AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಡೆಲ್ಲಿ ಕ್ಯಾಪಿಟಲ್ಸ್ ಡೈರೆಕ್ಟ್ ಫೈನಲ್​ಗೆ ಎಂಟ್ರಿ

Womens Premier League 2025: ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಆರ್​ಸಿಬಿ ಮತ್ತು ಯುಪಿ ವಾರಿಯರ್ಸ್ ತಂಡಗಳು ಹೊರಬಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದೆ. ಅದರಲ್ಲೂ 2023 ಹಾಗೂ 2024 ರಲ್ಲಿ ಫೈನಲ್ ಆಡಿದ್ದ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಈ ಬಾರಿ ಕೂಡ ಫೈನಲ್​ಗೆ ಪ್ರವೇಶಿಸಿದೆ.

WPL 2025: ಡೆಲ್ಲಿ ಕ್ಯಾಪಿಟಲ್ಸ್ ಡೈರೆಕ್ಟ್ ಫೈನಲ್​ಗೆ ಎಂಟ್ರಿ
Delhi Capitals
ಝಾಹಿರ್ ಯೂಸುಫ್
|

Updated on: Mar 12, 2025 | 7:54 AM

Share

ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-3 ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಟೂರ್ನಿಯಿಂದ 2 ತಂಡಗಳು ಹೊರಬಿದ್ದಿದ್ದು, 3 ಟೀಮ್​ಗಳು ಪ್ಲೇಆಫ್​ಗೆ ಪ್ರವೇಶಿಸಿದೆ. ಹೀಗೆ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಿದೆ. ವುಮೆನ್ಸ್ ಪ್ರೀಮಿಯರ್ ಲೀಗ್ ಪ್ಲೇಆಫ್ ನಿಯಮಗಳ ಪ್ರಕಾರ, ಲೀಗ್ ಹಂತದ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸುತ್ತದೆ.

ಅದರಂತೆ ಈ ಬಾರಿಯ ಟೂರ್ನಿಯಲ್ಲಿ 8 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು 5 ಜಯ ಹಾಗೂ 3 ಸೋಲುಗಳೊಂದಿಗೆ ಒಟ್ಟು 10 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ನೇರವಾಗಿ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ.

ಹ್ಯಾಟ್ರಿಕ್ ಫೈನಲ್:

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಫೈನಲ್​ಗೆ ಪ್ರವೇಶಿಸುತ್ತಿರುವುದು ಇದು ಮೂರನೇ ಬಾರಿ. ಅಂದರೆ ಕಳೆದ ಎರಡು ಸೀಸನ್​ಗಳಲ್ಲೂ ಡಿಸಿ ಪಡೆ ಫೈನಲ್​ ಆಡಿತ್ತು. ಆದರೆ ಮೊದಲ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೆ, ದ್ವಿತೀಯ ಸೀಸನ್​ನಲ್ಲಿ ಆರ್​ಸಿಬಿ ವಿರುದ್ಧ ಸೋಲುಂಡಿತ್ತು. ಇದೀಗ ಮತ್ತೊಮ್ಮೆ ಫೈನಲ್​ಗೆ ಲಗ್ಗೆಯಿಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಎದುರಾಳಿಗಾಗಿ ಕಾದು ಕುಳಿತಿದೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಎಲಿಮಿನೇಟರ್ ಪಂದ್ಯ:

WPL ಅಂಕ ಪಟ್ಟಿಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನ ಅಲಂಕರಿಸುವ ತಂಡ ಎಲಿಮಿನೇಟರ್ ಪಂದ್ಯವಾಡಲಿದೆ. ಅದರಂತೆ ದ್ವಿತೀಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಹಾಗೂ ತೃತೀಯ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ ನಾಕೌಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಿದರೆ, ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಮುಂದಿನ ಪಂದ್ಯವು ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಇದನ್ನೂ ಓದಿ: ಯುಜ್ವೇಂದ್ರ ಚಹಲ್ ಲವ್ವಿ ಡವ್ವಿ: ಪತಿಯ ಫೋಟೋ ಮತ್ತೆ ಹಂಚಿಕೊಂಡ ಧನಶ್ರೀ ವರ್ಮಾ

ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿ:

  • ಮಾರ್ಚ್ 13- ಎಲಿಮಿನೇಟರ್ ಪಂದ್ಯ: ಮುಂಬೈ ಇಂಡಿಯನ್ಸ್​ vs ಗುಜರಾತ್ ಜೈಂಟ್ಸ್ (ಬ್ರಬೋರ್ನ್ ಸ್ಟೇಡಿಯಂ, ಮುಂಬೈ)
  • ಮಾರ್ಚ್ 15- ಫೈನಲ್ ಪಂದ್ಯ: ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ ಅಥವಾ ಮುಂಬೈ ಇಂಡಿಯನ್ಸ್ (ಬ್ರಬೋರ್ನ್ ಸ್ಟೇಡಿಯಂ, ಮುಂಬೈ)
Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ