AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2025: ಮುಂಬೈ- ಡೆಲ್ಲಿ ನಡುವೆ ಡಬ್ಲ್ಯುಪಿಎಲ್ ಫೈನಲ್; ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?

WPL Final 2025: ಮಹಿಳಾ ಪ್ರೀಮಿಯರ್ ಲೀಗ್ (WPL) ನ ಫೈನಲ್ ಪಂದ್ಯ ಮಾರ್ಚ್ 15 ರಂದು ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಫೈನಲ್‌ನಲ್ಲಿ ಭೇಟಿಯಾಗಲಿವೆ. ಇದು ಎರಡೂ ತಂಡಗಳ ನಡುವಿನ ಎರಡನೇ ಫೈನಲ್ ಮುಖಾಮುಖಿ. ಡೆಲ್ಲಿ ಕ್ಯಾಪಿಟಲ್ಸ್ ಮೂರನೇ ಬಾರಿ ಫೈನಲ್‌ಗೆ ತಲುಪಿದರೆ, ಮುಂಬೈ ಇಂಡಿಯನ್ಸ್ ಎರಡನೇ ಬಾರಿ ಫೈನಲ್ ಪ್ರವೇಶಿಸಿದೆ.

WPL 2025: ಮುಂಬೈ- ಡೆಲ್ಲಿ ನಡುವೆ ಡಬ್ಲ್ಯುಪಿಎಲ್ ಫೈನಲ್; ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?
Dc Vs Mi
Follow us
ಪೃಥ್ವಿಶಂಕರ
|

Updated on: Mar 14, 2025 | 10:39 PM

ಮಹಿಳಾ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯ ಮಾರ್ಚ್ 15 ರಂದು ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಮೂರನೇ ವರ್ಷ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಇತ್ತ ಮುಂಬೈ ಇಂಡಿಯನ್ಸ್ ತಂಡವು ಎಲಿಮಿನೇಟರ್ ಸುತ್ತಿನಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಫೈನಲ್ ತಲುಪಿದೆ. ಈ ಮೂಲಕ ಮುಂಬೈ ಎರಡನೇ ಬಾರಿಗೆ ಫೈನಲ್ ತಲುಪಿದ ಸಾಧನೆ ಮಾಡಿದೆ. ಅಲ್ಲದೆ, ಈ ಎರಡೂ ತಂಡಗಳು ಎರಡನೇ ಬಾರಿಗೆ ಫೈನಲ್ ಪಂದ್ಯದಲ್ಲಿ ಪರಸ್ಪರ ಎದುರಾಗಲಿವೆ. ಇದಕ್ಕೂ ಮೊದಲು, ಮುಂಬೈ ಇಂಡಿಯನ್ಸ್ ತಂಡವು ಮೊದಲ ಸೀಸನ್​ನಲ್ಲಿ ದೆಹಲಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಇದೀಗ ಎರಡನೇ ಫೈನಲ್​ ಮುಖಾಮುಖಿಯಲ್ಲಿ ಯಾವ ತಂಡ ಗೆಲ್ಲುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ನೇರ ಪ್ರಸಾರದ ವಿವರ ಹೀಗಿದೆ

ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಡಬ್ಲ್ಯುಪಿಎಲ್ ಫೈನಲ್ ಪಂದ್ಯ ಯಾವಾಗ ನಡೆಯಲ್ಲಿದೆ?

ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಡಬ್ಲ್ಯುಪಿಎಲ್ ಫೈನಲ್ ಪಂದ್ಯ ಮಾರ್ಚ್​ 15 ರಂದು ನಡೆಯಲ್ಲಿದೆ.

ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಡಬ್ಲ್ಯುಪಿಎಲ್ ಫೈನಲ್ ಪಂದ್ಯ ಎಲ್ಲಿ ನಡೆಯಲ್ಲಿದೆ?

ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಡಬ್ಲ್ಯುಪಿಎಲ್ ಫೈನಲ್ ಪಂದ್ಯ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಡಬ್ಲ್ಯುಪಿಎಲ್ ಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಡಬ್ಲ್ಯುಪಿಎಲ್ ಫೈನಲ್ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.

ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಡಬ್ಲ್ಯುಪಿಎಲ್ ಫೈನಲ್ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬೇಕು?

ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಡಬ್ಲ್ಯುಪಿಎಲ್ ಫೈನಲ್ ಪಂದ್ಯವನ್ನು ನೀವು ವಿವಿಧ ಭಾಷೆಗಳಲ್ಲಿ ಸ್ಪೋರ್ಟ್ಸ್ 18 ಚಾನೆಲ್‌ಗಳಲ್ಲಿ ವೀಕ್ಷಿಸಬಹುದು.

ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಡಬ್ಲ್ಯುಪಿಎಲ್ ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?

ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಡಬ್ಲ್ಯುಪಿಎಲ್ ಫೈನಲ್ ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಜೆಮಿಮಾ ರೋಡ್ರಿಗಸ್, ಶಫಾಲಿ ವರ್ಮಾ, ಸ್ನೇಹ ದೀಪ್ತಿ, ಆಲಿಸ್ ಕ್ಯಾಪ್ಸಿ, ಅನ್ನಾಬೆಲ್ ಸದರ್ಲ್ಯಾಂಡ್, ಅರುಂಧತಿ ರೆಡ್ಡಿ, ಜೆಸ್ ಜೊನಾಸ್ಸೆನ್, ಮರಿಜಾನ್ನೆ ಕಪ್, ಮಿನ್ನು ಮಣಿ, ನಲ್ಲಪುರೆಡ್ಡಿ ಚರಣಿ, ನಿಕಿ ಪ್ರಸಾದ್, ರಾಧಾ ಯಾದವ್, ಶಿಖಾ ಪಾಂಡೆ, ನಂದಿನಿ ಕಶ್ಯಪ್, ಸಾರಾ ಬ್ರೈಸ್ (ವಿಕೆಟ್ ಕೀಪರ್), ತಾನಿಯಾ ಭಾಟಿಯಾ, ಟೈಟಾಸ್ ಸಾಧು

ಮುಂಬೈ ಇಂಡಿಯನ್ಸ್ ಮಹಿಳಾ ತಂಡ: ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸ್ಕಿವರ್-ಬ್ರಂಟ್, ಹರ್ಮನ್ಪ್ರೀತ್ ಕೌರ್ (ನಾಯಕಿ), ಸಜೀವ್ ಸಜ್ನಾ, ಅಮೇಲಿಯಾ ಕೆರ್, ಅಮನ್‌ಜೋತ್ ಕೌರ್, ಜಿ ಕಮಲಿನಿ, ಸಂಸ್ಕೃತಿ ಗುಪ್ತಾ, ಶಬ್ನಿಮ್ ಇಸ್ಮಾಯಿಲ್, ಸೈಕಾ ಇಶಾಕ್, ಕ್ಲೋಯ್ ಡೆಕ್ಟ್ರಿನ್, ಕ್ಲೋಯ್ ನಕ್ಟ್ರಿನ್, ಕೆಲ್ಲರ್, ಜಿಂತಿಮಣಿ ಕಲಿತಾ, ಪರುಣಿಕಾ ಸಿಸೋಡಿಯಾ, ಅಮನ್‌ದೀಪ್ ಕೌರ್, ಅಕ್ಷಿತಾ ಮಹೇಶ್ವರಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ