AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026: ರಣರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ

WPL 2026 Opener: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಭರ್ಜರಿ ಶುಭಾರಂಭ ಮಾಡಿದೆ. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ನಡಿನ್ ಡಿ ಕ್ಲರ್ಕ್ ಆಲ್​ರೌಂಡರ್ ಪ್ರದರ್ಶನ ನೀಡಿ ಕೊನೆಯ ಓವರ್​ನಲ್ಲಿ ಸಿಕ್ಸರ್ ಹಾಗೂ ಬೌಂಡರಿಗಳ ಮೂಲಕ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಕೊನೆಯ ಎಸೆತದಲ್ಲಿ ಗೆಲುವು ಸಾಧಿಸಿದ್ದು, ಆರ್​ಸಿಬಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ.

WPL 2026: ರಣರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ
Nadine De Klerk
ಪೃಥ್ವಿಶಂಕರ
|

Updated on:Jan 09, 2026 | 11:55 PM

Share

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ (RCB vs MI) ನಡುವಿನ ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಆರ್​ಸಿಬಿ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಕೊನೆಯ ಎಸೆತದವರೆಗೂ ಯಾವ ತಂಡಕ್ಕೆ ಗೆಲುವು ಸಿಗಲಿದೆ ಎಂಬುದನ್ನು ಹೇಳುವುದು ಕಷ್ಟಕರವಾಗಿತ್ತು. ಆದಾಗ್ಯೂ ಆರ್​​ಸಿಬಿ ಪರ ಆಲ್​ರೌಂಡರ್ ಪ್ರದರ್ಶನ ನೀಡಿದ ನಡಿನ್ ಡಿ ಕ್ಲರ್ಕ್​ ಕೊನೆಯ ಓವರ್​ನಲ್ಲಿ 2 ಸಿಕ್ಸರ್ ಹಾಗೂ 2 ಬೌಂಡರಿ ಬಾರಿಸಿ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 154 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಗೆಲುವಿನ ದಡ ಮುಟ್ಟಿತು.

ಮುಂಬೈಗೆ ಆರಂಭಿಕ ಆಘಾತ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ಕಳಪೆ ಆರಂಭವನ್ನೇ ಕಂಡಿತು. ಅಮೆಲಿಯಾ ಕೆರ್ 15 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿ ಔಟಾದರೆ, ಆ ನಂತರ ಬಂದ ನ್ಯಾಟ್ ಸಿವರ್-ಬ್ರಂಟ್, ಹರ್ಮನ್ ಪ್ರೀತ್ ಕೌರ್ ಬೇಗನೆ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ಮುಂಬೈ ತಂಡವು ಕೇವಲ 67 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದಾಗ್ಯೂ, ಎರಡೆರಡು ಜೀವದಾನಗಳ ಲಾಭ ಪಡೆದ ಸಜೀವನ ಸಜ್ನಾ ಮತ್ತು ನಿಕೋಲಾ ಕ್ಯಾರಿ ಜೋಡಿ ಅದ್ಭುತ ಬ್ಯಾಟಿಂಗ್ ನಡೆಸಿ ಮುಂಬೈ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಸಜೀವನ ಸಜ್ನಾ 25 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಸೇರಿದಂತೆ 45 ರನ್ ಬಾರಿಸಿದರೆ, ನಿಕೋಲಾ ಕ್ಯಾರಿ 29 ಎಸೆತಗಳಲ್ಲಿ 40 ರನ್ ಗಳಿಸುವ ಮೂಲಕ ಮುಂಬೈ ತಂಡವನ್ನು 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 154 ರನ್ ಗಳಿಸಲು ಸಹಾಯ ಮಾಡಿದರು.

4 ವಿಕೆಟ್ ಉರುಳಿಸಿದ ಡಿ ಕ್ಲರ್ಕ್​

ಮತ್ತೊಂದೆಡೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಲಾರೆನ್ ಬೆಲ್ ಮಾರಕ ಬೌಲಿಂಗ್ ಮಾಡಿದರು. ಬೆಲ್ ನಾಲ್ಕು ಓವರ್ ಸ್ಪೆಲ್​ನಲ್ಲಿ ಕೇವಲ 14 ರನ್ ಬಿಟ್ಟುಕೊಟ್ಟಿದ್ದು, ಮಾತ್ರವಲ್ಲದೆ ಬರೋಬ್ಬರಿ 19 ಡಾಟ್ ಬಾಲ್ ಗಳನ್ನು ಎಸೆದು ಒಂದು ವಿಕೆಟ್ ಪಡೆದರು. ಏತನ್ಮಧ್ಯೆ , ನಾಡಿನ್ ಡಿ ಕ್ಲರ್ಕ್ ತಮ್ಮ ನಾಲ್ಕು ಓವರ್​ಗಳಲ್ಲಿ 26 ರನ್ ನೀಡಿ ನಾಲ್ಕು ವಿಕೆಟ್ ಪಡೆದರು. ಕನ್ನಡತಿ ಶ್ರೇಯಾಂಕ ಪಾಟೀಲ್ ಕೂಡ ಒಂದು ವಿಕೆಟ್ ಪಡೆದರು.

ನಡಿನ್ ಡಿ ಕ್ಲರ್ಕ್ ಗೆಲುವಿನ ಅರ್ಧಶತಕ

155 ರನ್​ಗಳ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಆರಂಭ ಪಡೆದುಕೊಂಡಿತು. ಗ್ರೇಸ್ ಹ್ಯಾರಿಸ್ ಮತ್ತು ನಾಯಕಿ ಸ್ಮೃತಿ ಮಂಧಾನ ಮೊದಲ ವಿಕೆಟ್​ಗೆ 3.5 ಓವರ್​ಗಳಲ್ಲಿ 40 ರನ್ ಕಲೆಹಾಕಿದರು. ಆದರೆ ಈ ಜೋಡಿ ಪೆವಿಲಿಯನ್ ಸೇರಿಕೊಂಡ ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್​​ಗಳಿಗೆ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ಉಳಿಯಲಿಲ್ಲ. ಹೀಗಾಗಿ ಆರ್​ಸಿಬಿ 121 ರನ್​ಗಳಿಗೆ 7 ವಿಕೆಟ್​ಗಳನ್ನು ಕಳೆದುಕೊಂಡಿತು. ಇದರಿಂದ ಪಂದ್ಯವು ಆರ್​ಸಿಬಿ ಹಿಡಿತದಿಂದ ಜಾರುವಂತೆ ತೋರುತ್ತಿತ್ತು. ಆದಾಗ್ಯೂ, ತಂಡದ ಪರ ಬ್ಯಾಟಿಂಗ್​ನಲ್ಲೂ ಏಕಾಂಗಿ ಹೋರಾಟ ನೀಡಿದ ನಡಿನ್ ಡಿ ಕ್ಲರ್ಕ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ನಡಿನ್ ಡಿ ಕ್ಲರ್ಕ್ 44 ಎಸೆತಗಳಲ್ಲಿ 63 ರನ್ ಗಳಿಸಿ ಆರ್​ಸಿಬಿಯನ್ನು ಗೆಲುವಿನತ್ತ ಕೊಂಡೊಯ್ದರು.

WPL 2026: 6,4,6,4..! ಕೊನೆಯ ಓವರ್​ನಲ್ಲಿ ಪಂದ್ಯ ಗೆಲ್ಲಿಸಿದ ನಡಿನ್ ಡಿ ಕ್ಲರ್ಕ್; ವಿಡಿಯೋ ನೋಡಿ

ಕೊನೆಯ ಓವರ್ ರೋಚಕತೆ

ಕೊನೆಯ ಎರಡು ಓವರ್‌ಗಳಲ್ಲಿ ಆರ್‌ಸಿಬಿ ಗೆಲುವಿಗೆ 29 ರನ್‌ಗಳ ಅಗತ್ಯವಿತ್ತು. 19 ನೇ ಓವರ್‌ನಲ್ಲಿ ನಡಿನ್ ಡಿ ಕ್ಲರ್ಕ್ ಮತ್ತು ಪ್ರೇಮಾ ರಾವತ್ ಜೊತೆಯಾಗಿ 11 ರನ್ ಕಲೆಹಾಕಿದರು. ಹೀಗಾಗಿ ಕೊನೆಯ ಓವರ್‌ನಲ್ಲಿ ಆರ್​ಸಿಬಿ ಗೆಲುವಿಗೆ 18 ರನ್ ಬೇಕಾಗಿದ್ದವು. ನ್ಯಾಟ್ ಸಿವರ್-ಬ್ರಂಟ್ ಎಸೆದ ಈ ಓವರ್​ನ ಮೊದಲ 2 ಎಸೆತಗಳಲ್ಲಿ ಕ್ಲರ್ಕ್​ಗೆ ಯಾವುದೇ ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ಆದರೆ ಉಳಿದ 4 ಎಸೆತಗಳಲ್ಲಿ ಕ್ಲರ್ಕ್​ ಕ್ರಮವಾಗಿ 6,4,6,4 ಬಾರಿಸಿ ಮುಂಬೈ ತಂಡದಿಂದ ಜಯವನ್ನು ಕಸಿದುಕೊಂಡರು. ನಾಡಿನ್ ಡಿ ಕ್ಲರ್ಕ್ ತಮ್ಮ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:15 pm, Fri, 9 January 26

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ