AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026: ಯುಪಿ ವಿರುದ್ಧ ಗೆದ್ದ ಡೆಲ್ಲಿ; ಟೂರ್ನಿಯಿಂದ ಹೊರಬಿದ್ದ ಮುಂಬೈ

WPL 2026: ಮಹಿಳಾ ಪ್ರೀಮಿಯರ್ ಲೀಗ್ ಸೀಸನ್ 4 ರ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯುಪಿ ವಾರಿಯರ್ಸ್ ತಂಡವನ್ನು ಮಣಿಸಿ ಎಲಿಮಿನೇಟರ್‌ಗೆ ಅರ್ಹತೆ ಗಳಿಸಿದೆ. ಡೆಲ್ಲಿಯ ಈ ಗೆಲುವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅನ್ನು ಲೀಗ್ ಹಂತದಿಂದಲೇ ಹೊರಹಾಕಿದೆ. ಮುಂಬೈ ಪ್ರವೇಶಿಸಬೇಕಿದ್ದರೆ ಡೆಲ್ಲಿ ಸೋಲಬೇಕಿತ್ತು. ಈಗ ಎಲಿಮಿನೇಟರ್‌ನಲ್ಲಿ ಗುಜರಾತ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಸೆಣಸಲಿವೆ.

WPL 2026: ಯುಪಿ ವಿರುದ್ಧ ಗೆದ್ದ ಡೆಲ್ಲಿ; ಟೂರ್ನಿಯಿಂದ ಹೊರಬಿದ್ದ ಮುಂಬೈ
Up W Vs Dc
ಪೃಥ್ವಿಶಂಕರ
|

Updated on:Feb 01, 2026 | 11:27 PM

Share

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್‌ನ ಲೀಗ್ ಹಂತದ 20ನೇ ಮತ್ತು ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ (DC vs UPW) ಪರಸ್ಪರ ಮುಖಾಮುಖಿಯಾಗಿದ್ದವು. ಬರೋಡಾದ ಕೋಟಂಬಿಯಲ್ಲಿರುವ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಲಿಮಿನೇಟರ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಡೆಲ್ಲಿ ತಂಡದ ಈ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದೆ. ವಾಸ್ತವವಾಗಿ ಮುಂಬೈ ತಂಡ ಎಲಿಮಿನೇಟರ್​ಗೆ ಅರ್ಹತೆ ಪಡೆಯಬೇಕಿದ್ದರೆ, ಈ ಪಂದ್ಯದಲ್ಲಿ ಡೆಲ್ಲಿ ಸೋಲಬೇಕಿತ್ತು. ಆದರೆ ಅದು ನಡೆಯಲಿಲ್ಲ. ಹೀಗಾಗಿ ಎಲಿಮಿನೇಟರ್​ನಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.

ಡೆಲ್ಲಿಗೆ ರೋಚಕ ಜಯ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಪಿ ತಂಡ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳಿಗೆ 122 ರನ್ ಗಳಿಸಿತು. ದೀಪ್ತಿ ಶರ್ಮಾ ತಂಡದ ಪರ ಅತ್ಯಧಿಕ 24 ರನ್‌ಗಳ ಇನ್ನಿಂಗ್ಸ್ ಆಡಿದರು. ಸಿಮ್ರಾನ್ ಶೇಖ್ 22 ರನ್​ಗಳ ಇನ್ನಿಂಗ್ಸ್ ಆಡಿದರೆ, ಕೊನೆಯಲ್ಲಿ ಶಿಖಾ ಪಾಂಡೆ ಕೂಡ 23 ರನ್​ಗಳ ಕಾಣಿಕೆ ನೀಡಿದರು. ಈ ಮೂವರನ್ನು ಹೊರತುಪಡಿಸಿ ಉಳಿದವರಿಂದ ಉತ್ತಮ ಇನ್ನಿಂಗ್ಸ್ ಮೂಡಿಬರಲಿಲ್ಲ. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್, ವೋಲ್ವಾರ್ಡ್ ಅವರ 47 ರನ್‌ಗಳ ಸ್ಫೋಟಕ ಇನ್ನಿಂಗ್ಸ್‌ ಹಾಗೂ ನಾಯಕಿ ಜೆಮಿಮಾ ರೊಡ್ರಿಗಸ್ ಅವರ ಅಜೇಯ 34 ರನ್​ಗಳ ಸಹಾಯದಿಂದ 18.4 ಓವರ್‌ಗಳಲ್ಲಿ 126 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.

ಗುಜರಾತ್- ಡೆಲ್ಲಿ ನಡುವೆ ಎಲಿಮಿನೇಟರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈಗಾಗಲೇ ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಹೀಗಾಗಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಎಲಿಮಿನೇಟರ್ ಪಂದ್ಯವು ಫೆಬ್ರವರಿ 3 ರಂದು ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೈನಲ್ ಪಂದ್ಯದ ನಂತರ ಫೆಬ್ರವರಿ 5 ರಂದು ಫೈನಲ್ ನಡೆಯಲಿದೆ. ಆರ್‌ಸಿಬಿ ತಂಡವು ಫೈನಲ್‌ನಲ್ಲಿ ಎಲಿಮಿನೇಟರ್ ಪಂದ್ಯದ ವಿಜೇತರನ್ನು ಎದುರಿಸಲಿದೆ.

WPL 2026: ಮೊಟ್ಟ ಮೊದಲ ಬಾರಿಗೆ ಮುಂಬೈ ಮಣಿಸಿ ಪ್ಲೇಆಫ್​ಗೇರಿದ ಗುಜರಾತ್

ಮುಂಬೈ, ಯುಪಿ ಪ್ರಯಾಣ ಅಂತ್ಯ

ಈ ಪಂದ್ಯದೊಂದಿಗೆ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳ ಪ್ರಯಾಣ ಲೀಗ್ ಹಂತದಲ್ಲೇ ಕೊನೆಗೊಂಡಿದೆ. ಮುಂಬೈ ಇಂಡಿಯನ್ಸ್ ಗುಂಪು ಹಂತದಲ್ಲಿ ಆಡಿದ ಎಂಟು ಪಂದ್ಯಗಳಲ್ಲಿ ಕೇವಲ ಮೂರರಲ್ಲಿ ಗೆದ್ದು ಐದರಲ್ಲಿ ಸೋತು, ಆರು ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಗಳಿಸಿದರೆ, ಯುಪಿ ವಾರಿಯರ್ಸ್ ಕೂಡ ಗುಂಪು ಹಂತದ ಆಡಿದ ಎಂಟು ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಗೆದ್ದು ಆರರಲ್ಲಿ ಸೋತಿದೆ. ಹೀಗಾಗಿ ನಾಲ್ಕು ಅಂಕಗಳೊಂದಿಗೆ ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:48 pm, Sun, 1 February 26

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ