
2026 ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ವಡೋದರಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಮುಖ್ಯವಾದ ವಿಷಯವೆಂದರೆ ಡೆಲ್ಲಿ ಫೈನಲ್‌ನಲ್ಲಿ 203 ರನ್‌ಗಳ ಬೃಹತ್ ಸ್ಕೋರ್ ದಾಖಲಿಸಿತು. ಆದರೆ ಆರ್‌ಸಿಬಿ ಪರ ನಾಯಕಿ ಸ್ಮೃತಿ ಮಂಧಾನ ಮತ್ತು ಜಾರ್ಜಿಯಾ ವಾಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದರು. ಈ ಇಬ್ಬರು ಆಟಗಾರ್ತಿಯರು ಎರಡನೇ ವಿಕೆಟ್‌ಗೆ ಸ್ಫೋಟಕ ಶತಕದ ಪಾಲುದಾರಿಕೆಯನ್ನು ಹಂಚಿಕೊಂಡರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡನೇ ಬಾರಿಗೆ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ವಡೋದರಾದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಆರ್‌ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿತು. ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡವು 203 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್‌ಸಿಬಿ ಪರ ನಾಯಕಿ ಸ್ಮೃತಿ ಮಂಧಾನ ಮತ್ತು ಜಾರ್ಜಿಯಾ ವಾಲ್ ಸ್ಫೋಟಕ ಶತಕದ ಪಾಲುದಾರಿಕೆಯ್ನು ನಡೆಸಿ ಡೆಲ್ಲಿ ತಂಡದ ಚಾಂಪಿಯನ್ ಕನಸನ್ನು ನುಚ್ಚುನೂರು ಮಾಡಿದರು.
ಫೈನಲ್ ಪಂದ್ಯದಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ಇನ್ನಿಂಗ್ಸ್ ಆಡಿ ಅದ್ಭುತ ಅರ್ಧಶತಕ ಗಳಿಸಿದರು. ಮಂಧಾನಾ ಕೇವಲ 23 ಎಸೆತಗಳಲ್ಲಿ ಅರ್ಧಶತಕ ತಲುಪಿದರು. ಇದು ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತ್ಯಂತ ವೇಗದ ಅರ್ಧಶತಕವಾಗಿದೆ.
ಫೈನಲ್‌ನಲ್ಲಿ ಜಾರ್ಜಿಯಾ ವಾಲ್ ಗಮನಾರ್ಹ ಇನ್ನಿಂಗ್ಸ್ ಆಡಿದರು. ಅವರು 37 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು ಮತ್ತು ಮಂಧಾನ ಅವರೊಂದಿಗೆ 50 ಎಸೆತಗಳಲ್ಲಿ 100 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ಓವರ್‌ಗಳಲ್ಲಿ 1 ವಿಕೆಟ್‌ಗೆ 59 ರನ್ ಗಳಿಸಿದೆ. ಸ್ಮೃತಿ ಮಂಧಾನ 17 ರನ್ ಮತ್ತು ಜಾರ್ಜಿಯಾ ವಾಲ್ 30 ರನ್‌ಗಳೊಂದಿಗೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಜೋಡಿಯಿಂದ ಆರ್‌ಸಿಬಿಗೆ ದೊಡ್ಡ ಪಾಲುದಾರಿಕೆಯ ಅಗತ್ಯವಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 9 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಗ್ರೇಸ್ ಹ್ಯಾರಿಸ್ 7 ಎಸೆತಗಳಲ್ಲಿ 9 ರನ್‌ಗಳಿಗೆ ಔಟಾದರು.
ದೆಹಲಿ ತಂಡವು ಅದ್ಭುತ ಬ್ಯಾಟಿಂಗ್ ನಡೆಸಿ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 203 ರನ್ ಗಳಿಸಿತು. ಜೆಮಿಮಾ ರೊಡ್ರಿಗಸ್ ಗರಿಷ್ಠ 57 ರನ್ ಗಳಿಸಿದರೆ, ಲಾರಾ ವೂಲ್‌ವಾರ್ಡ್ಟ್ 44 ರನ್ ಗಳಿಸಿದರು. ಶೆನೆಲ್ಲೆ ಹೆನ್ರಿ ಕೂಡ 15 ಎಸೆತಗಳಲ್ಲಿ ಅಜೇಯ 35 ರನ್ ಗಳಿಸಿದರು.
ಜೆಮಿಮಾ ರೊಡ್ರಿಗಸ್ ನಾಯಕಿಯ ಇನ್ನಿಂಗ್ಸ್ ಆಡಿ ಕೇವಲ 32 ಎಸೆತಗಳಲ್ಲಿ ಅರ್ಧಶತಕವ ಬಾರಿಸಿದರು. ದೆಹಲಿ 15 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿತು.
ಡೆಲ್ಲಿ ಕ್ಯಾಪಿಟಲ್ಸ್ 10 ಓವರ್‌ಗಳಲ್ಲಿ 2 ವಿಕೆಟ್‌ಗೆ 94 ರನ್ ಗಳಿಸಿದೆ. ಲಾರಾ ವೂಲ್‌ವಾರ್ಡ್ಟ್ 12 ರನ್ ಮತ್ತು ಜೆಮಿಮಾ ರೊಡ್ರಿಗಸ್ 18 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಆರ್‌ಸಿಬಿ ವಿಕೆಟ್‌ಗಾಗಿ ಹುಡುಕಾಟ ನಡೆಸುತ್ತಿದೆ.
ಮೊದಲ ನಾಲ್ಕು ಓವರ್‌ಗಳಲ್ಲಿ ಡೆಲ್ಲಿ ವಿಕೆಟ್ ನಷ್ಟವಿಲ್ಲದೆ 29 ರನ್ ಗಳಿಸಿತು. ಲಿಜೆಲ್ಲೆ ಲೀ (17) ಮತ್ತು ಶಫಾಲಿ ವರ್ಮಾ (6) ತಂಡದ ಸ್ಕೋರ್ ಅನ್ನು ಮುನ್ನಡೆಸುತ್ತಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಎರಡು ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 8 ರನ್ ಗಳಿಸಿದೆ. ಲಿಜೆಲ್ಲೆ ಲೀ ಮತ್ತು ಶಫಾಲಿ ವರ್ಮಾ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಲಿಜಿಲ್ಲೆ ಲೀ, ಶೆಫಾಲಿ ವರ್ಮಾ, ಲಾರಾ ವೂಲ್ವಾರ್ಡ್ಟ್, ಜೆಮಿಮಾ ರಾಡ್ರಿಗಸ್, ಮರಿಝನ್ನೆ ಕಪ್, ಚಿನೆಲ್ಲೆ ಹೆನ್ರಿ, ನಿಕಿ ಪ್ರಸಾದ್, ಸ್ನೇಹ ರಾಣಾ, ಮಿನ್ನಿ ಮಣಿ, ಶ್ರೀ ಚರಣಿ, ನಂದಿನಿ ಶರ್ಮಾ.
ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ, ಜಾರ್ಜಿಯಾ ವಾಲ್, ರಿಚಾ ಘೋಷ್, ರಾಧಾ ಯಾದವ್, ನಡಿನ್ ಡಿ ಕ್ಲರ್ಕ್, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಸಯಾಲಿ ಸತ್ಘರೆ, ಶ್ರೇಯಾಂಕ ಪಾಟೀಲ್ ಮತ್ತು ಲಾರೆನ್ ಬೆಲ್.
ಟಾಸ್ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ಕೂಡ ತಮ್ಮ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಈ ಪಂದ್ಯ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಆರಂಭವಾಗಲಿದ್ದು, ಟಾಸ್ 7 ಗಂಟೆಗೆ ನಡೆಯಲಿದೆ.
Published On - 6:42 pm, Thu, 5 February 26