ಈ ಬಾರಿ ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಫೆಬ್ರವರಿ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಹಾಗೆಯೇ ಫೈನಲ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಅಂದರೆ ಈ ಬಾರಿಯ ಟೂರ್ನಿಯು 2 ನಗರಗಳಲ್ಲಿ ನಡೆಯುವುದು ಬಹುತೇಕ ಖಚಿತ. ವುಮೆನ್ಸ್ ಪ್ರೀಮಿಯರ್ ಲೀಗ್ನ ಚೊಚ್ಚಲ ಆವೃತ್ತಿಯನ್ನು ಮುಂಬೈನಲ್ಲಿ ಮಾತ್ರ ಆಯೋಜಿಸಲಾಗಿತ್ತು.
ಕಳೆದ ವರ್ಷ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ, ಬ್ರಬೋರ್ನ್ ಕ್ರೀಡಾಂಗಣದಲ್ಲಿ 22 ಪಂದ್ಯಗಳನ್ನು ಆಯೋಜಿಸಲಾಗಿತ್ತು. ಆದರೆ ಈ ಬಾರಿ ಬೆಂಗಳೂರು ಹಾಗೂ ದೆಹಲಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ. ಅದರಂತೆ ಫೆಬ್ರವರಿ 22 ರಿಂದ ವುಮೆನ್ಸ್ ಪ್ರೀಮಿಯರ್ ಲೀಗ್ ಶುರುವಾಗಲಿದ್ದು, ಚಾಂಪಿಯನ್ ಪಟ್ಟಕ್ಕಾಗಿ 5 ತಂಡಗಳು ಕಣಕ್ಕಿಳಿಯಲಿದೆ.
ಡೆಲ್ಲಿ ಕ್ಯಾಪಿಟಲ್ಸ್ (DC) ತಂಡ: ಆಲಿಸ್ ಕ್ಯಾಪ್ಸೆ*, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ಜೆಸ್ ಜೊನಾಸೆನ್*, ಲಾರಾ ಹ್ಯಾರಿಸ್*, ಮರಿಜಾನ್ನೆ ಕಪ್*, ಮೆಗ್ ಲ್ಯಾನಿಂಗ್*, ಮಿನ್ನು ಮಣಿ, ಪೂನಂ ಯಾದವ್, ರಾಧಾ ಯಾದವ್, ಶಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತಾನಿಯಾ, ಟಿಟಾಸ್ ಸಾಧು, ಅನ್ನಾಬೆಲ್ ಸದರ್ಲ್ಯಾಂಡ್*, ಅಪರ್ಣಾ ಮೊಂಡಲ್, , ಅಶ್ವನಿ ಕುಮಾರಿ.
ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ*, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಕಾಶ್ವೀ ಗೌತಮ್, ಪ್ರಿಯಾ ಮಿಶ್ರಾ, ಲಾರೆನ್ ಚೀಟಲ್*, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.
ಮುಂಬೈ ಇಂಡಿಯನ್ಸ್ (MI) ತಂಡ: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್*, ಕ್ಲೋಯ್ ಟ್ರಯಾನ್*, ಹರ್ಮನ್‌ಪ್ರೀತ್ ಕೌರ್, ಹೇಲಿ ಮ್ಯಾಥ್ಯೂಸ್*, ಹುಮೈರಾ ಕಾಜಿ, ಇಸಾಬೆಲ್ಲೆ ವಾಂಗ್*, ಜಿಂಟಿಮಣಿ ಕಲಿತಾ, ನಟಾಲಿ ಸ್ಕೈವರ್*, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್*, ಎಸ್ ಸಜನಾ, ಅಮನ್‌ದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.
ಇದನ್ನೂ ಓದಿ: ನನಗೆ RCB ಪರ ಆಡೋದು ಇಷ್ಟವಿರಲಿಲ್ಲ, ಬೆದರಿಸಿ ಆಡ್ಸಿದ್ರು..!
ಯುಪಿ ವಾರಿಯರ್ಸ್ (UPW) ತಂಡ: ಅಲಿಸ್ಸಾ ಹೀಲಿ*, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್*, ಕಿರಣ್ ನವಗಿರೆ, ಲಾರೆನ್ ಬೆಲ್*, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್*, ತಹ್ಲಿಯಾ, ಡ್ಯಾನಿ ವ್ಯಾಟ್*, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.
(*= ವಿದೇಶಿ ಆಟಗಾರ್ತಿಯರು.)