AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs DC: ಆರ್​ಸಿಬಿ ಎದುರು ಐವರು ವಿದೇಶಿ ಆಟಗಾರ್ತಿಯರನ್ನು ಕಣಕ್ಕಿಳಿಸಿದ ಡೆಲ್ಲಿ; ನಿಯಮ ಹೇಳುವುದೇನು?

WPL 2025: ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ವಿರುದ್ಧದ ಪಂದ್ಯದಲ್ಲಿ ಐದು ವಿದೇಶಿ ಆಟಗಾರ್ತಿಯರನ್ನು ಆಡಿಸಿದೆ. ಇದು ನಿಯಮಗಳ ಉಲ್ಲಂಘನೆಯಲ್ಲ, ಏಕೆಂದರೆ ಡಬ್ಲ್ಯೂಪಿಎಲ್ ನಿಯಮದ ಪ್ರಕಾರ ಐದು ವಿದೇಶಿ ಆಟಗಾರ್ತಿಯರನ್ನು ಆಡಿಸಬಹುದು. ಆದರೆ ಅದರಲ್ಲಿ ಒಬ್ಬರು ಅಸೋಸಿಯೇಟ್ ರಾಷ್ಟ್ರದ ಆಟಗಾರ್ತಿಯಾಗಿರಬೇಕು.

RCB vs DC: ಆರ್​ಸಿಬಿ ಎದುರು ಐವರು ವಿದೇಶಿ ಆಟಗಾರ್ತಿಯರನ್ನು ಕಣಕ್ಕಿಳಿಸಿದ ಡೆಲ್ಲಿ; ನಿಯಮ ಹೇಳುವುದೇನು?
ಆರ್​ಸಿಬಿ- ಡೆಲ್ಲಿ ಕ್ಯಾಪಿಟಲ್ಸ್
ಪೃಥ್ವಿಶಂಕರ
|

Updated on: Feb 17, 2025 | 9:32 PM

Share

ಮೂರನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ವಡೋದರಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಆದರೆ ಅದಕ್ಕೂ ಮುನ್ನ ಡೆಲ್ಲಿ ತಂಡ ತನ್ನ ಪ್ಲೇಯಿಂಗ್ 11 ಬಗ್ಗೆ ತೆಗೆದುಕೊಂಡಿರುವ ಒಂದು ನಿರ್ಧಾರ ಎಲ್ಲರನ್ನೂ ಅಚ್ಚರಿಗೊಳಿಸಿದೆ. ವಾಸ್ತವವಾಗಿ, ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯಕ್ಕಾಗಿ ತನ್ನ ಆಡುವ 11 ರ ಬಳಗದಲ್ಲಿ ಒಟ್ಟು ಐವರು ವಿದೇಶಿ ಆಟಗಾರ್ತಿಯರನ್ನು ಸೇರಿಸಿಕೊಂಡಿದೆ. ಐಪಿಎಲ್ ಮತ್ತು ಡಬ್ಲ್ಯೂಪಿಎಲ್‌ನಲ್ಲಿ ಸಾಮಾನ್ಯವಾಗಿ ಆಡುವ 11 ರಲ್ಲಿ 4 ವಿದೇಶಿ ಆಟಗಾರ್ತಿಯರಿರಬೇಕು ಎಂಬ ನಿಯಮವಿದೆ. ಇಂತಹ ಪರಿಸ್ಥಿತಿಯಲ್ಲಿ, ಡೆಲ್ಲಿ ಹೇಗೆ ಐವರು ವಿದೇಶಿ ಆಟಗಾರ್ತಿಯರನ್ನು ಕಣಕ್ಕಿಳಿಸಿದೆ? ಇದು ನಿಯಮಗಳ ಉಲ್ಲಂಘನೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

5 ಐವರು ವಿದೇಶಿ ಆಟಗಾರ್ತಿರು

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಈ ಪಂದ್ಯಕ್ಕಾಗಿ, ದೆಹಲಿ ತಂಡವು ಮೆಗ್ ಲ್ಯಾನಿಂಗ್, ಮರಿಜಾನ್ನೆ ಕಪ್, ಅನ್ನಾಬೆಲ್ ಸದರ್ಲ್ಯಾಂಡ್, ಜೆಸ್ ಜೊನಾಸ್ಸೆನ್ ಮತ್ತು ಸಾರಾ ಬ್ರೈಸ್ ಅವರನ್ನು ತಮ್ಮ ಪ್ಲೇಯಿಂಗ್ 11 ರಲ್ಲಿ ವಿದೇಶಿ ಆಟಗಾರ್ತಿಯರನ್ನಾಗಿ ಸೇರಿಸಿಕೊಂಡಿದೆ. ಆಡುವ ಹನ್ನೊಂದರ ಬಳಗದಲ್ಲಿ ಕೇವಲ 4 ವಿದೇಶಿಯರಿರಬೇಕು ಎಂಬ ನಿಯಮವಿರುವಾಗ ಡೆಲ್ಲಿ ತಂಡ ಐವರು ಆಟಗಾರ್ತಿಯರನ್ನು ಕಣಕ್ಕಿಳಿಸಿದ್ದಾದರೂ ಹೇಗೆ ಎಂಬುದನ್ನು ನೋಡುವುದಾದರೆ…

ಡೆಲ್ಲಿ ತಂಡ ವಿಶೇಷ ನಿಯಮವನ್ನು ಬಳಸಿಕೊಳ್ಳುವ ಮೂಲಕ ಚಾಣಾಕ್ಷತೆ ಮೆರೆದಿದೆ. ವಾಸ್ತವವಾಗಿ, ಡಬ್ಲ್ಯೂಪಿಎಲ್‌ನಲ್ಲಿ ವಿದೇಶಿ ಆಟಗಾರ್ತಿಯರ ನಿಯಮಗಳು ಐಪಿಎಲ್​ನಲ್ಲಿರುವ ನಿಯಮಗಳಿಗಿಂತ ಭಿನ್ನವಾಗಿವೆ. ಡಬ್ಲ್ಯೂಪಿಎಲ್‌ನಲ್ಲಿ ಒಂದು ತಂಡವು ಐವರು ವಿದೇಶಿ ಆಟಗಾರ್ತಿಯರನ್ನು ಕಣಕ್ಕಿಳಿಸಲು ಅವಕಾಶ ನೀಡುವ ವಿಶೇಷ ನಿಯಮವಿದೆ. ಆ ನಿಯಮವೆಂದರೆ ಐವರು ಆಟಗಾರರ್ತಿಯರಲ್ಲಿ ಒಬ್ಬ ಆಟಗಾರ್ತಿ ಅಸೋಸಿಯೇಟ್ ದೇಶದಿಂದ ಬಂದಿರಬೇಕು.

ಅಸೋಸಿಯೇಟ್ ರಾಷ್ಟ್ರಗಳೆಂದರೇನು?

ಕ್ರಿಕೆಟ್‌ನಲ್ಲಿ ಐಸಿಸಿಯ ಪೂರ್ಣ ಸದಸ್ಯತ್ವ ಪಡೆಯದಿರದ ರಾಷ್ಟ್ರಗಳನ್ನು ಅಸೋಸಿಯೇಟ್ ರಾಷ್ಟ್ರಗಳೆಂದು ಕರೆಯಲಾಗುತ್ತದೆ. ಇದೀಗ ಡೆಲ್ಲಿ ಪರ ಕಣಕ್ಕಿಳಿದಿರುವ ಸಾರಾ ಬ್ರೈಸ್ ಸ್ಕಾಟ್ಲೆಂಡ್​​ ಆಟಗಾರ್ತಿಯಾಗಿರುವ ಕಾರಣ ಅವರನ್ನು ವಿದೇಶಿ ಆಟಗಾರ್ತಿಯರ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಅಂದರೆ, ಈ ಪಂದ್ಯದಲ್ಲಿ ಡೆಲ್ಲಿ ತಂಡವು 1 ಅಸೋಸಿಯೇಟ್ ದೇಶ ಮತ್ತು ನಾಲ್ಕು ಸದಸ್ಯ ರಾಷ್ಟ್ರಗಳ ಆಟಗಾರ್ತಿಯರನ್ನು ಕಣಕ್ಕಿಳಿಸಿದೆ. ಹೀಗಾಗಿ ಇದರಲ್ಲಿ ಯಾವುದೇ ನಿಯಮದ ಉಲ್ಲಂಘನೆಯಾಗಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್