WPL 2026 Final Date and Time: ಆರ್​ಸಿಬಿ- ಡೆಲ್ಲಿ ನಡುವೆ ಫೈನಲ್ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?

2026 Women's Premier League Live Streaming: ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆರ್‌ಸಿಬಿ 2024 ರ ಚಾಂಪಿಯನ್ ಆಗಿ ಕಣಕ್ಕಿಳಿದರೆ, ಡೆಲ್ಲಿ ತನ್ನ ಮೊದಲ ಟ್ರೋಫಿ ಗೆಲ್ಲಲು ಎದುರು ನೋಡುತ್ತಿದೆ. ಫೆಬ್ರವರಿ 5 ರಂದು ವಡೋದರಾದಲ್ಲಿ ನಡೆಯುವ ಈ ಪಂದ್ಯದ ದಿನಾಂಕ, ಸಮಯ, ಸ್ಥಳ ಮತ್ತು ನೇರ ಪ್ರಸಾರದ ವಿವರಗಳು ಇಲ್ಲಿವೆ.

WPL 2026 Final Date and Time: ಆರ್​ಸಿಬಿ- ಡೆಲ್ಲಿ ನಡುವೆ ಫೈನಲ್ ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ?
Rcb Vs Dc

Updated on: Feb 04, 2026 | 5:58 PM

2026 ರ ಮಹಿಳಾ ಪ್ರೀಮಿಯರ್ ಲೀಗ್ (Women’s Premier League)​ ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs Delhi Capitals) ತಂಡ ಮುಖಾಮುಖಿಯಾಗಲಿವೆ. ಒಂದೆಡೆ ಆರ್​ಸಿಬಿ ಲೀಗ್ ಹಂತದಲ್ಲಿ 6 ಪಂದ್ಯಗಳನ್ನು ಗೆದ್ದು ನೇರವಾಗಿ ಫೈನಲ್​ಗೆ ಅರ್ಹತೆ ಪಡೆದಿದ್ದರೆ, ಇನ್ನೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ಎಲಿಮಿನೇಟರ್​ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್​ಗೆ ಸೋಲುಣಿಸಿ ಸತತ ನಾಲ್ಕನೇ ಬಾರಿಗೆ ಫೈನಲ್​ಗೆ ಎಂಟ್ರಿಕೊಟ್ಟಿದೆ. ಡೆಲ್ಲಿ ತಂಡ 4 ಬಾರಿ ಫೈನಲ್​ ಆಡಿದರೂ ಇದುವರೆಗೆ ಟ್ರೋಪಿ ಎತ್ತಿಹಿಡಿಯಲು ಸಾಧ್ಯವಾಗಿಲ್ಲ. ಇತ್ತ 2024 ರ ಆವೃತ್ತಿಯಲ್ಲಿ ಫೈನಲ್​ಗೆ ಲಗ್ಗೆ ಇಟ್ಟಿದ್ದ ಆರ್​ಸಿಬಿ, ಇದೇ ಡೆಲ್ಲಿ ತಂಡವನ್ನು ಮಣಿಸಿ ಟ್ರೋಫಿಯನ್ನು ಎತ್ತಿಹಿಡಿದಿತ್ತು. ಹೀಗಾಗಿ ಆರ್​ಸಿಬಿ ಅದೇ ಇತಿಹಾಸವನ್ನು ಮರುಕಳಿಸಲು ನೋಡುತ್ತಿದ್ದರೆ, ಇತ್ತ ಡೆಲ್ಲಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ.

ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಫೈನಲ್ ಪಂದ್ಯ ಫೆಬ್ರವರಿ 5 ರ ಗುರುವಾರ ನಡೆಯಲಿದೆ.

ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವಿನ ಫೈನಲ್ ಪಂದ್ಯ ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ.

ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಆರಂಭವಾಗಲಿದೆ. ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ.

ಮಹಿಳಾ ಪ್ರೀಮಿಯರ್ ಲೀಗ್ 2026 ರ ಫೈನಲ್ ಪಂದ್ಯದ ನೇರ ಪ್ರಸಾರ ವೀಕ್ಷಿಸುವುದು ಹೇಗೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ದೆಹಲಿ ಕ್ಯಾಪಿಟಲ್ಸ್ ನಡುವಿನ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದು.

WPL 2026: 8 ವಿಕೆಟ್​ಗಳಿಂದ ಗೆದ್ದು ನೇರವಾಗಿ ಫೈನಲ್​ಗೆ ಎಂಟ್ರಿಕೊಟ್ಟ ಆರ್​ಸಿಬಿ

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ರಿಚಾ ಘೋಷ್, ಸಯಾಲಿ ಸತ್‌ಘರೆ, ಶ್ರೇಯಾಂಕಾ ಪಾಟೀಲ್, ಜಾರ್ಜಿಯಾ ವೋಲ್, ನಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಲಾರೆನ್ ಬೆಲ್, ಲಿನ್ಸೆ ಸ್ಮಿತ್, ಪ್ರೇಮಾ ರಾವತ್, ಅರುಂಧತಿ ರೆಡ್ಡಿ, ಪೂಜಾ ವಸ್ತ್ರಾಕರ್, ಗ್ರೇಸ್ ಹ್ಯಾರಿಸ್, ಗೌತಮಿ ನಾಯಕ್, ಪ್ರತ್ಯೂಷಾ ಕುಮಾರ್, ಡಿ ಹೇಮಲತಾ

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಲಿಜೆಲ್ ಲೀ, ಶಫಾಲಿ ವರ್ಮಾ, ಲಾರಾ ವೊಲ್ವಾರ್ಡ್ಟ್, ಜೆಮಿಮಾ ರಾಡ್ರಿಗಸ್(ನಾಯಕಿ), ಮರಿಜಾನ್ನೆ ಕಪ್, ಚಿನೆಲ್ಲೆ ಹೆನ್ರಿ, ನಿಕಿ ಪ್ರಸಾದ್, ಸ್ನೇಹ್ ರಾಣಾ, ಮಿನ್ನು ಮಣಿ, ಶ್ರೀ ಚರಣಿ, ನಂದನಿ ಶರ್ಮಾ, ಎಡ್ಲಾ ಸೃಜನಾ, ಪ್ರಗತಿ ಸಿಂಗ್, ಲೂಸಿ ಹ್ಯಾಮಿಲ್ಟನ್, ತಾನಿಯಾ ಭಾಟಿಯಾ, ಅಲಾನಾ ಕಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us