
ಮಹಿಳೆಯರ ಪ್ರೀಮಿಯರ್ ಲೀಗ್‌ನ (Women’s Premier League 2024 final) ಎರಡನೇ ಸೀಸನ್ ಅಂತಿಮ ಹಂತ ತಲುಪಿದೆ. ಲೀಗ್‌ನ ಫೈನಲ್ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Delhi Capitals vs Royal Challengers Bangalore) ನಡುವೆ ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಲೀಗ್ ಸುತ್ತಿನಲ್ಲಿ 8 ಪಂದ್ಯಗಳಲ್ಲಿ 6 ರಲ್ಲಿ ಜಯಗಳಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದ ಪಡೆದು ಸತತ ಎರಡನೇ ಬಾರಿಗೆ ಫೈನಲ್‌ಗೆ ಟಿಕೆಟ್ ಪಡೆದುಕೊಂಡಿದೆ. ಇತ್ತ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 5 ರನ್‌ಗಳ ಅಂತರದಿಂದ ಸೋಲಿಸಿದ ಆರ್ಸಿಬಿ ಇದೇ ಮೊದಲ ಬಾರಿಗೆ ಫೈನಲ್ ತಲುಪಿದೆ. ಕಳೆದ ಬಾರಿ ಡೆಲ್ಲಿ ಕ್ಯಾಪಿಟಲ್ಸ್‌ನ ಚಾಂಪಿಯನ್ ಕನಸನ್ನು ಮುಂಬೈ ಇಂಡಿಯನ್ಸ್ ಮುರಿದಿತ್ತು. ಹೀಗಾಗಿ ಈ ಬಾರಿ ಡೆಲ್ಲಿ ತಂಡದ ಕನಸನ್ನು ಭಗ್ನಗೊಳಿಸಲು ಆರ್ಸಿಬಿಗೆ ಸಾಧ್ಯವಾಗುತ್ತಾ ಎಂಬುದು ನಾಳೆಯಷ್ಟೇ ಗೊತ್ತಾಗಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಡಬ್ಲ್ಯುಪಿಎಲ್ ಫೈನಲ್ ಪಂದ್ಯ 17 ಮಾರ್ಚ್ 2024 ರಂದು ಅಂದರೆ ಭಾನುವಾರದಂದು ನಡೆಯಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಡಬ್ಲ್ಯುಪಿಎಲ್ ಫೈನಲ್ ಪಂದ್ಯವು ರಾತ್ರಿ 7.30 ಕ್ಕೆ ಪ್ರಾರಂಭವಾಗುತ್ತದೆ.
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಡಬ್ಲ್ಯುಪಿಎಲ್ ಫೈನಲ್ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ನೀವು ಸ್ಪೋರ್ಟ್ಸ್-18 ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಫೈನಲ್ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಡಬ್ಲ್ಯುಪಿಎಲ್ ಫೈನಲ್ ಪಂದ್ಯವನ್ನು ನೀವು Jio ಸಿನಿಮಾದಲ್ಲಿ ಮತ್ತು ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಮೇಘನಾ, ಇಂದ್ರಾಣಿ ರಾಯ್, ರಿಚಾ ಘೋಷ್, ದಿಶಾ ಕಸತ್, ಶುಭಾ ಸತೀಶ್, ಸಿಮ್ರಾನ್ ಭಾದೂರ್, ನಡಿನ್ ಡಿ ಕ್ಲರ್ಕ್, ಸೋಫಿ ಡಿವೈನ್, ಶ್ರೇಯಾಂಕಾ ಪಾಟೀಲ್, ಎಲ್ಲಿಸ್ ಪೆರ್ರಿ, ಏಕ್ತಾ ಬಿಶ್ತ್, ಕೇಟ್ ಕ್ರಾಸ್, ಸೋಫಿ ಮೊಲಿನೆಕ್ಸ್, ಶ್ರದ್ಧಾ ಪೋಖಾರ್ಕರ್, ರೇಣುಕಾ ಠಾಕೂರ್ ಸಿಂಗ್, ಜಾರ್ಜಿಯಾ, ಆಶಾ ಸೋಭಾನಾ.
ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ತಾನಿಯಾ ಭಾಟಿಯಾ, ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ಎಲಿಸ್ ಕ್ಯಾಪ್ಸೆ, ಮರಿಜನ್ ಕಪ್, ಶಿಖಾ ಪಾಂಡೆ, ಅನ್ನಾಬೆಲ್ ಸದರ್ಲ್ಯಾಂಡ್, ಜೆಸ್ ಜಾನ್ಸನ್, ಮಿನ್ನು ಮಣಿ, ಪೂನಂ ಯಾದವ್, ಅರುಂಧತಿ ರೆಡ್ಡಿ, ಟಿಟಾಸ್ ಸಾಧು, ರಾಧಾ ಯಾದವ್, ಅಶ್ವಿನಿ ಕುಮಾರಿ, ಅಪರ್ಣಾ ಮೊಂಡಲ್, ಸ್ನೇಹಾ ದೀಪ್ತಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ