WPL 2024: 2 ನಗರಗಳಲ್ಲಿ ನಡೆಯಲಿದೆ ವುಮೆನ್ಸ್ ಪ್ರೀಮಿಯರ್ ಲೀಗ್

WPL 2024:  2023 ರಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಪ್ರಶಸ್ತಿ ಗೆದ್ದಿತ್ತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಹರ್ಮನ್​ಪ್ರೀತ್ ಕೌರ್​ ನಾಯಕತ್ವದ ಮುಂಬೈ ಇಂಡಿಯನ್ಸ್​ ಚಾಂಪಿಯನ್ ಪಟ್ಟಕ್ಕೇರಿತು.

WPL 2024: 2 ನಗರಗಳಲ್ಲಿ ನಡೆಯಲಿದೆ ವುಮೆನ್ಸ್ ಪ್ರೀಮಿಯರ್ ಲೀಗ್
WPL 2024
Follow us
| Updated By: ಝಾಹಿರ್ ಯೂಸುಫ್

Updated on: Jan 10, 2024 | 12:39 PM

ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್ (​WPL 2024) ಅನ್ನು 2 ನಗರಗಳಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಫೆಬ್ರವರಿ ಅಂತ್ಯದಲ್ಲಿ ಬೆಂಗಳೂರು ಹಾಗೂ ದೆಹಲಿಯಲ್ಲಿ WPL 2024 ಟೂರ್ನಿ ನಡೆಯಲಿದೆ ಎಂದು ವರದಿಯಾಗಿದೆ. ವುಮೆನ್ಸ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಆವೃತ್ತಿಯನ್ನು ಮುಂಬೈನಲ್ಲಿ ಮಾತ್ರ ಆಯೋಜಿಸಲಾಗಿತ್ತು.

ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ, ಬ್ರಬೋರ್ನ್​ ಕ್ರೀಡಾಂಗಣದಲ್ಲಿ 22 ಪಂದ್ಯಗಳನ್ನು ನಡೆಸಲಾಗಿತ್ತು. ಆದರೆ ಈ ಬಾರಿ ಬೆಂಗಳೂರು ಹಾಗೂ ದೆಹಲಿಯಲ್ಲಿ ಟೂರ್ನಿಗಳನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ. ಅದರಂತೆ ಫೆಬ್ರವರಿ ಅಂತ್ಯದಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ ಶುರುವಾಗಲಿದ್ದು, ಚಾಂಪಿಯನ್​ ಪಟ್ಟಕ್ಕಾಗಿ 5 ತಂಡಗಳು ಕಣಕ್ಕಿಳಿಯಲಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್​ನ 5 ತಂಡಗಳು ಈ ಕೆಳಗಿನಂತಿವೆ:

ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ: ಆಲಿಸ್ ಕ್ಯಾಪ್ಸೆ*, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್*, ಲಾರಾ ಹ್ಯಾರಿಸ್*, ಮರಿಜಾನ್ನೆ ಕಪ್*, ಮೆಗ್ ಲ್ಯಾನಿಂಗ್*, ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತಾನಿಯಾ, ಟಿಟಾಸ್ ಸಾಧು, ಅನ್ನಾಬೆಲ್ ಸದರ್ಲ್ಯಾಂಡ್*, ಅಪರ್ಣಾ ಮೊಂಡಲ್, , ಅಶ್ವನಿ ಕುಮಾರಿ.

ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ*, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಕಾಶ್ವೀ ಗೌತಮ್, ಪ್ರಿಯಾ ಮಿಶ್ರಾ, ಲಾರೆನ್ ಚೀಟಲ್*, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.

ಮುಂಬೈ ಇಂಡಿಯನ್ಸ್ (MI) ತಂಡ: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್*, ಕ್ಲೋಯ್ ಟ್ರಯಾನ್*, ಹರ್ಮನ್‌ಪ್ರೀತ್ ಕೌರ್, ಹೇಲಿ ಮ್ಯಾಥ್ಯೂಸ್*, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್*, ಜಿಂಟಿಮಣಿ ಕಲಿತಾ, ನಟಾಲಿ ಸ್ಕೈವರ್*, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್*, ಎಸ್ ಸಜನಾ, ಅಮನ್‌ದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

ಇದನ್ನೂ ಓದಿ: ನನಗೆ RCB ಪರ ಆಡೋದು ಇಷ್ಟವಿರಲಿಲ್ಲ, ಬೆದರಿಸಿ ಆಡ್ಸಿದ್ರು..!

ಯುಪಿ ವಾರಿಯರ್ಸ್​ (UPW) ತಂಡ: ಅಲಿಸ್ಸಾ ಹೀಲಿ*, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್*, ಕಿರಣ್ ನವಗಿರೆ, ಲಾರೆನ್ ಬೆಲ್*, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್*, ತಹ್ಲಿಯಾ, ಡ್ಯಾನಿ ವ್ಯಾಟ್*, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.

(*= ವಿದೇಶಿ ಆಟಗಾರ್ತಿಯರು.)

ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್​:

2023 ರಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿತ್ತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಮುಂಬೈ ಇಂಡಿಯನ್ಸ್​ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್