AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಆಟಗಾರ್ತಿಯರನ್ನು ಹೊರಹಾಕಿದ ಆರ್​ಸಿಬಿ; ಉಳಿದ ತಂಡಗಳ ವಿವರ ಇಂತಿದೆ

2027ರ ಮಹಿಳಾ ಪ್ರೀಮಿಯರ್ ಲೀಗ್ ಜನವರಿ 14 ರಿಂದ ಫೆಬ್ರವರಿ 7 ರವರೆಗೆ ನಡೆಯಲಿದೆ. ಅದಕ್ಕೂ ಮೊದಲು ಅಕ್ಟೋಬರ್ 28ರಂದು ಕೊಚ್ಚಿಯಲ್ಲಿ ಮಿನಿ ಹರಾಜು ನಡೆಯಲಿದೆ. ಇಂದು (ಸೆಪ್ಟೆಂಬರ್ 28) ಐದು ಫ್ರಾಂಚೈಸಿಗಳು ತಾವು ಉಳಿಸಿಕೊಂಡ ಮತ್ತು ಬಿಡುಗಡೆ ಮಾಡಿದ ಆಟಗಾರ್ತಿಯರ ಪಟ್ಟಿಯನ್ನು ಪ್ರಕಟಿಸಿವೆ. ಆರ್‌ಸಿಬಿ ನಾಲ್ವರನ್ನು ಬಿಡುಗಡೆ ಮಾಡಿದರೆ, ಮುಂಬೈ ಇಂಡಿಯನ್ಸ್ ಆರು ಆಟಗಾರ್ತಿಯರನ್ನು ಕೈಬಿಟ್ಟಿದೆ. ಎಲಿಸ್ ಪೆರ್ರಿ ಆರ್‌ಸಿಬಿಯಲ್ಲಿ ಮುಂದುವರಿಯಲಿದ್ದಾರೆ.

4 ಆಟಗಾರ್ತಿಯರನ್ನು ಹೊರಹಾಕಿದ ಆರ್​ಸಿಬಿ; ಉಳಿದ ತಂಡಗಳ ವಿವರ ಇಂತಿದೆ
ಡಬ್ಲ್ಯೂಪಿಎಲ್ 2027
ಪೃಥ್ವಿಶಂಕರ
|

Updated on:Sep 28, 2026 | 5:56 PM

Share

2027ರ ಮಹಿಳಾ ಪ್ರೀಮಿಯರ್ ಲೀಗ್ ಅನ್ನು ಜನವರಿ 14 ರಿಂದ ಫೆಬ್ರವರಿ 7 ರವರೆಗೆ ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಆದರೆ ಅದಕ್ಕೂ ಮೊದಲು ಮಿನಿ ಹರಾಜು ನಡೆಯಬೇಕಿದೆ. ಕೆಲವೇ ದಿನಗಳ ಹಿಂದೆ ಬಿಸಿಸಿಐ, ಡಬ್ಲ್ಯೂಪಿಎಲ್ ಮಿನಿ ಹರಾಜಿನ ಬಗ್ಗೆ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿತ್ತು. ಅದರಂತೆ ಅಕ್ಟೋಬರ್ 28 ರಂದು ಕೇರಳದ ಕೊಚ್ಚಿಯಲ್ಲಿ ಈ ಮಿನಿ ಹರಾಜು ನಡೆಸುವುದಾಗಿ ಬಿಸಿಸಿಐ ಹೇಳಿತ್ತು. ಹೀಗಾಗಿ ಎಲ್ಲಾ ಐದು ಫ್ರಾಂಚೈಸಿಗಳು ಮಿನಿ ಹರಾಜಿಗೂ ಮುನ್ನ ತಂಡದಲ್ಲಿ ಉಳಿಸಿಕೊಂಡ ಹಾಗೂ ಬಿಡುಗಡೆ ಮಾಡಿದ ಆಟಗಾರ್ತಿಯರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಬೇಕಿತ್ತು. ಆ ಪ್ರಕಾರ, ಇಂದು ಅಂದರೆ ಸೆಪ್ಟೆಂಬರ್ 28 ರಂದು ಎಲ್ಲಾ ಐದು ಫ್ರಾಂಚೈಸಿಗಳು ತಮ್ಮ ತಂಡದಿಂದ ಬಿಡುಗಡೆ ಮಾಡಿದ ಹಾಗೂ ಉಳಿಸಿಕೊಂಡ ಆಟಗಾರ್ತಿಯರ ಪಟ್ಟಿಯನ್ನು ಪ್ರಕಟಿಸಿವೆ.

ಆರ್​ಸಿಬಿಯಿಂದ ನಾಲ್ವರು ಔಟ್

ಹಾಲಿ ಚಾಂಪಿಯನ್ ಆರ್‌ಸಿಬಿ ನಾಲ್ವರು ಆಟಗಾರ್ತಿಯರನ್ನು ತಂಡದಿಂದ ಬಿಡುಗಡೆ ಮಾಡಿದ್ದರೆ, ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಆರು ಆಟಗಾರ್ತಿಯರನ್ನು ಕೈಬಿಟ್ಟಿದೆ. ಇನ್ನು ಆರ್​ಸಿಬಿ ತಂಡದಿಂದ ಹೊರಬಿದ್ದ ಆಟಗಾರ್ತಿಯರು ಯಾರು ಎಂಬುದನ್ನು ನೋಡುವುದಾದರೆ.. ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಗ್ರೇಸ್ ಹ್ಯಾರಿಸ್, ಲಿನ್ಸೆ ಸ್ಮಿತ್, ಹೇಮಲತಾ ಮತ್ತು ಗೌತಮಿ ನಾಯಕ್ ಅವರನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೆ ಸಮಾಧಾನಕರ ಸುದ್ದಿ ಎಂದರೆ ಕಳೆದ ಆವೃತ್ತಿಯಲ್ಲಿ ವೈಯಕ್ತಿಕ ಕಾರಣಗಳನ್ನು ನೀಡಿ ಡಬ್ಲ್ಯೂಪಿಎಲ್​ನಿಂದ ಹಿಂದೆ ಸರಿದಿದ್ದ ಸ್ಟಾರ್ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಈ ಆವೃತ್ತಿಯಲ್ಲಿ ಆಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಆರ್​ಸಿಬಿ ಅವರನ್ನು ತಂಡದಲ್ಲೇ ಉಳಿಸಿಕೊಂಡಿದೆ.

9 ಆಟಗಾರ್ತಿಯರನ್ನು ಕೈಬಿಟ್ಟ ಯುಪಿ

ಗುಜರಾತ್ ಜೈಂಟ್ಸ್ ತಂಡದಿಂದ ಡ್ಯಾನಿ ವ್ಯಾಟ್-ಹಾಡ್ಜ್, ಆಯುಷಿ ಸೋನಿ, ಟೈಟಾಸ್ ಸಾಧು ಮತ್ತು ಶಿವಾನಿ ಸಿಂಗ್ ಹೊರಬಿದ್ದಿದ್ದಾರೆ. ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಲಾ ಆರು ಆಟಗಾರ್ತಿಯರನ್ನು ತಂಡದಿಂದ ಬಿಡುಗಡೆ ಮಾಡಿವೆ. ಯುಪಿ ವಾರಿಯರ್ಸ್ ತಂಡವು ಶ್ವೇತಾ ಸೆಹ್ರಾವತ್ ಸೇರಿದಂತೆ ಒಂಬತ್ತು ಆಟಗಾರ್ತಿಯರನ್ನು ಬಿಡುಗಡೆ ಮಾಡಿದೆ. ಜೆಮಿಮಾ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಲಾನಾ ಕಿಂಗ್, ಲಿಜೆಲ್ಲೆ ಲೀ, ಪ್ರಗತಿ ಸಿಂಗ್, ಸ್ನೇಹ್ ರಾಣಾ ಮತ್ತು ತಾನಿಯಾ ಭಾಟಿಯಾ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ.

ಅಕ್ಟೋಬರ್ 28 ರಂದು ಹರಾಜು

ಮುಂದಿನ ವರ್ಷದ ಮಹಿಳಾ ಪ್ರೀಮಿಯರ್ ಲೀಗ್ ಜನವರಿ 14 ರಂದು ಆರಂಭವಾಗಲಿದ್ದು, ಫೆಬ್ರವರಿ 9 ರವರೆಗೆ ನಡೆಯಲಿದೆ. ಅದಕ್ಕೂ ಮುನ್ನ, ಅಕ್ಟೋಬರ್ 28 ರಂದು ಕೊಚ್ಚಿಯಲ್ಲಿ ಆಟಗಾರ್ತಿಯರ ಹರಾಜು ನಡೆಯಲಿದೆ. ಆ ಹರಾಜಿನಲ್ಲಿ ಇಂದು ಖಾಲಿಯಾಗಿರುವ ಸ್ಥಾನಗಳನ್ನು ತುಂಬುವ ಕೆಲಸವನ್ನು ಎಲ್ಲಾ ಫ್ರಾಂಚೈಸಿಗಳು ಮಾಡಲಿವೆ. ಇನ್ನು ಇಂದು ಬಿಡುಗಡೆಯಾದ ಆಟಗಾರ್ತಿಯರು ಕೂಡ ಹರಾಜಿನಲ್ಲಿ ಮತ್ತೆ ಭಾಗವಹಿಸಲಿದ್ದು, ಅವರು ಹೊಸ ತಂಡವನ್ನು ಸೇರುವ ಸಾಧ್ಯತೆಯಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Mon, 28 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ