WPL 2024: ಬೆಂಗಳೂರಿನಲ್ಲಿ ಬಲಿಷ್ಠ ತಂಡಗಳ ನಡುವೆ ಫೈಟ್; ಆರ್​ಸಿಬಿ ಮೊದಲು ಬ್ಯಾಟಿಂಗ್

WPL 2024: ಮಹಿಳಾ ಪ್ರೀಮಿಯರ್ ಲೀಗ್ 2024 ರಲ್ಲಿ, ಇಂದು ಅಂದರೆ ಶನಿವಾರ, ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ನೇಟ್ ಸ್ಕಿವರ್-ಬ್ರಂಟ್ ನಾಯಕತ್ವದ ಮುಂಬೈ ಇಂಡಿಯನ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

WPL 2024: ಬೆಂಗಳೂರಿನಲ್ಲಿ ಬಲಿಷ್ಠ ತಂಡಗಳ ನಡುವೆ ಫೈಟ್; ಆರ್​ಸಿಬಿ ಮೊದಲು ಬ್ಯಾಟಿಂಗ್
ಆರ್​ಸಿಬಿ- ಮುಂಬೈ
Follow us
ಪೃಥ್ವಿಶಂಕರ
|

Updated on:Mar 02, 2024 | 7:14 PM

ಮಹಿಳಾ ಪ್ರೀಮಿಯರ್ ಲೀಗ್ 2024 (WPL 2024) ರಲ್ಲಿ, ಇಂದು ಅಂದರೆ ಶನಿವಾರ, ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ನೇಟ್ ಸ್ಕಿವರ್-ಬ್ರಂಟ್ ನಾಯಕತ್ವದ ಮುಂಬೈ ಇಂಡಿಯನ್ಸ್ (Royal Challengers Bangalore vs Mumbai Indians) ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಆರ್​ಸಿಬಿ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕೆ ಮುಂಬೈ ನಾಯಕಿ ಹರ್ಮನ್​ಪ್ರೀತ್ ಕೌರ್ (Harmanpreet Kaur) ಅಲಭ್ಯರಾಗಿದ್ದಾರೆ. ಗಾಯದ ಸಮಸ್ಯೆಯಿಂದ ಹರ್ಮನ್ ಕೊನೆಯ ಪಂದ್ಯವನ್ನು ಆಡಿರಲಿಲ್ಲ. ಆದರೆ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಹರ್ಮನ್ ಪುನರಾಗಮನ ಮಾಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಇದಲ್ಲದೇ ಎರಡೂ ತಂಡಗಳು ತಮ್ಮ ತಮ್ಮ ಪಂದ್ಯಗಳಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವುದು ಎರಡನೇ ಕಾರಣ. ಹಾಗೆಯೇ ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಆರ್​ಸಿಬಿ ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವಾರೆಹಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಆಶಾ ಶೋಭಾನಾ, ರೇಣುಕಾ ಠಾಕೂರ್ ಸಿಂಗ್.

ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ(ವಿಕೆಟ್ ಕೀಪರ್), ನೇಟ್ ಸಿವರ್-ಬ್ರಂಟ್(ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಎಸ್ ಸಜ್ನಾ, ಅಮಾನ್ಜೋತ್ ಕೌರ್, ಹುಮೈರಾ ಕಾಜಿ, ಕೀರ್ತನ್ ಬಾಲಕೃಷ್ಣನ್, ಸೈಕಾ ಇಶಾಕ್.

WPL 2024: ಸ್ಮೃತಿ ಏಕಾಂಗಿ ಹೋರಾಟ ವ್ಯರ್ಥ; ಲೀಗ್​ನಲ್ಲಿ ಮೊದಲ ಸೋಲನುಭವಿಸಿದ ಆರ್​ಸಿಬಿ

ಉಭಯ ತಂಡಗಳ ಪ್ರದರ್ಶನ

ಪ್ರಸ್ತುತ ಲೀಗ್​ನಲ್ಲಿ ಉಭಯ ತಂಡಗಳ ಪ್ರದರ್ಶನವನ್ನು ನೋಡುವುದಾದರೆ.. ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಲ್ಲಿಯವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ತಂಡವು ಎರಡು ಪಂದ್ಯಗಳನ್ನು ಗೆದ್ದಿದ್ದರೆ, ಒಂದು ಪಂದ್ಯದಲ್ಲಿ ಸೋಲು ಎದುರಿಸಿದೆ. ಮತ್ತೊಂದೆಡೆ, ಮುಂಬೈ ಇಂಡಿಯನ್ಸ್ ಸಹ 3 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಮೊದಲ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ತಂಡವು ಮೂರನೇ ಪಂದ್ಯದಲ್ಲಿ ಸೋಲನ್ನು ಎದುರಿಸಬೇಕಾಯಿತು. ಹೀಗಾಗಿ ಇಂದಿನ ಪಂದ್ಯ ಗೆಲ್ಲುವ ತಂಡ ಮತ್ತೆ ಗೆಲುವಿನ ಲಯಕ್ಕೆ ಮರಳುವುದಲ್ಲದೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Sat, 2 March 24

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ