WPL 2024 Schedule: ವುಮೆನ್ಸ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ ಪ್ರಕಟ
Women's Premier League 2024 Schedule: ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಫೆಬ್ರವರಿ 23 ರಿಂದ ಶುರುವಾಗಲಿದೆ. 5 ತಂಡಗಳ ನಡುವಣ ಮಹಿಳಾ ಕ್ರಿಕೆಟ್ ಕದನದಲ್ಲಿ ಒಟ್ಟು 22 ಪಂದ್ಯಗಳನ್ನು ಆಡಲಾಗುತ್ತದೆ. ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಅಂತಿಮ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಮೈದಾನವು ಆತಿಥ್ಯವಹಿಸಲಿದೆ.
WPL 2024
Follow us on
WPL 2024 Schedule: ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿ ಫೆಬ್ರವರಿ 23 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 17 ರಂದು ನಡೆಯಲಿದೆ. ಈ ಬಾರಿಯ ಟೂರ್ನಿಯು ಎರಡು ನಗರಗಳಲ್ಲಿ ನಡೆಯಲಿರುವುದು ವಿಶೇಷ. ಅದರಂತೆ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಫೈನಲ್ ಸೇರಿದಂತೆ ದ್ವಿತೀಯ ಹಂತದ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.
ಮೊದಲ ಮುಖಾಮುಖಿ:
ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ. ಹಾಗೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೆಬ್ರವರಿ 24 ರಿಂದ WPL ಅಭಿಯಾನ ಆರಂಭಿಸಲಿದ್ದು, ತನ್ನ ಮೊದಲ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ.