WPL 2024: ಸೋತ ತಂಡಗಳ ನಡುವೆ ಫೈಟ್, ಟಾಸ್ ಗೆದ್ದ ಡೆಲ್ಲಿ; ಪ್ಲೇಯಿಂಗ್ 11 ಹೀಗಿದೆ

|

Updated on: Feb 26, 2024 | 7:43 PM

WPL 2024: ಮಹಿಳೆಯರ ಪ್ರೀಮಿಯರ್ ಲೀಗ್‌ನ ನಾಲ್ಕನೇ ಪಂದ್ಯ ಯುಪಿ ವಾರಿಯರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

WPL 2024: ಸೋತ ತಂಡಗಳ ನಡುವೆ ಫೈಟ್, ಟಾಸ್ ಗೆದ್ದ ಡೆಲ್ಲಿ; ಪ್ಲೇಯಿಂಗ್ 11 ಹೀಗಿದೆ
ಯುಪಿ ವಾರಿಯರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್
Follow us on

ಮಹಿಳೆಯರ ಪ್ರೀಮಿಯರ್ ಲೀಗ್‌ನ (Women’s Premier League 2024) ನಾಲ್ಕನೇ ಪಂದ್ಯ ಯುಪಿ ವಾರಿಯರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (UP Warriorz vs Delhi Capitals) ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಎರಡೂ ತಂಡಗಳು ಹಿಂದಿನ ಪಂದ್ಯದಲ್ಲಿ ಸೋಲು ಕಂಡಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುಂಬೈ ಇಂಡಿಯನ್ಸ್ ಸೋಲಿಸಿದರೆ, ಯುಪಿ ವಾರಿಯರ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲಿಸಿತ್ತು. ಹೀಗಾಗಿ ಉಭಯ ತಂಡಗಳು ಮೊದಲ ಗೆಲುವಿಗಾಗಿ ಹಾತೊರೆಯುತ್ತಿವೆ. ಏಕೆಂದರೆ ಈ ಪಂದ್ಯದ ಸೋಲು ಲೀಗ್​ನಲ್ಲಿ ತಂಡದ ಮುಂದಿನ ಪಯಣಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ. ಹೀಗಾಗಿ ಎರಡೂ ತಂಡಗಳಿಗೂ ಗೆಲುವಿನ ಅನಿವಾರ್ಯತೆ ಎದುರಾಗಿದೆ. ಏತನ್ಮಧ್ಯೆ, ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ (Meg Lanning) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇನ್ನು ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದೆ.

ಎರಡೂ ತಂಡಗಳು

ಯುಪಿ ವಾರಿಯರ್ಸ್: ಅಲಿಸ್ಸಾ ಹೀಲಿ (ನಾಯಕಿ/ವಿಕೆಟ್ ಕೀಪರ್), ವೃಂದಾ ದಿನೇಶ್, ತಹ್ಲಿಯಾ ಮೆಗ್ರಾತ್, ಗ್ರೇಸ್ ಹ್ಯಾರಿಸ್, ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ಪೂನಂ ಖೇಮ್ನಾರ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ರಾಜೇಶ್ವರಿ ಗಾಯಕ್ವಾಡ್, ಗೌಹರ್ ಸುಲ್ತಾನಾ.

ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ ಕೆಪ್, ಅನ್ನಾಬೆಲ್ಲೆ ಸದರ್ಲ್ಯಾಂಡ್, ಅರುಂಧತಿ ರೆಡ್ಡಿ, ಮಿನ್ನು ಮಣಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಧಾ ಯಾದವ್, ಶಿಖಾ ಪಾಂಡೆ.

WPL 2024: ಮೇಘನಾ, ರಿಚಾ, ಆಶಾ ಸೂಪರ್ ಶೋ; ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದ ಆರ್​ಸಿಬಿ..!

ಇದುವರೆಗೆ ಲೀಗ್ ಪಯಣ

ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ತಂಡ ನಾಲ್ಕು ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತು. ನಂತರ ನಡೆದ ಲೀಗ್​ನ ಎರಡನೇ ಪಂದ್ಯದಲ್ಲಿ ತವರಿನ ಲಾಭ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಪಂದ್ಯದಲ್ಲಿ 2 ರನ್‌ಗಳಿಂದ ಯುಪಿ ವಾರಿಯರ್ಜ್ ತಂಡವನ್ನು ಮಣಿಸಿತ್ತು. ಇನ್ನು ನಿನ್ನೆ ನಡೆದ ಮೂರನೇ ಪಂದ್ಯದಲ್ಲಿ ಲೀಗ್​ನಲ್ಲಿ ಎರಡನೇ ಪಂದ್ಯವನ್ನಾಡಿದ ಮುಂಬೈ ಇಂಡಿಯನ್ಸ್ ತಂಡ ದುರ್ಬಲ ಗುಜರಾತ್ ಜೈಂಟ್ಸ್ ತಂಡವನ್ನು 5 ವಿಕೆಟ್‌ಗಳಿಂದ  ಮಣಿಸಿ ಲೀಗ್​ನಲ್ಲಿ ಸತತ ಎರಡನೇ ಗೆಲುವನ್ನು ದಾಖಲಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Mon, 26 February 24