AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಗುಜರಾತ್ ವಿರುದ್ಧ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಡೆಲ್ಲಿ; ಜಾರಿದ ಆರ್​ಸಿಬಿ

WPL 2025: ಬೆಂಗಳೂರಿನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ನ 10ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಜೈಂಟ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿದೆ. ಶಫಾಲಿ ವರ್ಮಾ (44) ಮತ್ತು ಜೆಸ್ ಜೊನಾಸ್ಸೆನ್ (52*) ಅವರ ಅದ್ಭುತ ಬ್ಯಾಟಿಂಗ್‌ನಿಂದ ದೆಹಲಿ ತಂಡ ಸುಲಭ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ದೆಹಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

WPL 2025: ಗುಜರಾತ್ ವಿರುದ್ಧ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಡೆಲ್ಲಿ; ಜಾರಿದ ಆರ್​ಸಿಬಿ
Delhi Capitals
ಪೃಥ್ವಿಶಂಕರ
|

Updated on: Feb 25, 2025 | 10:56 PM

Share

ಬೆಂಗಳೂರಿನಲ್ಲಿ ನಡೆದ ಡಬ್ಲ್ಯುಪಿಎಲ್​ನ 10 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು, ಗುಜರಾತ್ ಜೈಂಟ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಹಾಲಿ ಚಾಂಪಿಯನ್ ಆರ್​ಸಿಬಿ ಕುಸಿತ ಕಂಡಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ ಕೇವಲ 127 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಇನ್ನು 29 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

ಗುಜರಾತ್​ಗೆ ಆರಂಭದಲ್ಲೇ ಆಘಾತ

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಹೀಗಾಗಿ ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾದ ಗುಜರಾತ್ ಪವರ್‌ಪ್ಲೇನಲ್ಲಿ ನಾಲ್ಕು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಆ ಬಳಿಕವೂ ತಂಡ ನಿಗದಿತ ಅಂತರದಲ್ಲಿ ವಿಕೆಟ್ ಕಳೆದುಕೊಳ್ಳತ ಸಾಗಿತು. ತಂಡದ ಪರ 8ನೇ ಕ್ರಮಾಂಕದಲ್ಲಿ ಬಂದ ಭಾರತಿ ಫುಲ್ಮಾಲಿ 29 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ ಅಜೇಯ 40 ರನ್ ಗಳಿಸಿದರು. ಅಂತಿಮವಾಗಿ ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 127 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು.

ಶಫಾಲಿ-ಜೆಸ್ ಜೊತೆಯಾಟ

ಗುಜರಾತ್ ಜೈಂಟ್ಸ್ ನೀಡಿದ 128 ರನ್​ಗಳ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೂ ಆರಂಭಿಕ ಆಘಾತ ಎದುರಾಯಿತು. ನಾಯಕಿ ಮೆಗ್ ಲ್ಯಾನಿಂಗ್ ಕೇವಲ 3 ರನ್‌ಗಳಿಗೆ ಔಟಾದರು. ಆದರೆ ಶಫಾಲಿ ವರ್ಮಾ ಮತ್ತು ಜೆಸ್ ಜೊನಾಸ್ಸೆನ್ ಜೋಡಿ ಗುಜರಾತ್ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು. ಇವರಿಬ್ಬರು ಎರಡನೇ ವಿಕೆಟ್‌ಗೆ 74 ರನ್‌ಗಳ ಜೊತೆಯಾಟ ನೀಡಿದರು. ಶಫಾಲಿ ವರ್ಮಾ 27 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್‌ಗಳಿಂದ 44 ರನ್ ಗಳಿಸಿ ಔಟಾದರು.

ಜೆಸ್ ಜೊನಾಸ್ಸೆನ್ ಅರ್ಧಶತಕ

ಶಫಾಲಿ ವರ್ಮಾ ಔಟಾದ ನಂತರ, ಜೆಸ್ ಜೊನಾಸ್ಸೆನ್ ಮತ್ತು ಜೆಮಿಮಾ ರೊಡ್ರಿಗಸ್ ಇನ್ನಿಂಗ್ಸ್ ಜವಾಬ್ದಾರಿಯನ್ನು ವಹಿಸಿಕೊಂಡರು. ವಾಸ್ತವವಾಗಿ, ಜೆಸ್ ಒಂದು ಬದಿಯಲ್ಲಿ ಆಕ್ರಮಣಕಾರಿಯಾಗಿ ಆಡಿ 27 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ ಅರ್ಧಶತಕವನ್ನು ಪೂರೈಸಿದರು. ತಂಡಕ್ಕೆ 45 ಎಸೆತಗಳಲ್ಲಿ ಕೇವಲ 14 ರನ್‌ಗಳು ಬೇಕಾಗಿದ್ದಾಗ ಜೆಮಿಮಾ 9 ಎಸೆತಗಳಲ್ಲಿ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅಷ್ಟೊತ್ತಿಗಾಗಲೇ ಪಂದ್ಯ ದೆಹಲಿಯ ಪರವಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ