WPL 2026: ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಟಾಸ್ ಸೋತ ಆರ್​ಸಿಬಿ

RCB vs Gujarat Giants: ಮಹಿಳಾ ಪ್ರೀಮಿಯರ್ ಲೀಗ್‌ನ 9ನೇ ಪಂದ್ಯದಲ್ಲಿ RCB ಮತ್ತು ಗುಜರಾತ್ ಜೈಂಟ್ಸ್ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಕಾದಾಡಲಿವೆ. ಗುಜರಾತ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಈ ಪಂದ್ಯದಲ್ಲಿ ಮಾಜಿ ಆರ್‌ಸಿಬಿ ಆಟಗಾರ್ತಿಯರು ಗುಜರಾತ್ ಪರ ಆಡುತ್ತಿರುವುದು ವಿಶೇಷ. ಗೆಲುವಿನ ಓಟ ಮುಂದುವರಿಸಲು ಉಭಯ ತಂಡಗಳು ಸಜ್ಜಾಗಿವೆ.

WPL 2026: ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಟಾಸ್ ಸೋತ ಆರ್​ಸಿಬಿ
Rcb Vs Gg
Edited By:

Updated on: Jan 16, 2026 | 7:20 PM

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ಒಂಬತ್ತನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ (RCB vs Gujarat Giants) ನಡುವೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲೀಗ್​ನಲ್ಲಿ ಇದುವರೆಗೆ 2 ಪಂದ್ಯಗಳನ್ನಾಡಿರುವ ಆರ್‌ಸಿಬಿ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದ್ದರೆ, ಇತ್ತ ಗುಜರಾತ್ ಜೈಂಟ್ಸ್ ಕೂಡ ತನ್ನ ಮೂರನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಆರ್​ಸಿಬಿ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಗಳವೂ ಹೊರಬಿದ್ದಿದ್ದು, ಆರ್​ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅಂದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಟಗಾರ್ತಿಯರೇ ಈ ಪಂದ್ಯದಲ್ಲಿ ಆಡಲಿದ್ದಾರೆ.

ಟಾಸ್ ಗೆದ್ದ ಗುಜರಾತ್

ಮೇಲೆ ಹೇಳಿದಂತೆ ಟಾಸ್ ಗೆದ್ದ ಗುಜರಾತ್ ನಾಯಕಿ ಬೆತ್ ಮೂನಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಆದ್ದರಿಂದ, ಮಂಧಾನ ನೇತೃತ್ವದ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಈ ಆವೃತ್ತಿಯಲ್ಲಿ ಆರ್​ಸಿಬಿ ಇದೇ ಮೊದಲ ಬಾರಿಗೆ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಇದು ಮಾತ್ರವಲ್ಲದೆ ಇಂದಿನ ಪಂದ್ಯ ಆರ್​ಸಿಬಿ vs ಮಾಜಿ ಆರ್​ಸಿಬಿ ಆಟಗಾರ್ತಿಯರ ನಡುವೆ ಕದನವಾಗಿದೆ. ಏಕೆಂದರೆ ಗುಜರಾತ್ ಜೈಂಟ್ಸ್ ತಂಡದಲ್ಲಿ ನಾಲ್ವರು ಮಾಜಿ ಆರ್​ಸಿಬಿ ಆಟಗಾರ್ತಿಯರಿದ್ದಾರೆ. ಅವರಲ್ಲಿ ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್, ಕನಿಕಾ ಅಹುಜಾ, ರೇಣುಕಾ ಸಿಂಗ್ ಠಾಕೂರ್ ಸೇರಿದ್ದಾರೆ. ಈ ನಾಲ್ವರು ಮಾತ್ರವಲ್ಲದೆ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಕೂಡ ಗುಜರಾತ್ ತಂಡದಲ್ಲಿ ಆಡುತ್ತಿದ್ದಾರೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ (ನಾಯಕಿ), ದಯಾಲನ್ ಹೇಮಲತಾ, ಗೌತಮಿ ನಾಯಕ್, ರಿಚಾ ಘೋಷ್ (ವಿಕೆಟ್ ಕೀಪರ್), ರಾಧಾ ಯಾದವ್, ನಡಿನ್ ಡಿ ಕ್ಲರ್ಕ್, ಅರುಂಧತಿ ರೆಡ್ಡಿ, ಶ್ರೇಯಾಂಕಾ ಪಾಟೀಲ್, ಲಿನ್ಸೆ ಸ್ಮಿತ್, ಲಾರೆನ್ ಬೆಲ್.

ಗುಜರಾತ್ ಜೈಂಟ್ಸ್ ಪ್ಲೇಯಿಂಗ್ XI: ಬೆತ್ ಮೂನಿ (ವಿಕೆಟ್ ಕೀಪರ್), ಸೋಫಿ ಡಿವೈನ್, ಆಶ್ಲೀಗ್ ಗಾರ್ಡ್ನರ್ (ನಾಯಕಿ), ಶಿವಾನಿ ಸಿಂಗ್, ಜಾರ್ಜಿಯಾ ವೇರ್ಹ್ಯಾಮ್, ಕನಿಕಾ ಅಹುಜಾ, ಭಾರತಿ ಫುಲ್ಮಾಲಿ, ಕಶ್ವಿ ಗೌತಮ್, ತನುಜಾ ಕನ್ವರ್, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಸಿಂಗ್ ಠಾಕೂರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:18 pm, Fri, 16 January 26