WTC ಫೈನಲ್​ಗೇರಲು ಟೀಮ್ ಇಂಡಿಯಾ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WTC 2024: ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್​ ಆಡಲಿದೆ. ಅದರಂತೆ ಫೈನಲ್ ಪ್ರವೇಶಿಸುವ ತಂಡಗಳು ಮುಂದಿನ ವರ್ಷ ಜೂನ್ 11 ರಿಂದ 15 ರವರೆಗೆ ಇಂಗ್ಲೆಂಡ್​ನ ಲಾರ್ಡ್ಸ್ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ.

WTC ಫೈನಲ್​ಗೇರಲು ಟೀಮ್ ಇಂಡಿಯಾ ಇನ್ನೆಷ್ಟು ಪಂದ್ಯ ಗೆಲ್ಲಬೇಕು?
Team India
Follow us
ಝಾಹಿರ್ ಯೂಸುಫ್
|

Updated on:Oct 02, 2024 | 10:38 AM

ಬಾಂಗ್ಲಾದೇಶ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ತಂಡವು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಇದಾಗ್ಯೂ ಭಾರತ ತಂಡ WTC ಫೈನಲ್​ಗೆ ಅರ್ಹತೆ ಪಡೆದಿಲ್ಲ ಎಂಬುದು ವಿಶೇಷ.

ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ತಂಡವು ಇನ್ನೂ 8 ಪಂದ್ಯಗಳನ್ನಾಡಬೇಕಿದೆ. ಈ ಎಂಟು ಪಂದ್ಯಗಳ ಮೂಲಕ ಟೀಮ್ ಇಂಡಿಯಾದ ಫೈನಲ್​ ಅರ್ಹತೆ ನಿರ್ಧಾರವಾಗಲಿದೆ.

ಇಲ್ಲಿ ಭಾರತ ತಂಡವು ನ್ಯೂಝಿಲೆಂಡ್ ವಿರುದ್ಧ 3 ಟೆಸ್ಟ್​ ಪಂದ್ಯಗಳನ್ನಾಡಲಿದ್ದು, ಇದಾದ ಬಳಿಕ ಆಸ್ಟ್ರೇಲಿಯಾ ವಿರುದ್ಧ 5 ಟೆಸ್ಟ್ ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೂರ್ನಿ ಆಡಲಿದೆ. ಈ ಎಂಟು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ.

ಅಂದರೆ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿಕೊಂಡರೆ ಫೈನಲ್​ಗೆ ಅರ್ಹತೆಗಿಟ್ಟಿಸಿಕೊಳ್ಳುವುದು ಬಹುತೇಕ ಕನ್ಫರ್ಮ್​. ಹೀಗಾಗಿ ಭಾರತ ತಂಡದ ಪಾಲಿಗೆ ಮುಂದಿನ ಸರಣಿ ತುಂಬಾ ಮಹತ್ವದ್ದು.

ಟೀಮ್ ಇಂಡಿಯಾ WTC ಫೈನಲ್​ಗೆ ಅರ್ಹತೆ ಪಡೆಯುವುದೇಗೆ?

  • ಭಾರತವು ತವರಿನಲ್ಲಿ ನ್ಯೂಝಿಲೆಂಡ್ ಅನ್ನು ವೈಟ್‌ವಾಶ್ ಮಾಡಿ ಸರಣಿ ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಶೇ.70 ಕ್ಕಿಂತ ಹೆಚ್ಚು ಗೆಲುವಿನ ಶೇಕಡಾವಾರು ಕಾಯ್ದುಕೊಳ್ಳಬಹುದು. ಇದಾದ ಬಳಿಕ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ 2 ಮ್ಯಾಚ್ ಗೆದ್ದರೆ ಸಾಕು, ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಬಹುದು.
  • ಭಾರತ ತಂಡವು ನ್ಯೂಝಿಲೆಂಡ್ ಅನ್ನು 3-0 ರಿಂದ ಸೋಲಿಸಿದರೆ ಮತ್ತು ಆಸ್ಟ್ರೇಲಿಯಾ ವಿರುದ್ಧ 3-1 ಸೋತರೂ ಸಹ ಫೈನಲ್​ಗೆ ಅರ್ಹತೆಗಿಟ್ಟಿಸಿಕೊಳ್ಳಬಹುದು. ಏಕೆಂದರೆ ಆಸೀಸ್ ವಿರುದ್ಧ 3-1 ಅಂತರದಿಂದ ಸೋತರೆ ಟೀಮ್ ಇಂಡಿಯಾದ ಗೆಲುವಿನ ಶೇಕಡಾವಾರು 65.78% ಇರಲಿದ್ದು, ಈ ಮೂಲಕ ಫೈನಲ್​ಗೆ ಪ್ರವೇಶಿಸಬಹುದು.
  • ಒಂದು ವೇಳೆ ನ್ಯೂಝಿಲೆಂಡ್ ತಂಡವು ಟೀಮ್ ಇಂಡಿಯಾ ವಿರುದ್ಧ 3-0 ಅಂತರದಿಂದ ಜಯ ಸಾಧಿಸಿದರೆ, ಆಸ್ಟ್ರೇಲಿಯಾ ಭಾರತವನ್ನು 5-0 ಅಂತರದಿಂದ ಸೋಲಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಗೆಲುವಿನ ಶೇಕಡಾವಾರು 58.77% ಗೆ ಇಳಿಯಲಿದೆ. ಹೀಗಾದರೆ ಮಾತ್ರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ರೇಸ್​ನಿಂದ ಹೊರಬೀಳಲಿದೆ.
  • ಆದರೆ ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಶೇ. 74.24 ರಷ್ಟು ಗೆಲುವಿನ ಶೇಕಡಾವಾರು ಹೊಂದಿರುವ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ ಸರಣಿ ಗೆದ್ದು, ಆಸ್ಟ್ರೇಲಿಯಾ ವಿರುದ್ಧ ಸರಣಿ ಡ್ರಾ ಮಾಡಿಕೊಂಡರೂ ಫೈನಲ್​ಗೆ ಅರ್ಹತೆಗಿಟ್ಟಿಸಿಕೊಳ್ಳಬಹುದು. ಹೀಗಾಗಿ ಈ ಬಾರಿ ಕೂಡ ಭಾರತ ತಂಡವನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಎದುರು ನೋಡಬಹುದು.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿ:

ಸ್ಥಾನ ತಂಡ ಪಂದ್ಯಗಳು ಗೆಲುವು ಸೋಲು ಡ್ರಾ ಎನ್ಆರ್ ಅಂಕಗಳು ಗೆಲುವಿನ ಶೇಕಡಾವಾರು
1 ಭಾರತ 11 8 2 1 0 98 74.24
2 ಆಸ್ಟ್ರೇಲಿಯಾ 12 8 3 1 0 90 62.5
3 ಶ್ರೀಲಂಕಾ 9 5 4 0 0 60 55.56
4 ಇಂಗ್ಲೆಂಡ್ 16 8 7 1 0 81 42.19
5 ದಕ್ಷಿಣ ಆಫ್ರಿಕಾ 6 2 3 1 0 28 38.89
6 ನ್ಯೂಝಿಲೆಂಡ್ 8 3 5 0 0 36 37.5
7 ಬಾಂಗ್ಲಾದೇಶ್ 8 3 5 0 0 33 34.38
8 ಪಾಕಿಸ್ತಾನ್ 7 2 5 0 0 16 19.05
9 ವೆಸ್ಟ್ಇಂಡೀಸ್ 9 1 6 2 0 20 18.52

Published On - 10:35 am, Wed, 2 October 24