Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಆರ್​ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ; ಸೇಡು ತೀರಿಸಿಕೊಳ್ಳುವ ತವಕದಲ್ಲಿ ಗುಜರಾತ್

RCB vs GG: ತವರಿನಲ್ಲಿ ಸತತ ಎರಡು ಸೋಲುಗಳನ್ನು ಅನುಭವಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಗುಜರಾತ್ ಟೈಟಾನ್ಸ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ತವರಿನ ಹೊರಗೆ ನಡೆದಿದ್ದ ಮೊದಲ ಎರಡು ಪಂದ್ಯಗಳನ್ನು ಗೆದ್ದಿದ್ದ ಆರ್‌ಸಿಬಿ, ತವರಿನಲ್ಲಿನ ಸೋಲುಗಳಿಂದ ಕಂಗೆಟ್ಟಿದೆ. ಗುಜರಾತ್ ಕೂಡ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯವು ಉಭಯ ತಂಡಗಳಿಗೂ ಟೂರ್ನಮೆಂಟ್‌ನಲ್ಲಿ ಮುಂದುವರಿಯಲು ನಿರ್ಣಾಯಕವಾಗಿದೆ.

WPL 2025: ಆರ್​ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ; ಸೇಡು ತೀರಿಸಿಕೊಳ್ಳುವ ತವಕದಲ್ಲಿ ಗುಜರಾತ್
ಆರ್​ಸಿಬಿ Vs ಗುಜರಾತ್
Follow us
ಪೃಥ್ವಿಶಂಕರ
|

Updated on:Feb 27, 2025 | 3:10 PM

ತವರಿನಿಂದ ಹೊರಗೆ ನಡೆದಿದ್ದ ಮೊದಲೆರಡು ಪಂದ್ಯಗಳನ್ನು ಸುಲಭವಾಗಿ ಗೆದ್ದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಮಹಿಳಾ ತಂಡ, ತವರಿನಲ್ಲಿ ತನ್ನ ಪ್ರಯಾಣ ಮುಂದುವರೆಸಿದ ಬಳಿಕ ಸತತ ಸೋಲುಗಳಿಂದ ಕಂಗೆಟ್ಟಿದೆ. ಬೆಂಗಳೂರಿನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಆರ್​ಸಿಬಿ ಸೋಲಿನ ಆಘಾತ ಎದುರಿಸಿದೆ. ಈ ಎರಡು ಪಂದ್ಯಗಳ ಸೋಲಿಗೆ ಆರ್​ಸಿಬಿ ಮಾಡಿಕೊಂಡ ಎಡವಟ್ಟುಗಳೇ ಪ್ರಮುಖ ಕಾರಣವಾಗಿದ್ದವು. ಹೀಗಾಗಿ ಕಳೆದೆರಡು ಪಂದ್ಯಗಳಲ್ಲಿ ಮಾಡಿದ ತಪ್ಪನ್ನು ಸರಿಪಡಿಸಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿರುವ ಆರ್​ಸಿಬಿಗೆ ಇಂದಿನ ಎದುರಾಳಿಯಾಗಿ ಗುಜರಾತ್ ಜೈಂಟ್ಸ್ (Gujarat Giants) ತಂಡ ಮುಂದೆ ನಿಂತಿದೆ. ಒಂದೆಡೆ ಆರ್​ಸಿಬಿಗೆ ಮತ್ತೆ ಗೆಲುವಿನ ಲಯಕ್ಕೆ ಮರಳುವ ಇರಾದೆಯಿದ್ದರೆ, ಇನ್ನೊಂದೆಡೆ, ಉದ್ಘಾಟನಾ ಪಂದ್ಯದಲ್ಲಿ ಎದುರಿಸಿದ್ದ ಹೀನಾಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿಯೊಂದಿಗೆ ಗುಜರಾತ್ ಕಣಕ್ಕಿಳಿಯಲಿದೆ.

ಸತತ 2 ಸೋಲು

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತನ್ನ ಮೂರನೇ ಪಂದ್ಯವನ್ನಾಡುತ್ತಿರುವ ಹಾಲಿ ಚಾಂಪಿಯನ್ ಆರ್‌ಸಿಬಿ ಈ ಟೂರ್ನಿಯಲ್ಲಿ ಇದುವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡರಲ್ಲಿ ಜಯ ಸಾಧಿಸಿದೆ. ಟೂರ್ನಮೆಂಟ್‌ನ ಆರಂಭಿಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿದ್ದ ಆರ್​ಸಿಬಿ, ಆ ನಂತರ ತನ್ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿತ್ತು. ಆದರೆ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಮುಂಬೈ ಮತ್ತು ಯುಪಿ ವಾರಿಯರ್ಸ್​ ವಿರುದ್ಧ ತಂಡ ಸೋಲನುಭವಿಸಬೇಕಾಯಿತು.

ಯಪಿ ವಾರಿಯರ್ಸ್​ ವಿರುದ್ಧದ ಕಳೆದ ಪಂದ್ಯದಲ್ಲಿ, ಸ್ಮೃತಿ ಮಂಧಾನ ನೇತೃತ್ವದ ತಂಡವು ಎಲಿಸ್ ಪೆರ್ರಿ ಅವರ 90 ರನ್‌ಗಳ ಭರ್ಜರಿ ಬ್ಯಾಟಿಂಗ್ ನೆರವಿನಿಂದ 181 ರನ್‌ಗಳ ಬೃಹತ್ ಗುರಿ ನೀಡಿತು. ಇತ್ತ ಯುಪಿ ವಾರಿಯರ್ಸ್ ಕೂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ ಸ್ಕೋರ್ ಅನ್ನು ಸಮಬಲಗೊಳಿಸಿತು. ಆ ಬಳಿಕ ನಡೆದ ಸೂಪರ್ ಓವರ್‌ನಲ್ಲಿ ಯುಪಿ ವಾರಿಯರ್ಸ್​, ಆರ್​ಸಿಬಿ ತಂಡವನ್ನು ಮಣಿಸಿ ರೋಚಕ ಜಯ ಸಾಧಿಸಿತು.

ಇದನ್ನೂ ಓದಿ
Image
ಗುಜರಾತ್ ವಿರುದ್ಧ ಸುಲಭವಾಗಿ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್
Image
ಸತತ 2ನೇ ಬಾರಿಗೆ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಆರ್​ಸಿಬಿ
Image
ಆರ್​ಸಿಬಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ

ಗುಜರಾತ್​ಗೂ ಬೇಕಿದೆ ಗೆಲುವು

ಇತ್ತ ಆಶ್ಲೇ ಗಾರ್ಡ್ನರ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಆರ್‌ಸಿಬಿ ವಿರುದ್ಧ ತಮ್ಮ ಟೂರ್ನಮೆಂಟ್‌ನ ಆರಂಭಿಕ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕಿಯೂ ಸೋತಿತು. ಇದೀಗ ಆರ್​ಸಿಬಿಯನ್ನು ಎರಡನೇ ಬಾರಿಗೆ ಎದುರಿಸುತ್ತಿರುವ ಗುಜರಾತ್ ಮೊದಲ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೆ ನಾಲ್ಕು ಪಂದ್ಯಗಳನ್ನಾಡಿರುವ ಗುಜರಾತ್ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ತನ್ನ ಎರಡನೇ ಗುಂಪು ಹಂತದ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು ಸೋಲಿಸಿದ್ದ ಗುಜರಾತ್, ಆ ಬಳಿಕ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲನುಭವಿಸಬೇಕಾಯಿತು.

ಇದನ್ನೂ ಓದಿ: WPL 2025: ರಣರೋಚಕ ಪಂದ್ಯದಲ್ಲಿ ಆರ್​ಸಿಬಿಗೆ ವೀರೋಚಿತ ಸೋಲು

ಹೀಗಾಗಿ ಟೂರ್ನಿಯಲ್ಲಿ ಉಳಿಯಲು ಉಭಯ ತಂಡಗಳಿಗೂ ಇದು ಮಹತ್ವದ ಪಂದ್ಯವಾಗಿದೆ. ಸತತ ಎರಡು ಸೋಲುಗಳಿಂದ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಾರಿರುವ ಆರ್​ಸಿಬಿ, ಈ ಪಂದ್ಯವನ್ನು ಗೆದ್ದು ಮತ್ತೆ ಮೊದಲ ಸ್ಥಾನಕ್ಕೇರುವ ಅವಕಾಶ ಪಡೆದಿದೆ. ಹಾಗೆಯೇ ಸೆಮಿಫೈನಲ್​ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು ಆರ್​ಸಿಬಿಗೆ ಈ ಪಂದ್ಯ ಬಹಳ ಮುಖ್ಯವಾಗಿದೆ. ಏಕೆಂದರೆ ಆರ್​ಸಿಬಿಯ ಮುಂದಿನ ಮೂರು ಪಂದ್ಯಗಳು ಬಲಿಷ್ಠ ತಂಡಗಳ ವಿರುದ್ಧವಿದೆ. ಹೀಗಾಗಿ ಆರ್​ಸಿಬಿ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಿದೆ. ಇತ್ತ ಗುಜರಾತ್ ಕೂಡ ಸೆಮೀಸ್​ ರೇಸ್​ನಲ್ಲಿ ಜೀವಂತವಾಗಿರಲು ಇಂದಿನ ಗೆಲುವು ಅತ್ಯವಶ್ಯಕವಾಗಿದೆ.

ಉಭಯ ತಂಡಗಳು

ಆರ್​ಸಿಬಿ: ಸ್ಮೃತಿ ಮಂಧಾನ (ನಾಯಕಿ), ಸಬ್ಬಿನೇನಿ ಮೇಘನಾ, ಎಲೈಸ್ ಪೆರ್ರಿ, ರಿಚಾ ಘೋಷ್, ಜಾರ್ಜಿಯಾ ವೇರ್‌ಹ್ಯಾಮ್, ರೇಣುಕಾ ಸಿಂಗ್, ಏಕ್ತಾ ಬಿಶ್ತ್, ಕನಿಕಾ ಅಹುಜಾ, ಡ್ಯಾನಿ ವ್ಯಾಟ್-ಹಾಡ್ಜ್, ಹೀದರ್ ಗ್ರಹಾಂ, ಕಿಮ್ ಗಾರ್ತ್, ಚಾರ್ಲಿ ಡೀನ್, ಪ್ರೇಮಾ ರಾವತ್, ಜೋಶಿತಾ ವಿಜೆ, ಜಾಗ್ರವಿ ಪವಾರ್, ರಾಘ್ವಿ ಬಿಶ್ತ್

ಗುಜರಾತ್: ಆಶ್ಲೀ ಗಾರ್ಡ್ನರ್ (ನಾಯಕಿ), ಬೆತ್ ಮೂನಿ, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೋಲ್ವಾರ್ಡ್, ಶಬ್ನಮ್ ಶಕಿಲ್, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್, ಮೇಘನಾ ಸಿಂಗ್, ಕಾಶ್ವೀ ಗೌತಮ್, ಪ್ರಿಯಾ ಮಿಶ್ರಾ, ಮನ್ನತ್ ಕಶ್ಯಪ್, ಸಯಾಲಿ ಸತ್ಗರೆ, ಸಿಮ್ರಾನ್ ಶೇಖ್, ದೆಯಾಂಡ್ರಾ ಡಾಟಿನ್, ಪ್ರಕಾಶಿಕಾ ನಾಯಕ್, ಡೇನಿಯಲ್ ಗಿಬ್ಸನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Thu, 27 February 25

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ