WPL 2024: ಇಂದು ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ ಮುಖಾಮುಖಿ
Up Warriorz vs Mumbai Indians: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಇಂದು ನಡೆಯುವ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಅಲಿಸ್ಸಾ ಹೀಲಿ ಸಾರಥ್ಯದ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ದ್ವಿತೀಯಾರ್ಧದ ಈ ಪಂದ್ಯದಲ್ಲಿ ಉಭಯ ತಂಡಗಳಿಗೂ ಗೆಲುವು ಅನಿವಾರ್ಯ. ಹೀಗಾಗಿ ಇಂದಿನ ಪಂದ್ಯದಲ್ಲೂ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ವುಮೆನ್ಸ್ ಪ್ರೀಮಿಯರ್ ಲೀಗ್ನ (WPL 2024) 14ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಕಳೆದ ಪಂದ್ಯದಲ್ಲಿ ಎರಡೂ ತಂಡಗಳು ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿದ್ದರೆ, ಯುಪಿ ವಾರಿಯರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಗ್ಗರಿಸಿತ್ತು. ಇದೀಗ ದ್ವಿತೀಯಾರ್ಧದ ಪಂದ್ಯದಲ್ಲಿ ಉಭಯ ತಂಡಗಳ ಪಾಲಿಗೂ ಗೆಲುವು ಅನಿವಾರ್ಯ.
ಇನ್ನು ಮೊದಲಾರ್ಧದಲ್ಲಿ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಗೆಲ್ಲುವ ಫೇವರೇಟ್ ಆಗಿ ಮುಂಬೈ ಇಂಡಿಯನ್ಸ್ ಗುರುತಿಸಿಕೊಂಡಿದೆ. ಇದಾಗ್ಯೂ ಅಲಿಸ್ಸಾ ಹೀಲಿ ಮುಂದಾಳತ್ವದ ಯುಪಿ ವಾರಿಯರ್ಸ್ ಯಾವುದೇ ಕ್ಷಣದಲ್ಲೂ ಕಠಿಣ ಪೈಪೋಟಿ ನೀಡುವ ಸಾಮರ್ಥ ಹೊಂದಿರುವ ತಂಡ. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಉಭಯ ತಂಡಗಳ ಮುಖಾಮುಖಿ:
ಯುಪಿ ವಾರಿಯರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಇದುವರೆಗೆ 4 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಮುಂಬೈ ಇಂಡಿಯನ್ಸ್ 2 ಮ್ಯಾಚ್ಗಳಲ್ಲಿ ಜಯ ಸಾಧಿಸಿದರೆ, ಯುಪಿ ವಾರಿಯರ್ಸ್ 2 ಪಂದ್ಯಗಳನ್ನು ಗೆದ್ದುಕೊಂಡಿದೆ. ಇದೀಗ 5ನೇ ಬಾರಿ ಮುಖಾಮುಖಿಯಾಗಲು ಉಭಯ ತಂಡಗಳು ಸಜ್ಜಾಗಿ ನಿಂತಿದೆ.