
ಮಹಿಳಾ ಪ್ರೀಮಿಯರ್ ಲೀಗ್ (Women’s Premier League) 2026 ರ 16 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಮುಂಬೈ ಇಂಡಿಯನ್ಸ್ (RCB vs MI) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯವೂ ವಡೋದರಾದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಗೆಲುವು ನಿರ್ಣಾಯಕವಾಗಿದೆ. ಇತ್ತ ಆರ್ಸಿಬಿಗೂ ಈ ಪಂದ್ಯದ ಗೆಲುವು ಅವಶ್ಯಕವಾಗಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ, ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಇತ್ತ ಮುಂಬೈ ಗೆದ್ದರೆ, ಅದರ ಫ್ಲೇ ಆಫ್ ಕನಸು ಜೀವಂತವಾಗಿರಲಿದೆ. ಮುಂಬೈ ಇಂಡಿಯನ್ಸ್ ತಂಡ ಇದುವರೆಗೆ ಆರು ಪಂದ್ಯಗಳನ್ನು ಆಡಿದ್ದು, ಕೇವಲ ಎರಡರಲ್ಲಿ ಗೆದ್ದು ನಾಲ್ಕರಲ್ಲಿ ಸೋತಿದೆ. ಮತ್ತೊಂದೆಡೆ, ಆರ್‌ಸಿಬಿ ಆಡಿರುವ 6 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದಿದ್ದು, ತನ್ನ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲ ಸೋಲನ್ನು ಅನುಭವಿಸಿತ್ತು.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದುವರೆಗೆ ನಡೆದಿರುವ ಪಂದ್ಯಗಳಲ್ಲಿ ಟಾಸ್ ಗೆದ್ದ ಎಲ್ಲರೂ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗಲಿದೆ. ಹೀಗಾಗಿಯೇ ಸ್ಮೃತಿ ಮಂಧಾನ ಕೂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಆ ಪ್ರಕಾರ, ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇತ್ತ ಮುಂಬೈ ತಂಡದಲ್ಲಿ 1 ಬದಲಾವಣೆ ಮಾಡಲಾಗಿದೆ.
🚨 Toss 🚨@RCBTweets won the toss and elected to field against @mipaltan
Updates ▶️ https://t.co/yUHXkzVIZw #TATAWPL | #KhelEmotionKa | #RCBvMI pic.twitter.com/F1ua7KVyxm
— Women's Premier League (WPL) (@wplt20) January 26, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ (ನಾಯಕಿ), ಜಾರ್ಜಿಯಾ ವೋಲ್, ಗೌತಮಿ ನಾಯಕ್, ರಿಚಾ ಘೋಷ್ (ವಿಕೆಟ್ ಕೀಪರ್), ರಾಧಾ ಯಾದವ್, ನಡಿನ್ ಡಿ ಕ್ಲರ್ಕ್, ಅರುಂಧತಿ ರೆಡ್ಡಿ, ಸಯಾಲಿ ಸತ್ಘರೆ, ಶ್ರೇಯಾಂಕಾ ಪಾಟೀಲ್ ಮತ್ತು ಲಾರೆನ್ ಬೆಲ್.
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಸಜನಾ ಸಜೀವನ್, ಹೇಲಿ ಮ್ಯಾಥ್ಯೂಸ್, ನ್ಯಾಟ್ ಸ್ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್ (ನಿಕೋಲಾ ಕ್ಯಾರಿ ಬದಲಿಗೆ), ಅಮಾನ್ಜೋತ್ ಕೌರ್, ಸಂಸ್ಕೃತಿ ಗುಪ್ತಾ, ರಾಹಿಲಾ ಫಿರ್ದೌಸ್ (ವಿಕೆಟ್ ಕೀಪರ್), ಪೂನಮ್ ಖೇಮ್ನಾರ್, ಶಬ್ನಿಮ್ ಇಸ್ಮಾಯಿಲ್, ಮತ್ತು ವೈಷ್ಣವಿ ಶರ್ಮಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:17 pm, Mon, 26 January 26