AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡತಿ ಮಿಂಚಿಂಗ್: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್

Mumbai Indians Women vs Delhi Capitals Women: WPL ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ರೋಚಕ ಗೆಲುವಿನ ರೂವಾರಿ 19ರ ಹರೆಯದ ಕನ್ನಡತಿ ನಿಕಿ ಪ್ರಸಾದ್. ಇದೇ ಮೊದಲ ಬಾರಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಪಂದ್ಯವಾಡಿದ್ದ ನಿಕಿ ಪ್ರಸಾದ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕನ್ನಡತಿ ಮಿಂಚಿಂಗ್: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್
Delhi Capitals
ಝಾಹಿರ್ ಯೂಸುಫ್
|

Updated on: Feb 16, 2025 | 7:31 AM

Share

ವುಮೆನ್ಸ್ ಪ್ರೀಮಿಯರ್ ಲೀಗ್​ನ ದ್ವಿತೀಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. ವಡೋದಾರದ ಕೋಟಂಬಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ನ್ಯಾಟ್ ಸಿವರ್ ಬ್ರಂಟ್ 59 ಎಸೆತಗಳಲ್ಲಿ 13 ಫೋರ್​ಗಳೊಂದಿಗೆ ಅಜೇಯ 80 ರನ್ ಬಾರಿಸಿದರು. ಇನ್ನು ನಾಯಕಿ ಹರ್ಮನ್​ಪ್ರೀತ್ ಕೌರ್ 42 ರನ್​ ಚಚ್ಚಿದರು. ಈ ಮೂಲಕ ಮುಂಬೈ ಇಂಡಿಯನ್ಸ್ 19.1 ಓವರ್​ಗಳಲ್ಲಿ 164 ರನ್​ ಬಾರಿಸಿ ಆಲೌಟ್ ಆಯಿತು.

165 ರನ್​ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶಫಾಲಿ ವರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು. ಅಲ್ಲದೆ ನಾಯಕಿ ಮೆಗ್ ಲ್ಯಾನಿಂಗ್ ಜೊತೆಗೂಡಿ ಮೊದಲ ವಿಕೆಟ್​ಗೆ 60 ರನ್​ಗಳ ಜೊತೆಯಾಟವಾಡಿದ್ದರು.

ಆದರೆ ಶಫಾಲಿ ವರ್ಮಾ (43) ಹಾಗೂ ಮೆಗ್ ಲ್ಯಾನಿಂಗ್ (15) ಔಟಾಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಮುಂಬೈ ಇಂಡಿಯನ್ಸ್ ಬೌಲರ್​ಗಳು ಡಿಸಿ ಪಡೆ 109 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಉರುಳಿಸಿದರು.

ಮಿಂಚಿದ ಕನ್ನಡತಿ:

ಈ ಹಂತದಲ್ಲಿ ಕಣಕ್ಕಿಳಿದ ಕನ್ನಡತಿ ನಿಕಿ ಪ್ರಸಾದ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಅನುಭವಿ ಬೌಲರ್​ಗಳನ್ನು ನಿರಾಯಾಸವಾಗಿ ಎದುರಿಸಿದ 19ರ ಹರೆಯದ ನಿಕಿ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ 4 ಫೋರ್​ ಬಾರಿಸಿ ಇನಿಂಗ್ಸ್ ಕಟ್ಟಿದರು.

ಇದಾಗ್ಯೂ ಕೊನೆಯ 2 ಓವರ್​ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 21 ರನ್​ಗಳ ಅವಶ್ಯಕತೆಯಿತ್ತು. 19ನೇ ಓವರ್​ನಲ್ಲಿ ರಾಧಾ ಯಾದವ್ ಸಿಕ್ಸ್ ಬಾರಿಸುವುದರೊಂದಿಗೆ ಒಟ್ಟು 11 ರನ್​ ಕಲೆಹಾಕುವಲ್ಲಿ ಯಶಸ್ವಿಯಾದರು.

ಅದರಂತೆ ಕೊನೆಯ ಓವರ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 10 ರನ್​ಗಳ ಗುರಿ ಪಡೆಯಿತು. ಸಜನಾ ಎಸೆದ 20ನೇ ಓವರ್​ನ ಮೊದಲ ಎಸೆತದಲ್ಲೇ ನಿಕಿ ಪ್ರಸಾದ್ ಫೋರ್ ಬಾರಿಸಿದರು. 2ನೇ ಎಸೆತದಲ್ಲಿ ಮತ್ತೆರಡು ರನ್ ಓಡಿದರು.

3ನೇ ಎಸೆತದಲ್ಲಿ ಒಂದು ರನ್ ಕಲೆಹಾಕಿದರು. 4ನೇ ಎಸೆತದಲ್ಲಿ ರಾಧಾ ಯಾದವ್ ಒಂದು ರನ್ ಓಡಿದರು. ಕೊನೆಯ ಎರಡು ಎಸೆತಗಳಲ್ಲಿ 2 ರನ್ ಬೇಕಿತ್ತು. ಈ ವೇಳೆ 5ನೇ ಬಾಲ್​ನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ನಿಕಿ ಪ್ರಸಾದ್ (35) ಕ್ಯಾಚ್ ನೀಡಿದರು.

ಅಂತಿಮ ಎಸೆತದಲ್ಲಿ 2 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಆರುಂಧತಿ ರೆಡ್ಡಿ ಆಫ್ ಸೈಡ್​ನತ್ತ ಬಾರಿಸಿ 2 ರನ್ ಓಡಿದರು. ಇದರ ನಡುವೆ ಹರ್ಮನ್​ಪ್ರೀತ್ ಕೌರ್ ಎಸೆದ ಥ್ರೋ ಮೂಲಕ ವಿಕೆಟ್ ಕೀಪರ್ ರನೌಟ್ ಮಾಡಿದರು.

ವಿಕೆಟ್ ಕೀಪರ್​ನ ರನೌಟ್ ಮನವಿಯನ್ನು ಪರಿಶೀಲಿಸಿದಾಗ, ಮಿಲಿ ಮೀಟರ್​ ಅಂತರದಲ್ಲಿ ಆರುಂಧತಿ ರೆಡ್ಡಿ ಬ್ಯಾಟ್ ಕ್ರೀಸ್​ ಒಳಗಿರುವುದು ಕಂಡು ಬಂತು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂತಿಮ ಎಸೆತದಲ್ಲಿ 2 ರನ್​ಗಳಿಸಿ 2 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

Niki

ಕನ್ನಡತಿ ನಿಕಿ ಪ್ರಸಾದ್

ಇದನ್ನೂ ಓದಿ: WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಇತಿಹಾಸ ನಿರ್ಮಿಸಿದ RCB

ಈ ಗೆಲುವಿನೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನ 3ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಶುಭಾರಂಭ ಮಾಡಿದೆ. ಇದಕ್ಕೂ ಮುನ್ನ ನಡೆದ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆರ್​ಸಿಬಿ ದಾಖಲೆಯ ಜಯ ಸಾಧಿಸಿತ್ತು.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ