AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2026: ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಮೊದಲ ಹ್ಯಾಟ್ರಿಕ್ ಗೆಲುವು ದಾಖಲಿಸಿದ ಆರ್​ಸಿಬಿ

RCB Dominates Gujarat Giants in WPL: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಜೈಂಟ್ಸ್ ವಿರುದ್ಧ 32 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದು ಆರ್​ಸಿಬಿ ತಂಡದ ಸತತ ಮೂರನೇ ಗೆಲುವಾಗಿದ್ದು, WPL ಇತಿಹಾಸದಲ್ಲಿ ಮೊದಲ ಮೂರು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ನಿರ್ಮಿಸಿದೆ. ಶ್ರೇಯಾಂಕ ಪಾಟೀಲ್ ಅವರ ಮಾರಕ ದಾಳಿ ಗುಜರಾತ್ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು.

WPL 2026: ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಮೊದಲ ಹ್ಯಾಟ್ರಿಕ್ ಗೆಲುವು ದಾಖಲಿಸಿದ ಆರ್​ಸಿಬಿ
Rcb Women
ಪೃಥ್ವಿಶಂಕರ
|

Updated on:Jan 16, 2026 | 11:30 PM

Share

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) 9ನೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ (RCB vs Gujarat Giants) ತಂಡಗಳು ಮುಖಾಮುಖಿಯಾದ್ದವು. ಬಲಿಷ್ಠ ತಂಡಗಳ ನಡುವಿನ ಈ ಕಾಳಗ ಸಾಕಷ್ಟು ಕುತೂಹಲ ಕೆರಳಿಸಿತ್ತು. ಅಂತಿಮವಾಗಿ ಸ್ಮೃತಿ ಮಂಧಾನ ಪಡೆ, ಗುಜರಾತ್ ತಂಡವನ್ನು ಮಣಿಸಿ ಈ ಆವೃತ್ತಿಯಲ್ಲಿ ಸತತ ಮೂರನೇ ಜಯ ದಾಖಲಿಸಿದೆ. ಈ ಮೂಲಕ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಆವೃತ್ತಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಆರ್​ಸಿಬಿ ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ 183 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಕನ್ನಡತಿ ಶ್ರೇಯಾಂಕ ಪಾಟೀಲ್ ಅವರ ಮಾರಕ ದಾಳಿಗೆ ನಲುಗಿ 150 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಆರ್​ಸಿಬಿ ಈ ಪಂದ್ಯವನ್ನು 32 ರನ್​ಗಳಿಂದ ಗೆದ್ದುಕೊಂಡಿತು.

ರಾಧಾ- ರಿಚ್ಚಾ ಸೂಪರ್ ಶೋ

ಈ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಇತ್ತ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡ ಕಳಪೆ ಆರಂಭವನ್ನೇ ಪಡೆಯಿತು. ಪವರ್‌ಪ್ಲೇನಲ್ಲಿ, ಆರ್‌ಸಿಬಿ ಕೇವಲ 45 ರನ್​ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ನಂತರ ರಾಧಾ ಯಾದವ್ ಮತ್ತು ರಿಚಾ ಘೋಷ್ ಐದನೇ ವಿಕೆಟ್‌ಗೆ ಅದ್ಭುತ ಪಾಲುದಾರಿಕೆಯನ್ನು ನಿರ್ಮಿಸಿದರು. ರಾಧಾ ಯಾದವ್ 47 ಎಸೆತಗಳಲ್ಲಿ 66 ರನ್ ಗಳಿಸಿದರೆ, ರಿಚಾ ಘೋಷ್ 28 ಎಸೆತಗಳಲ್ಲಿ 44 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಇಬ್ಬರು ಆಟಗಾರ್ತಿಯರು 66 ಎಸೆತಗಳಲ್ಲಿ ಐದನೇ ವಿಕೆಟ್‌ಗೆ 105 ರನ್ ಸೇರಿಸಿದರು. ನಂತರ ನಾಡಿನ್ ಡಿ ಕ್ಲರ್ಕ್ 12 ಎಸೆತಗಳಲ್ಲಿ 26 ರನ್ ಗಳಿಸಿದರು. ಈ ಮೂವರ ಆಟಗದಿಂದಾಗಿ ತಂಡದ ಸ್ಕೋರ್ 20 ಓವರ್‌ಗಳಲ್ಲಿ ಏಳು ವಿಕೆಟ್‌ಗಳಿಗೆ 182 ರನ್‌ಗಳಿಗೆ ತಲುಪಿತು. ಇತ್ತ ಗುಜರಾತ್ ಜೈಂಟ್ಸ್ ಪರ ಸೋಫಿ ಡಿವೈನ್ ಮೂರು ವಿಕೆಟ್ ಪಡೆದರೆ, ಕಾಶ್ವಿ ಗೌತಮ್ ಎರಡು ವಿಕೆಟ್ ಪಡೆದರು. ರೇಣುಕಾ ಸಿಂಗ್ ಮತ್ತು ಜಾರ್ಜಿಯಾ ವೇರ್ಹ್ಯಾಮ್ ಕೂಡ ತಲಾ ಒಂದು ವಿಕೆಟ್ ಪಡೆದರು.

5 ವಿಕೆಟ್ ಉರುಳಿಸಿದ ಶ್ರೇಯಾಂಕ

ಈ ಗುರಿ ಬೆನ್ನಟ್ಟಿದ ಗುಜರಾತ್ ಜೈಂಟ್ಸ್ ತಂಡವು ಉತ್ತಮ ಆರಂಭ ಪಡೆದುಕೊಂಡಿತು. ಆದಾಗ್ಯೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‌ಗಳು ಎದುರಾಳಿ ತಂಡದ ಬ್ಯಾಟರ್​ಗಳನ್ನು ಹೆಚ್ಚು ಹೊತ್ತು ನಿಯಂತ್ರಣದಲ್ಲಿಟ್ಟು ಪಂದ್ಯವನ್ನು ಗುಜರಾತ್‌ನಿಂದ ದೂರ ಸರಿಸಿದರು. ಈ ಅವಧಿಯಲ್ಲಿ ಶ್ರೇಯಾಂಕಾ ಪಾಟೀಲ್ ಅದ್ಭುತ ಬೌಲಿಂಗ್ ಮಾಡಿದರು. ಅವರು 3.5 ಓವರ್‌ಗಳಲ್ಲಿ ಕೇವಲ 23 ರನ್‌ಗಳನ್ನು ಬಿಟ್ಟುಕೊಟ್ಟು 5 ವಿಕೆಟ್‌ಗಳನ್ನು ಪಡೆದರು. ಪರಿಣಾಮವಾಗಿ, ಗುಜರಾತ್ 18.5 ಓವರ್‌ಗಳಲ್ಲಿ 150 ರನ್‌ಗಳಿಗೆ ಆಲೌಟ್ ಆಯಿತು, ಇದರಿಂದಾಗಿ ಆರ್‌ಸಿಬಿ ಪಂದ್ಯವನ್ನು 32 ರನ್‌ಗಳಿಂದ ಗೆದ್ದುಕೊಂಡಿತು.

6 ಬೌಂಡರಿ, 3 ಸಿಕ್ಸರ್‌, 66 ರನ್..! ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್

ಶ್ರೇಯಂಕಾ ಪಾಟೀಲ್ ಜೊತೆಗೆ, ಲಾರೆನ್ ಬೆಲ್ ಮತ್ತೊಮ್ಮೆ ಮಿಂಚಿದರು. ಈ ಪಂದ್ಯದಲ್ಲಿ, ಲಾರೆನ್ ಬೆಲ್ ತಮ್ಮ ನಾಲ್ಕು ಓವರ್‌ಗಳಲ್ಲಿ ಕೇವಲ 23 ರನ್‌ಗಳನ್ನು ಬಿಟ್ಟುಕೊಟ್ಟು ಮೂರು ವಿಕೆಟ್​ಗಳನ್ನು ಉರುಳಿಸಿದರು. ಅರುಂಧತಿ ರೆಡ್ಡಿ ಮತ್ತು ನಾಡಿನ್ ಡಿ ಕ್ಲರ್ಕ್ ಕೂಡ ತಲಾ ಒಂದು ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿಗೆ ಕೊಡುಗೆ ನೀಡಿದರು. ಪರಿಣಾಮವಾಗಿ, ಆರ್‌ಸಿಬಿ ಮೂರು ಗೆಲುವುಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:05 pm, Fri, 16 January 26

ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..
ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..
ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಅಧಿಕಾರಿ ಹೇಳಿದ್ದೇನು?
ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಅಧಿಕಾರಿ ಹೇಳಿದ್ದೇನು?
ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ
ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ
ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
ಇದು ಯಾವುದೋ ಜಾತ್ರೆಯಲ್ಲ: ಹೋರಿ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಕಣ್ಣೀರು
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ!
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?
ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು?