WPL 2024: ಬೆಂಗಳೂರಿನಲ್ಲಿ ಮತ್ತೆ ಟಾಸ್ ಗೆದ್ದ ಆರ್‌ಸಿಬಿ; ಪ್ಲೇಯಿಂಗ್ 11 ಹೀಗಿದೆ
WPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ನ ಏಳನೇ ಪಂದ್ಯದಲ್ಲಿ ಇಂದು ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಸತತ ಎರಡನೇ ಬಾರಿಗೆ ಟಾಸ್ ಗೆದ್ದ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ನ (Women’s Premier League) ಏಳನೇ ಪಂದ್ಯದಲ್ಲಿ ಇಂದು ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (Royal Challengers Bangalore Women vs Delhi Capitals) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಸತತ ಎರಡನೇ ಬಾರಿಗೆ ಟಾಸ್ ಗೆದ್ದ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ (Smriti Mandhana) ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಆರ್‌ಸಿಬಿ ಇಲ್ಲಿಯವರೆಗೆ ಎರಡು ಪಂದ್ಯಗಳನ್ನು ಆಡಿದ್ದು, ಎರಡೂ ಪಂದ್ಯಗಳನ್ನು ಗೆದ್ದಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಆರ್‌ಸಿಬಿ ಮೊದಲ ಸ್ಥಾನದಲ್ಲಿದೆ. ಇತ್ತ ಡಿಸಿ ಕೂಡ ಎರಡು ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಒಂದು ಪಂದ್ಯದಲ್ಲಿ ಗೆಲುವು ಮತ್ತು ಇನ್ನೊಂದು ಪಂದ್ಯದಲ್ಲಿ ಸೋಲು ಅನುಭವಿಸಿದೆ. ತನ್ನ ಗೆಲುವಿನ ಓಟವನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಆರ್‌ಸಿಬಿ ಇಂದು ಮೈದಾನಕ್ಕಿಳಿಯಲಿದೆ. ಈ ಪಂದ್ಯದ ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಸಹ ಹೊರಬಿದ್ದಿದೆ.
ಮುಖಾಮುಖಿ ವರದಿ
ನಾವು ಎರಡೂ ತಂಡಗಳ ಮುಖಾಮುಖಿ ವರದಿಯನ್ನು ನೋಡುವುದಾದರೆ.. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೇಲುಗೈ ಹೊಂದಿದೆ. ಉಭಯ ತಂಡಗಳು ಇದುವರೆಗೆ ಎರಡು ಬಾರಿ ಮುಖಾಮುಖಿಯಾಗಿವೆ. ಆಡಿದ ಎರಡೂ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿದೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಉಭಯ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾದಾಗ ಡೆಲ್ಲಿ 60 ರನ್‌ಗಳಿಂದ ಆರ್‌ಸಿಬಿ ತಂಡವನ್ನು ಸೋಲಿಸಿತ್ತು. ನಂತರ ನವಿ ಮುಂಬೈನ ಡಾ.ಡಿ.ವೈ.ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಎರಡನೇ ಪಂದ್ಯದಲ್ಲಿ ದೆಹಲಿ ತಂಡ ಬೆಂಗಳೂರು ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿತ್ತು.
WPL Points Table 2024: ಸತತ ಎರಡು ಗೆಲುವು; ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ..!
ಉಭಯ ತಂಡಗಳು ಹೀಗಿವೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನೆಕ್ಸ್, ರಿಚಾ ಘೋಷ್ (ವಿಕೆಟ್ ಕೀಪರ್), ನಡಿನ್ ಡಿ ಕ್ಲರ್ಕ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಆಶಾ ಸಿಂಗ್ ಶೋಬನಾ, ರೇಣುಕಾ ಸಿಂಗ್ ಠಾಕೂರ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕೆಪ್, ಜೆಸ್ ಜೊನಾಸೆನ್, ಅರುಂಧತಿ ರೆಡ್ಡಿ, ಮಿನ್ನು ಮಣಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಧಾ ಯಾದವ್, ಶಿಖಾ ಪಾಂಡೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:02 pm, Thu, 29 February 24