AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Final: ಆಸೀಸ್ 327-3: ಮೊದಲ ದಿನ ಯಶಸ್ಸು ಸಾಧಿಸಿದ ಆಸ್ಟ್ರೇಲಿಯಾ: ಕುತೂಹಲ ಕೆರಳಿಸಿದ ದ್ವಿತೀಯ ದಿನದಾಟ

WTC Final 2023: ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಕಾಂಗರೂ ಪಡೆಗೆ ಉತ್ತಮ ಆರಂಭ ಸಿಗಲಿಲ್ಲ. 4ನೇ ಓವರ್​ನ ಮೊಹಮ್ಮದ್ ಸಿರಾಜ್ ಬೌಲಿಂಗ್​ನಲ್ಲಿ ಉಸ್ಮಾನ್ ಖ್ವಾಜಾ ಸೊನ್ನೆಗೆ ನಿರ್ಗಮಿಸಿದರು.

IND vs AUS Final: ಆಸೀಸ್ 327-3: ಮೊದಲ ದಿನ ಯಶಸ್ಸು ಸಾಧಿಸಿದ ಆಸ್ಟ್ರೇಲಿಯಾ: ಕುತೂಹಲ ಕೆರಳಿಸಿದ ದ್ವಿತೀಯ ದಿನದಾಟ
Travis Head and Steve Smith
Vinay Bhat
|

Updated on:Jun 08, 2023 | 7:40 AM

Share

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಆರಂಭವಾಗಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ (WTC Final 2023) ಮೊದಲ ದಿನ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಯಶಸ್ಸು ಸಾಧಿಸಿದೆ. ಪಿಚ್ ಮರ್ಮವನ್ನು ಅರಿತು ಭಾರತೀಯ ಬೌಲರ್​ಗಳನ್ನು ದಿಟ್ಟವಾಗಿ ಎದುರಿಸಿದ ಕಾಂಗರೂ ಪಡೆ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 327 ರನ್ ಕಲೆಹಾಕಿ ದೊಡ್ಡ ಮೊತ್ತದ ಮುನ್ಸೂಚನೆ ನೀಡಿದೆ. ಟ್ರಾವಿಸ್ ಹೆಡ್ (Travis Head) ಸ್ಫೋಟಕ ಶತಕ ಸಿಡಿಸಿ ಕ್ರೀಸ್​ನಲ್ಲಿದ್ದರೆ ಸ್ಟೀವ್ ಸ್ಮಿತ್ ಶತಕದ ಅಂಚಿನಲ್ಲಿದ್ದಾರೆ. ಇಂದು ದ್ವಿತೀಯ ದಿನದಾಟ ಉಭಯ ತಂಡಗಳಿಗೆ (IND vs AUS) ಮುಖ್ಯವಾಗಿರುವ ಕಾರಣ ಕುತೂಹಲ ಕೆರಳಿಸಿದೆ.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಕಾಂಗರೂ ಪಡೆಗೆ ಉತ್ತಮ ಆರಂಭ ಸಿಗಲಿಲ್ಲ. 4ನೇ ಓವರ್​ನ ಮೊಹಮ್ಮದ್ ಸಿರಾಜ್ ಬೌಲಿಂಗ್​ನಲ್ಲಿ ಉಸ್ಮಾನ್ ಖ್ವಾಜಾ ಸೊನ್ನೆಗೆ ನಿರ್ಗಮಿಸಿದರು. ಈ ಸಂದರ್ಭ ಜೊತೆಯಾದ ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲಾಬುಶೇನ್ 69 ರನ್​ಗಳ ಜೊತೆಯಾಟ ಆಡಿದರಷ್ಟೆ. ಮಾರ್ನಸ್ 62 ಎಸೆತಗಳಲ್ಲಿ 26 ರನ್ ಗಳಿಸಿ ಶಮಿ ಬೌಲಿಂಗ್​ನಲ್ಲಿ ಬೌಲ್ಡ್ ಆದರೆ, ವಾರ್ನರ್ 60 ಎಸೆತಗಳಲ್ಲಿ 43 ರನ್ ಬಾರಿಸಿ ಶಾರ್ದೂಲ್ ಥಾಕೂರ್​ಗೆ ವಿಕೆಟ್ ಒಪ್ಪಿಸಿದರು.

Virat Kohli: ವಿರಾಟ್ ಕೊಹ್ಲಿಯನ್ನು ಶೂನ್ಯಕ್ಕೆ ಔಟ್ ಮಾಡುವುದೇ ನನ್ನ ಗುರಿ: ನಸೀಮ್ ಶಾ

ಇದನ್ನೂ ಓದಿ
Image
WTC Final: ತಂಡದಲ್ಲಿ ಅಶ್ವಿನ್​ಗಿಲ್ಲ ಸ್ಥಾನ…ರೋಹಿತ್ ಶರ್ಮಾ ವಿರುದ್ಧ ಸುನಿಲ್ ಗವಾಸ್ಕರ್ ಅಸಮಾಧಾನ..!
Image
ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ್ದು ಯಾರು ಗೊತ್ತೇ?
Image
Travis Head: ಟೀಮ್ ಇಂಡಿಯಾ ವಿರುದ್ಧ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಟ್ರಾವಿಸ್ ಹೆಡ್
Image
WTC Final 2023: ಡಬ್ಲ್ಯುಟಿಸಿ ಫೈನಲ್ ಪಂದ್ಯಗಳು ಇಂಗ್ಲೆಂಡ್‌ನಲ್ಲೇ ನಡೆಯುತ್ತಿರುವುದ್ಯಾಕೆ? ಇಲ್ಲಿದೆ ವಿವರ

ನಂತರ ಶುರುವಾಗಿದ್ದು ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಆಟ. ಆಕ್ರಮಣಕಾರಿ ಆಟದ ಮೂಲಕ ಆರಂಭದಿಂದಲೇ ಭಾರತಕ್ಕೆ ಎಚ್ಚರಿಕೆ ನೀಡಿದ ಹೆಡ್ ಅವರನ್ನು ಕಟ್ಟಿಹಾಕಲು ರೋಹಿತ್ ನಡೆಸಿದ ಪ್ರಯತ್ನಗಳೆಲ್ಲಾ ವಿಫಲವಾದವು. ಕೇವಲ 106 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ದಾಖಲೆ ಕೂಡ ಬರೆದರು. ಟೆಸ್ಟ್​ ಕ್ರಿಕೆಟ್​ನಲ್ಲಿ ತಮ್ಮ ಆರನೇ ಶತಕ ಬಾರಿಸಿದ ಹೆಡ್​ಗೆ ವಿದೇಶಿ ನೆಲದಲ್ಲಿ ಚೊಚ್ಚಲ ಸೆಂಚುರಿ ಇದಾಗಿದೆ. ಅಲ್ಲದೆ ಈ ಪ್ರತಿಷ್ಠಿತ ಫೈನಲ್ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಟ್ರೆವಿಸ್ ಪಡೆದುಕೊಂಡಿದ್ದಾರೆ.

ಹೆಡ್ (146) ಅವರಿಗೆ ಉತ್ತಮವಾಗಿ ಸಾಥ್ ನೀಡಿದ್ದು ಅನುಭವಿ ಆಟಗಾರ ಸ್ಟೀವ್ ಸ್ಮಿತ್ (95). ಈ ಜೋಡಿ ಈಗಾಗಲೇ ದ್ವಿಶತಕದ ಜೊತೆಯಾಟದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಈ ಪಂದ್ಯದ ಮೊದಲ ದಿನದಾಟದಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದಂತಾಗಿದೆ. ನಾಲ್ಕನೇ ವಿಕೆಟ್​ಗೆ ಇಬ್ಬರು ಬ್ಯಾಟರ್​ಗಳು 370 ಬಾಲ್​ಗಳಲ್ಲಿ 251 ರನ್​ಗಳ ಭರ್ಜರಿ ಜೊತೆಯಾಟ ನೀಡಿದರು. ಇಂಡಿಯಾ ಪರ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್​, ಮೊಹಮ್ಮದ್ ಶಮಿ ತಲಾ ಒಂದು ವಿಕೆಟ್​ ಪಡೆದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:39 am, Thu, 8 June 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ