀಡಿವೆ. ಹೀಗಾಗಿ ಇಂದು ನಡೆಯುವ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡ ಉಭಯರ ಮುಖಾಮುಖಿಯಲ್ಲಿ ಮೇಲುಗೈ ಸಾಧಿಸಿದೆ. ಪಂದ್ಯದ ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದ್ದು, ತಂಡದಲ್ಲಿ ಯಾರೆಲ್ಲ ಅವಕಾಶ ಪಡೆದಿದ್ದಾರೆ ಎಂಬುದರ ವಿವರ ಇಲ್ಲಿದೆ.
ಉಭಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಶೋಭಾನಾ ಆಶಾ, ರೇಣುಕಾ ಠಾಕೂರ್ ಸಿಂಗ್.
ಯುಪಿ ವಾರಿಯರ್ಜ್: ಅಲಿಸ್ಸಾ ಹೀಲಿ(ನಾಯಕಿ), ಸೋಫಿ ಎಕ್ಲೆಸ್ಟೋನ್, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್, ಕಿರಣ್ ನವಗಿರೆ, ವೃಂದಾ ದಿನೇಶ್, ಪೂನಂ ಖೇಮ್ನಾರ್, ಶ್ವೇತಾ ಸೆಹ್ರಾವತ್, ಗ್ರೇಸ್ ಹ್ಯಾರಿಸ್, ಸೈಮಾ ಠಾಕೋರ್.
ಉಭಯ ತಂಡಗಳ ದಾಖಲೆ ಹೀಗಿದೆ
2023 ರ ಮೊದಲ ಆವೃತ್ತಿ ಆರ್ಸಿಬಿಗೆ ತುಂಬಾ ಕೆಟ್ಟದಾಗಿತ್ತು. ಪಾಯಿಂಟ್ ಪಟ್ಟಿಯಲ್ಲಿ ಐದು ತಂಡಗಳ ಪೈಕಿ ಈ ತಂಡ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿತು. ಮಂಧಾನ ನಾಯಕತ್ವದಲ್ಲಿ ಬೆಂಗಳೂರು ತಂಡ ಆಡಿದ ಎಂಟು ಪಂದ್ಯಗಳಲ್ಲಿ ಕೇವಲ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿತ್ತು.ಅಲ್ಲದೆ ಸೀಸನ್ ಮೊದಲ ಐದು ಪಂದ್ಯಗಳಲ್ಲಿ ತಂಡ ಸತತ ಸೋಲು ಕಂಡಿತ್ತು. ಕಳೆದ ಸೀಸನ್ನಲ್ಲಿ ಕಳಪೆ ಫಾರ್ಮ್ನಿಂದ ಬಳಲಿದ್ದ ನಾಯಕಿ ಮಂಧಾನ 18.62ರ ಸರಾಸರಿಯಲ್ಲಿ 149 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.
ಯುಪಿ ವಾರಿಯರ್ಸ್ ತಂಡದ ಬಗ್ಗೆ ಹೇಳುವುದಾದರೆ, ಕಳೆದ ಸೀಸನ್ ಈ ತಂಡಕ್ಕೆ ಮಿಶ್ರವಾಗಿತ್ತು. ಗುಂಪು ಹಂತದ ನಂತರ ತಂಡವು ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಕಡೆದುಕೊಂಡಿತ್ತು. ಆಡಿದ ಎಂಟು ಪಂದ್ಯಗಳಲ್ಲಿ ತಂಡ ನಾಲ್ಕರಲ್ಲಿ ಗೆದ್ದು, ಉಳಿದ 4 ಪಂದ್ಯಗಳಲ್ಲಿ ಸೋಲು ಕಂಡಿತ್ತು. ಹೀಲಿ ನಾಯಕತ್ವದಲ್ಲಿ, ಯುಪಿ ತಂಡವು ಎಲಿಮಿನೇಟರ್ ತಲುಪಿತ್ತಾದರೂ, ಮುಂಬೈ ಇಂಡಿಯನ್ಸ್ ವಿರುದ್ಧ 72 ರನ್‌ಗಳಿಂದ ಸೋತು ಲೀಗ್ನಿಂದ ಹೊರಬಿದ್ದಿತ್ತು. ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದ ತಹಿಲಾ ಮೆಕ್‌ಗ್ರಾತ್ ಆಡಿದ ಎಂಟು ಇನ್ನಿಂಗ್ಸ್‌ಗಳಲ್ಲಿ 302 ರನ್ ಗಳಿಸಿದ್ದರು. ಇದರಲ್ಲಿ ನಾಲ್ಕು ಅರ್ಧಶತಕಗಳು ಸೇರಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:10 pm, Sat, 24 February 24