AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಕೊನೆಗೂ ಗೆದ್ದು ಟೂರ್ನಿಯಿಂದ ಹೊರಬಿದ್ದ RCB

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲೆರಡು ಪಂದ್ಯಗಳಲ್ಲಿ ಜಯ ಸಾಧಿಸಿ, ಆ ಬಳಿಕ ಸತತ 5 ಮ್ಯಾಚ್​ಗಳಲ್ಲಿ ಸೋಲನುಭವಿಸಿತ್ತು. ಇದೀಗ ಕೊನೆಯ ಲೀಗ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ವುಮೆನ್ಸ್ ಪ್ರೀಮಿಯರ್ ಲೀಗ್​ ಅಭಿಯಾನ ಅಂತ್ಯಗೊಳಿಸಿದೆ.

WPL 2025: ಕೊನೆಗೂ ಗೆದ್ದು ಟೂರ್ನಿಯಿಂದ ಹೊರಬಿದ್ದ RCB
RCB
ಝಾಹಿರ್ ಯೂಸುಫ್
|

Updated on: Mar 12, 2025 | 6:58 AM

Share

ವುಮೆನ್ಸ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಸತತ 5 ಸೋಲುಗಳಿಂದ ಕಂಗೆಟ್ಟಿದ್ದ ಆರ್​ಸಿಬಿ ಪಡೆ ತನ್ನ ಅಂತಿಮ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗು ಬಡಿಯುವಲ್ಲಿ ಯಶಸ್ವಿಯಾಗಿದೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ನಾಯಕಿ ಸ್ಮೃತಿ ಮಂಧಾನ 37 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 53 ರನ್ ಬಾರಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಎಲ್ಲಿಸ್ ಪೆರ್ರಿ ಅಜೇಯ 49 ರನ್​ ಸಿಡಿಸಿದರೆ, ರಿಚಾ ಘೋಷ್ 36 ರನ್​ಗಳ ಕೊಡುಗೆ ನೀಡಿದರು.

ಇನ್ನು ಅಂತಿಮ ಓವರ್​ಗಳ ವೇಳೆ ಜಾರ್ಜಿಯಾ ವೇರ್‌ಹ್ಯಾಮ್ 10 ಎಸೆತಗಳಲ್ಲಿ 5 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 31 ರನ್ ಬಾರಿಸಿದರು. ಈ ಮೂಲಕ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

20 ಓವರ್​ಗಳಲ್ಲಿ 200 ರನ್​ಗಳ ಗುರಿ ಪಡೆದ ಮುಂಬೈ ಇಂಡಿಯನ್ಸ್ ಪರ ನ್ಯಾಟ್ ಸಿವರ್-ಬ್ರಂಟ್ 35 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 69 ರನ್ ಚಚ್ಚಿದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

ಪರಿಣಾಮ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 28 ರನ್​ಗಳು ಬೇಕಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಸಜನಾ ಬ್ಯಾಕ್ ಟು ಬ್ಯಾಕ್ ಎರಡು ಸಿಕ್ಸ್ ಸಿಡಿಸಿ ಗೆಲುವಿನ ಆಸೆ ಮೂಡಿಸಿದರು. ಆದರೆ ಅನುಭವಿ ಆಟಗಾರ್ತಿ ಎಲ್ಲಿಸ್ ಪೆರ್ರಿ ಕೊನೆಯ ಮೂರು ಎಸೆತಗಳನ್ನು ಡಾಟ್ ಮಾಡುವ ಮೂಲಕ ಆರ್​ಸಿಬಿ ತಂಡಕ್ಕೆ 11 ರನ್​ಗಳ ಜಯ ತಂದುಕೊಟ್ಟರು.

ಗೆದ್ದರೂ ಹೊರಬಿದ್ದ ಆರ್​ಸಿಬಿ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಯ ಪಂದ್ಯದಲ್ಲಿ ಗೆದ್ದರೂ ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-3 ಯಿಂದ ಹೊರಬಿದ್ದಿದೆ. ಈ ಸಲ ಆಡಿದ 8 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಈ ಮೂರು ಜಯದೊಂದಿಗೆ 6 ಅಂಕ ಪಡೆದಿರುವ ಆರ್​ಸಿಬಿ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿ WPL ಅಭಿಯಾನ ಅಂತ್ಯಗೊಳಿಸಿದೆ.

ಅತ್ತ ಸೋಲಿನ ಹೊರತಾಗಿಯೂ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದ್ದು, ಅದರಂತೆ ಗುಜರಾತ್ ಜೈಂಟ್ಸ್ ತಂಡದ ವಿರುದ್ಧ ಎಲಿಮಿನೇಟರ್ ಪಂದ್ಯವನ್ನಾಡಲಿದೆ.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11: ಹೇಲಿ ಮ್ಯಾಥ್ಯೂಸ್ , ಅಮೆಲಿಯಾ ಕೆರ್ , ನ್ಯಾಟ್ ಸಿವರ್-ಬ್ರಂಟ್ , ಹರ್ಮನ್‌ಪ್ರೀತ್ ಕೌರ್ (ನಾಯಕಿ) , ಅಮಂಜೋತ್ ಕೌರ್ , ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್) , ಸಜನಾ ಎಸ್​ , ಜಿ ಕಮಲಿನಿ , ಸಂಸ್ಕೃತಿ ಗುಪ್ತಾ , ಶಬ್ನಿಮ್ ಇಸ್ಮಾಯಿಲ್ , ಪರುನಿಕಾ ಸಿಸೋಡಿಯಾ.

ಇದನ್ನೂ ಓದಿ: ಯುಜ್ವೇಂದ್ರ ಚಹಲ್ ಲವ್ವಿ ಡವ್ವಿ: ಪತಿಯ ಫೋಟೋ ಮತ್ತೆ ಹಂಚಿಕೊಂಡ ಧನಶ್ರೀ ವರ್ಮಾ

ಆರ್​ಸಿಬಿ ಪ್ಲೇಯಿಂಗ್ 11: ಸಬ್ಬಿನೇನಿ ಮೇಘನಾ , ಸ್ಮೃತಿ ಮಂಧಾನ (ನಾಯಕಿ) , ಎಲ್ಲಿಸ್ ಪೆರ್ರಿ , ರಿಚಾ ಘೋಷ್ ( ವಿಕೆಟ್ ಕೀಪರ್ ) , ಕನಿಕಾ ಅಹುಜಾ , ಜಾರ್ಜಿಯಾ ವೇರ್‌ಹ್ಯಾಮ್ , ಹೀದರ್ ಗ್ರಹಾಂ , ಸ್ನೇಹ್ ರಾಣಾ , ಕಿಮ್ ಗಾರ್ತ್ , ಪ್ರೇಮಾ ರಾವತ್ , ಜೋಶಿತಾ ವಿಜೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್